Arrested: ಕಾರ್ಮಿಕನ ಕೊಂದಿದ್ದ ಸ್ನೇಹಿತನ ಬಂಧನ
Team Udayavani, Oct 1, 2024, 10:13 AM IST
ಬೆಂಗಳೂರು: ಇತ್ತೀಚೆಗೆ ನಿರ್ಮಾಣ ಹಂತದ ಕಟ್ಟಡದಲ್ಲಿ ಮಲಗುವ ಜಾಗದ ವಿಚಾರಕ್ಕೆ ಕಾರ್ಮಿಕನ ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿ ಹಾಕಿ ಹತ್ಯೆಗೈದು ಪರಾರಿಯಾಗಿದ್ದ ಆರೋಪಿಯನ್ನು ಹನುಮಂತನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಗಿರಿನಗರದ ಕಸ್ತೂರಿ ಬಾ ಕಾಲೋನಿ ನಿವಾಸಿ ಹರೀಶ್ ಅಲಿಯಾಸ್ ಅಮಾವಾಸೆ (38) ಬಂಧಿತ. ಆರೋಪಿ ಸೆ.24ರಂದು ಮಧ್ಯಾಹ್ನ ಶ್ರೀನಗರದ 11ನೇ ಮುಖ್ಯರಸ್ತೆಯ ನಿರ್ಮಾಣ ಹಂತದ ಕಟ್ಟಡದಲ್ಲಿ ಅಜಿತ್ (27) ಎಂಬ ಕಾರ್ಮಿಕನ ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿಹಾಕಿ ಕೊಲೆಗೈದು ಪರಾರಿಯಾಗಿದ್ದ.
ಸೆ.24ರಂದು ಶ್ರೀನಗರದ ಡಾ.ನರೇಂದ್ರ ಕುಮಾರ್ ಎಂಬುವವರಿಗೆ ಸೇರಿದ ನಿರ್ಮಾಣ ಹಂತದ ಕಟ್ಟಡದಲ್ಲಿ ಅಜಿತ್ ಮತ್ತು ಹರೀಶ್ ಕೆಲಸ ಮಾಡುತ್ತಿದ್ದರು. ಮಧ್ಯಾಹ್ನ ಇಬ್ಬರು ಮದ್ಯ ಸೇವಿಸಿದ್ದಾರೆ. ಈ ವೇಳೆ ಅಜಿತ್ ಕಟ್ಟಡದ ಮೊದಲ ಮಹಡಿಯಲ್ಲಿ ಕುಳಿತು ಊಟ ಮಾಡುವಾಗ, ಅಲ್ಲಿಗೆ ಬಂದಿರುವ ಹರೀಶ್, ಇಲ್ಲಿ ನಾನು ಕುಳಿತು ಕೊಳ್ಳಬೇಕು ಎಂದಿದ್ದಾನೆ. ಹೀಗಾಗಿ ಅಜಿತ್ 3ನೇ ಮಹಡಿಗೆ ತೆರಳಿದ್ದಾನೆ.
ಆದರೆ, ಅಲ್ಲಿಗೂ ಬಂದ ಹರೀಶ್, ಇಲ್ಲಿ ನಾನು ಮಲಗಬೇಕು. ಈ ಜಾಗದಿಂದ ಎದ್ದು ಹೋಗು ಎಂದಿದ್ದಾನೆ. ಈ ವಿಚಾರಕ್ಕೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಅದು ವಿಕೋಪಕ್ಕೆ ಹೋದಾಗ ಹರೀಶ್, ಅಲ್ಲೇ ಬಿದ್ದಿದ್ದ ಸಿಮೆಂಟ್ ಇಟ್ಟಿಗೆ ತೆಗೆದು ಅಜಿತ್ ತಲೆ ಮೇಲೆ ಎತ್ತಿಹಾಕಿ ಪರಾರಿಯಾಗಿದ್ದಾನೆ. ತೀವ್ರ ರಕ್ತಸ್ರಾವವಾಗಿ ಅಜಿತ್ ಸ್ಥಳದಲ್ಲೇ ಮೃತಪಟ್ಟಿದ್ದ. ಈ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆ ಕೇಸ್‌ನಲ್ಲಿ ಶಿಕ್ಷೆ ಅನುಭವಿಸಿದ್ದ ಆರೋಪಿ!:
ಪೊಲೀಸರ ವಿಚಾರಣೆಯಲ್ಲಿ ಆರೋಪಿ ಹರೀಶ್ ಅಪರಾಧ ಹಿನ್ನೆಲೆಯುಳ್ಳವನಾಗಿದ್ದು, 2014ರಲ್ಲಿ ಕೊರಟಗೆರೆಯಲ್ಲಿ ಕೊಲೆ ಪ್ರಕರ ಣದಲ್ಲಿ ಭಾಗಿಯಾಗಿದ್ದು, ಸೆಷನ್ ನ್ಯಾಯಾಲ ಯದಲ್ಲಿ ಈತನಿಗೆ ಶಿಕ್ಷೆಯಾಗಿತ್ತು. ಬಳಿಕ ಆರೋಪಿ ಹೈಕೋರ್ಟ್‌ನಿಂದ ಜಾಮೀನು ಪಡೆದು ಬಿಡುಗಡೆಯಾಗಿದ್ದ. 2011ರಲ್ಲಿ ಸಂಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಲೆ ಯತ್ನ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಪ್ರಕರಣಗಳು ದಾಖಲಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು. ಘಟನೆ ಸಂಬಂಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
R Ashwin: ಅಶ್ವಿನ್‌ಗೆ ಖೇಲ್ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ
Virat Kohli: ಬಾಕ್ಸಿಂಗ್ ಡೇ ಟೆಸ್ಟ್‌ಗೂ ಮುನ್ನ ವಿರಾಟ್ ನೂತನ ಕೇಶ ವಿನ್ಯಾಸ
Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ
Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.