11 ವರ್ಷದ ಬಳಿಕ ಅಪರಾಧಿ ಸೆರೆ
Team Udayavani, Feb 23, 2022, 11:46 AM IST
ಬೆಂಗಳೂರು: ಅತೀ ವೇಗ ಮತ್ತು ಅಜಾಗರೂಕತೆಯಿಂದ ಮರಳು ತುಂಬಿದ ಲಾರಿ ಚಲಾಯಿಸಿಕೊಂಡು ಪಾದಚಾರಿಯೊಬ್ಬರ ಸಾವಿಗೆ ಕಾರಣವಾಗಿ, ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿ ಯೊಬ್ಬನನ್ನು 11 ವರ್ಷದ ಬಳಿಕ ವಿಜಯನಗರ ಸಂಚಾರ ಪೊಲೀಸರು ಬಂಧಿಸಿದ್ದಾರೆ.
ಮಾಗಡಿ ರಸ್ತೆಯ ಅಂಜನಾ ನಗರದ ಗೋಪಾಲಕೃಷ್ಣ (60) ಬಂಧಿತ. 2011ರ ಮೇ 17ರಂದು ಅಪರಾಧಿ ಮನೀಶಾ(30)ಎಂಬವರ ಮೇಲೆ ಲಾರಿ ಹತ್ತಿಸಿದ ಪರಿಣಾಮಅವರು ಮೃತಪಟ್ಟಿದ್ದರು. ಬಿಎಂಟಿಸಿಯಲ್ಲಿ 1981ರಿಂದ 2001ರವರೆಗೆ ಚಾಲಕನಾಗಿದ್ದ ಗೋಪಾಲಕೃಷ್ಣ, ಕರ್ತವ್ಯಕ್ಕೆ ಗೈರಾಗುತ್ತಿದ್ದರಿಂದ ಕೆಲಸದಿಂದ ವಜಾಗೊಳಿಸಲಾಗಿತ್ತು. ನಂತರ ಮರಳು ಲಾರಿಯ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಮೇ 17ರಂದು ಮಂಜುನಾಥನಗರ ನಿವಾಸಿ ಮನೀಶಾ ಅವರು ವಿಜಯನಗರದ ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು.
ಈ ವೇಳೆ ಅತೀವೇಗ ಮತ್ತು ಅಜಾಗರೂಕತೆಯಿಂದ ಬಂದ ಗೋಪಾಲಕೃಷ್ಣ ಅವರ ಮೇಲೆ ಲಾರಿ ಹತ್ತಿಸಿದ್ದ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು. ಈ ಸಂಬಂಧ ಸಂಚಾರ ಪೊಲೀಸರು ಆರೋಪಿಯನ್ನು ಬಂಧಿಸಿ ಕೋರ್ಟ್‌ಗೆ ಹಾಜರು ಪಡಿಸಿದ್ದರು. ವಿಚಾರಣೆ ಬಳಿಕ ಆರೋಪಿಗೆ ಕೋರ್ಟ್ ಜೈಲು ಶಿಕ್ಷೆ ವಿಧಿಸಿತ್ತು. ಆದರೆ, ವಿಚಾರ ತಿಳಿಯುತ್ತಿದ್ದಂತೆ ತಲೆಮರೆಸಿಕೊಂಡಿದ್ದ. ಇತ್ತೀಚೆಗೆ ಶಿಕ್ಷೆಗೆ ಗುರಿಯಾಗಿ ಬಾಕಿ ಉಳಿದಿರುವ ವಾರೆಂಟ್‌ಗಳನ್ನು ಪರಿಶೀಲಿಸಿದಾಗ ಗೋಪಾಲಕೃಷ್ಣನ ಅಪಘಾತ ಪ್ರಕರಣಪತ್ತೆಯಾಗಿತ್ತು. ಈ ವೇಳೆ, ಕಾರ್ಯಾಚರಣೆನಡೆಸಿದ ವಿಜಯನಗರ ಠಾಣೆ ಹೆಡ್ ಕಾನ್ಸ್‌ಟೆಬಲ್ ಮಂಜುನಾಥ್ ಆರೋಪಿಯನ್ನು ಪತ್ತೆ ಹಚ್ಚಿ ಕೋರ್ಟ್‌ಗೆ ಹಾಜರುಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Kannada Rajyotsava: ಪಾಲಿಕೆ ಆಡಳಿತದಲ್ಲಿ ಸಂಪೂರ್ಣ ಕನ್ನಡ: ತುಷಾರ್
Bengaluru: ಅಕ್ರಮವಾಗಿ ಪಟಾಕಿ ಮಾರಾಟ; 2 ದಿನಗಳಲ್ಲಿ 56 ಕೇಸು ದಾಖಲು
Deepavali: ಐಟಿ ಸಿಟಿಯಲ್ಲಿ ಬೆಳಕಿನ ಹಬ್ಬದ ರಂಗು
Bengaluru: ಬ್ಯಾಗ್ ಪರಿಶೀಲನೆ ವೇಳೆ ವಿಮಾನ ನಿಲ್ದಾಣ ಸಿಬ್ಬಂದಿಗೆ ಬೆದರಿಕೆ: ಕೇಸ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.