ಗೆಳೆಯನನ್ನೇ ಕೊಂದ ಆರೋಪಿ ಬಂಧನ
Team Udayavani, Nov 9, 2017, 11:27 AM IST
ಬೆಂಗಳೂರು: ಹಣಕಾಸು ವಿಚಾರದಲ್ಲಿ ಭಾವಿ ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನನ್ನು ಆಲೋಬ್ಲಾಕ್ ಇಟ್ಟಿಗೆ ಎತ್ತಿಹಾಕಿ ಕೊಲೆಗೈದು ಪರಾರಿಯಾಗಿದ್ದ ಆರೋಪಿಯನ್ನು ಕಾಮಾಕ್ಷಿ ಪಾಳ್ಯ ಠಾಣೆ ಪೊಲೀಸರು ರಾಯಚೂರಿನ ಸಿಂಧನೂರಿನಲ್ಲಿ ಬಂಧಿಸಿದ್ದಾರೆ.
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಬಸವಲಿಂಗ (21) ಬಂಧಿತ. ಮೃತ ಗುಂಡನಗೌಡ ಮತ್ತು ಆರೋಪಿ
ಬಸವಲಿಂಗ ಬಾಲ್ಯ ಸ್ನೇಹಿತರಾಗಿದ್ದು, ಅ.12ರಂದು ಸುಂಕದಕಟ್ಟೆ ಬಳಿಯ ಬಾರ್ ವೊಂದರಲ್ಲಿ ಇಬ್ಬರು ಕಂಠಪೂರ್ತಿ ಮದ್ಯ ಸೇವಿಸಿದ್ದಾರೆ. ಈ ವೇಳೆ ತಾನು ಸಾಲವಾಗಿ ಕೊಟ್ಟಿದ್ದ 20 ಸಾವಿರ ರೂ. ವಾಪಸ್ ಕೊಡುವಂತೆ ಗುಂಡನಗೌಡ ಆರೋಪಿಗೆ ಒತ್ತಾಯಿಸಿದ. ಇದಕ್ಕೆ ಒಪ್ಪದಿದ್ದರೆ ನಿನ್ನ ಭಾವಿ ಪತ್ನಿಯನ್ನು ಒಂದು ದಿನದ ಮಟ್ಟಿಗೆ ನನ್ನೊಂದಿಗೆ ಕಳುಹಿಸಿಕೊಡುವಂತೆ ಬೇಡಿಕೆ ಇಟ್ಟಿದ್ದ. ಇದರಿಂದ ಆಕ್ರೋಶಗೊಂಡ ಆರೋಪಿ ಆಲೋಬ್ಲಾಕ್ ಇಟ್ಟಿಗೆ ಎತ್ತಿಹಾಕಿ ಕೊಲೆಗೈದಿದ್ದಾನೆ ಎಂದು ಪೊಲೀಸರು
ತಿಳಿಸಿದ್ದಾರೆ.
ಭಾವಿ ಪತ್ನಿಯ ಜತೆ ಮೊದಲ ರಾತ್ರಿಗೆ ಬೇಡಿಕೆ: ಅ.12ರಂದು ಬಾರ್‌ವೊಂದರಲ್ಲಿ ಇಬ್ಬರು ಮದ್ಯ ಸೇವಿಸಿದ್ದಾರೆ. ಈ ವೇಳೆ ಗುಂಡನಗೌಡ ಹಣ ವಾಪಸ್ ಕೊಡುವಂತೆ ಒತ್ತಾಯಿಸಿದ್ದಾನೆ. ಹಣ ಕೊಡಲು ನಿರಾಕರಿಸಿದ ಆರೋಪಿ, ಮದುವೆಯ ನಂತರ ಕೊಡುತ್ತೇನೆ ಎಂದಿದ್ದ. ನಂತರ ಬಾರ್‌ನಿಂದ ಇಬ್ಬರು ಹೊರ ಬಂದಿದ್ದಾರೆ.
ಆಗ ಗುಂಡನಗೌಡ ಒಂದು ಒಪ್ಪಂದ ಮಾಡಿಕೊಳ್ಳೋಣ, “ನೀನು ಮದುವೆಯಾದ ನಂತರ ನಿನ್ನ ಪತ್ನಿಯೊಂದಿಗೆ ನಾನು ಮೊದಲ ರಾತ್ರಿ ಮುಗಿಸುತ್ತೇನೆ. ಆಗ ನೀನು ನನಗೆ ಹಣ ಕೊಡುವ ಅಗತ್ಯವಿಲ್ಲ. ಅಲ್ಲಿಗೆ ಎಲ್ಲವೂ ಮುಕ್ತಾಯವಾಗುತ್ತದೆ’ ಎಂದಿದ್ದ.
ಇದರಿಂದ ಕೋಪಗೊಂಡ ಬಸವಲಿಂಗ ಸುಂಕದಕಟ್ಟೆ ಪಾರ್ಕ್ ಬಳಿ ಹೋಗುತ್ತಿದ್ದಂತೆ ಗುಂಡನಗೌಡ ಮದ್ಯದ ಅಮಲಿನಲ್ಲಿ ನಿದ್ರೆಗೆ ಜಾರಿದ್ದಾನೆ. ಇದೇ ವೇಳೆ ಅಲ್ಲೇ ಇದ್ದ ಆಲೋಬ್ಲಾಕ್ ಇಟ್ಟಿಗೆಯನ್ನು ಗುಂಡನ ಗೌಡನ ಮೇಲೆ ಎತ್ತಿಹಾಕಿ ಕೊಲೆಗೈದಿದ್ದ.
ಆರೋಪಿಯ ಕೃತ್ಯ ಸಿಸಿಟಿವಿಯಲ್ಲಿ ಸೆರೆ: ಕೊಲೆ ನಡೆದ ಜಾಗದಲ್ಲಿ ಸಿಸಿಟಿವಿ ಕ್ಯಾಮೆರಗಳ ದೃಶ್ಯಾವಳಿಗಳನ್ನು ಸಂಗ್ರಹಿಸಿ ಪರಿಶೀಲಿಸಲಾಗಿತ್ತು. ಅಲ್ಲದೆ ಮೃತನ ಭಾವನಿಗೆ ಈ ದೃಶ್ಯಾವಳಿಗಳನ್ನು ತೋರಿಸಿದಾಗ ಆರೋಪಿಯ ಬಗ್ಗೆ ಮಾಹಿತಿ ನೀಡಿದ್ದು, ಈತ ತನ್ನ ಭಾಮೈದುನನ ಆಪ್ತ ಸ್ನೇಹಿತ ಬಸವಲಿಂಗ ಎಂದಿದ್ದರು. ಬಳಿಕ ಬಸವಲಿಂಗನ ಬೆನ್ನು ಬಿದ್ದ ಪೊಲೀಸರಿಗೆ ಆರೋಪಿ ತಲೆಮರೆಸಿಕೊಂಡಿರುವುದು ಗೊತ್ತಾಗಿತ್ತು. ಕಾಮಾಕ್ಷಿಪಾಳ್ಯ ಇನ್‌ಸ್ಪೆಕ್ಟರ್ ಆರ್.ಜಿ.ರವಿಕುಮಾರ್, ಎಸ್‌ಐ ವಿ.ಕಿರಣ್ ನೇತೃತ್ವದ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ರಾಯಚೂರಿನ ಸಿಂಧನೂರು ಬಸ್ ನಿಲ್ದಾಣದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.