Bangalore: ಡ್ಯಾನ್ಸ್ ವೇಳೆ ಕಾಲು ತಾಗಿದ್ದಕ್ಕೆ ಹತ್ಯೆಗೈದಿದ್ದ ಮೂವರ ಬಂಧನ
Team Udayavani, Mar 12, 2024, 10:12 AM IST
ಬೆಂಗಳೂರು: ಶಿವರಾತ್ರಿಯಂದು ದೇವಾಲಯವೊಂದರ ಮುಂದೆ ಹಾಡಿಗೆ ಹೆಜ್ಜೆ ಹಾಕುತ್ತಿದ್ದಾಗ ಮೈ ತಗುಲಿದ್ದಕ್ಕೆ ಯುವಕನನ್ನು ಕೊಲೆ ಮಾಡಿದ ಹಂತಕರನ್ನು ಬ್ಯಾಟರಾಯನಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬ್ಯಾಟರಾಯನಪುರದ ನಿವಾಸಿ ಚೇತನ್, ರಂಗಾ, ಪವನ್ ಬಂಧಿತರು. ಶ್ರೀನಗರ ನಿವಾಸಿ ಯೋಗೇಶ್ (23) ಕೊಲೆಯಾದವ.
ಯೋಗೇಶ್ ಹಾಗೂ ಆರೋಪಿಗಳು ಪರಿಚಿತರಾಗಿ ಇರಲಿಲ್ಲ. ಇಬ್ಬರಿಗೂ ಹಳೆ ದ್ವೇಷವೂ ಇರಲಿಲ್ಲ. ನೃತ್ಯ ಮಾಡುವ ವೇಳೆ ಕಾಲು ತಾಗಿದ್ದಕ್ಕೆ ಆಕ್ರೋಶಗೊಂಡು ಆರೋಪಿಗಳು ಹತ್ಯೆ ಮಾಡಿರುವುದು ತನಿಖೆಯಲ್ಲಿ ಕಂಡು ಬಂದಿದೆ. ಯೋಗೇಶ್ ಹನುಮಂತನಗರದ ಬೈಕ್ ಸರ್ವಿಸ್ ಸೆಂಟರ್‌ವೊಂದರಲ್ಲಿ ಕೆಲಸ ಮಾಡುತಿದ್ದ. ಹಬ್ಬದ ಹಿನ್ನೆಲೆಯಲ್ಲಿ ಗಿರಿನಗರದ ದೇವಸ್ಥಾನಕ್ಕೆ ತೆರಳಿ ಮನರಂಜನೆಯ ಕಾರ್ಯಕ್ರಮದಲ್ಲಿ ಯುವಕರ ಜೊತೆ ಹಾಡಿಗೆ ಹೆಜ್ಜೆ ಹಾಕಿದ್ದ. ಈ ನಡುವೆ ಅಲ್ಲೇ ಬಂದಿದ್ದ ಮತ್ತೂಂದು ಗುಂಪಿನ ಯುವಕರಿಗೆ ಯೋಗೀಶ್ ಕಾಲು ತಾಗಿತ್ತು. ಈ ವಿಚಾರಕ್ಕೆ ಆರೋಪಿಗಳು ಹಾಗೂ ಯೋಗೇಶ್ ನಡುವೆ ಜಗಳ ಶುರುವಾಗಿತ್ತು. ಆ ವೇಳೆ ಸ್ಥಳದಲ್ಲಿ ನೆರೆದಿದ್ದವರು ಇವರನ್ನು ಸಮಾಧಾನಪಡಿಸಿ ಕಳುಹಿಸಿದ್ದರು. ಯೋಗೇಶ್ ಸಂಭ್ರಮ ಮುಗಿಸಿ ತಡರಾತ್ರಿ 2 ಗಂಟೆಗೆ ಬೈಕ್‌ನಲ್ಲಿ ಮನೆ ಕಡೆಗೆ ಹೊರಟಿದ್ದ. ಆತನನ್ನು ಹಿಂಬಾಲಿಸಿಕೊಂಡು ಬಂದ ಆರೋಪಿಗಳು ಆತನನ್ನು ಅಡ್ಡಗಟ್ಟಿ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.