22 ವರ್ಷಗಳ ಬಳಿಕ ಮೂವರು ಕಳ್ಳರ ಬಂಧನ

Team Udayavani, Feb 28, 2023, 12:48 PM IST

tdy-10

ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ಕಳ್ಳತನ ಮಾಡುತ್ತಿದ್ದ ತಮಿಳುನಾಡು ಮೂಲದ ಮೂವರು ಆರೋಪಿಗಳು 22 ವರ್ಷಗಳ ಬಳಿಕ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ತಮಿಳುನಾಡಿನ ಸೇಲಂ ಜಿಲ್ಲೆಯ ಅಣ್ಣಾದೊರೈ (42), ವೀರಮಲೈ ಅಲಿಯಾಸ್‌ ಕುಮಾರ್‌(40) ಮತ್ತು ಬಾಬು (34) ಬಂಧಿತರು. ಆರೋಪಿಗಳಿಂದ 5 ಲಕ್ಷ ರೂ. ಮೌಲ್ಯದ ಎಲೆಕ್ಟ್ರಾನಿಕ್‌ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಮೂವರು ಇತ್ತೀಚೆಗೆ ಜ್ಞಾನಭಾರತಿ ಠಾಣೆ ವ್ಯಾಪ್ತಿಯ ಶಾಲೆಯೊಂದರ ಬೀಗ ಮುರಿದು ಕಂಪ್ಯೂಟರ್‌ ಹಾಗೂ ಇತರೆ ವಸ್ತುಗಳನ್ನು ಕಳ್ಳತನ ಮಾಡಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು, ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಮೂವರು ಒಂದೇ ಊರಿನವರಾಗಿದ್ದು, ಕಳ್ಳತನ ಮಾಡುವುದನ್ನೇ ಕಸುಬು ಮಾಡಿಕೊಂಡಿದ್ದಾರೆ. 2001ರಲ್ಲಿ ಫ್ರೇಜರ್‌ಟೌನ್‌ನಲ್ಲಿ ಶಾಲೆ ಮತ್ತು ಕಾಲೇಜುಗಳಲ್ಲಿ ಕಂಪ್ಯೂಟರ್‌ ಹಾಗೂ ಇತರೆ ವಸ್ತುಗಳನ್ನು ಕಳವು ಮಾಡಿದ್ದರು. ಆ ನಂತರವು ನಗರದ ಐದಾರು ಠಾಣೆಗಳು ಹಾಗೂ ಕೋಲಾರ, ದಾವಣಗೆರೆ ಸೇರಿ ವಿವಿಧ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಕಳವು ಮಾಡಿದ್ದಾರೆ. ಕದ್ದ ವಸ್ತುಗಳನ್ನು ಮಾರಿ ಹಣ ಸಂಪಾದಿಸುತ್ತಿದ್ದರು. ಅದನ್ನು ಹಂಚಿಕೊಂಡು ಐಷಾರಾಮಿ ಜೀವನ ನಡೆಸುತ್ತಿದ್ದರು. ಆದರೆ, ಯಾವುದೇ ಸುಳಿವು ಸಿಗದಂತೆ ಪರಾರಿಯಾಗುತ್ತಿದ್ದರು. ಆರೋಪಿಗಳು ಬೆರಳಚ್ಚು ಪತ್ತೆಯಾಗಿದ್ದರೂ, ಮುಖ ಚಹರೆ ಬಗ್ಗೆ ಒಂದು ಸುಳಿವು ಇರಲಿಲ್ಲ. ಇತ್ತೀಚೆಗೆ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ಎಸಗಿದ ಬಳಿಕ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಸಿದಾಗ, ಹುಳಿಮಾವು ಠಾಣೆ ವ್ಯಾಪ್ತಿಯ ಶಾಲೆಯೊಂದರಲ್ಲಿ ಕಳವು ಮಾಡಿ ಸೇಲಂಗೆ ಹೋಗುತ್ತಿದ್ದರು. ಮಾರ್ಗ ಮಧ್ಯೆದಲ್ಲೇ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಆರೋಪಿಗಳ ಬಂಧನದಿಂದ ಜ್ಞಾನಭಾರತಿ, ಹುಳಿಮಾವು, ಫ್ರೆಜರ್‌ಟೌನ್‌, ಹೆಣ್ಣೂರು, ರಾಜಾನುಕುಂಟೆ, ಕೋಣನಕುಂಟೆ, ಕೆ.ಆರ್‌.ಪುರ, ಬಾಗಲೂರು, ಕೋಲಾರ ಹಾಗೂ ದಾವಣಗೆರೆ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ

Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ

Bengaluru: ಸಾಲ ವಾಪಸ್‌ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ

Bengaluru: ಸಾಲ ವಾಪಸ್‌ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.