ಕಲಾವಿದರಿಗೆ ಸಂಕೋಚ, ನಾಚಿಕೆ ಇರಬಾರದು

Team Udayavani, Sep 19, 2018, 11:53 AM IST

kalavidarige.jpg

ಬೆಂಗಳೂರು: ಕಲಾವಿದರಿಗೆ ಸಂಕೋಚ, ನಾಚಿಕೆ ಇರಬಾರದು ಯಾವ ಪಾತ್ರಕೊಟ್ಟರು ಧೈರ್ಯವಾಗಿ ಮಾಡಬೇಕು ಎನ್ನುತ್ತಿದ್ದ ವಿಷ್ಣುವರ್ಧನ್‌ ಇಂದಿಗೂ ಯುವ ನಟರಿಗೆ ಸ್ಫೂರ್ತಿದಾತ ಎಂದು ಬಹುಭಾಷಾ ನಟಿ ವಿನಯ ಪ್ರಸಾದ್ ಹೇಳಿದರು.

ಡಾ.ವಿಷ್ಣು ಸೇನಾ ಸಮಿತಿ ನಗರದ ಕುವೆಂಪು ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಮೂರು ದಿನಗಳ ಡಾ.ವಿಷ್ಣುವರ್ಧನ್‌ ರಾಷ್ಟ್ರೀಯ ಉತ್ಸವದ ಸಮಾರೋಪದಲ್ಲಿ ಡಾ.ವಿಷ್ಣುವರ್ಧನ ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿ ಮಾತನಾಡಿ, ನಾನು ಚಿತ್ರರಂಗಕ್ಕೆ ಬಂದಾಗ ನಾಚಿಕೆ ಸ್ವಭಾವ ಹೆಚ್ಚಿತ್ತು.

ಸಾರ್ವಜನಿಕವಾಗಿ ನೃತ್ಯ ಮಾಡಿದ ಅಭ್ಯಾಸವಿರದಿದ್ದರಿಂದ ಸಾಕಷ್ಟು ಸಂಕೋಚ ಪಡುತ್ತಿದ್ದೆ. ಆದರೆ, ವಿಷ್ಣುವರ್ಧನ್‌ ನನಗೆ ಕಲಾವಿದರಿಗೆ ಸಂಕೋಚ, ನಾಚಿಕೆ ಇರಬಾರದು ಎಂದು ಬುದ್ದಿಮಾತು ಹೇಳಿ, ಧೈರ್ಯ ತುಂಬಿ ನೃತ್ಯ ಮಾಡಿಸಿದ್ದರು. ಅಂದು ಅವರು ಹೇಳಿಕೊಟ್ಟ ಪಾಠ ಇಂದಿಗೂ ನನಗೆ ಸ್ಫೂರ್ತಿಯಾಗಿದೆ ಎಂದರು.

ಡಾ.ವಿಷ್ಣು ಸೇನಾ ಸಮಿತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ ಮಾತನಾಡಿ, ವಿಷ್ಣು ಅವರ ಸ್ಮಾರಕ ನಿರ್ಮಾಣ ಸಮಸ್ಯೆ ಸಾಕಷ್ಟು ಜಟಿಲವಾಗುತ್ತಿದೆ. ಈ ವಿಚಾರವಾಗಿ ವಿಷ್ಣು ಅವರನ್ನು ಬಿದಿಗೆ ತಂದು ನಿಲ್ಲಿಸುವುದಿಲ್ಲ. ಇದಕ್ಕೊಂದು ತಾರ್ಕಿಕ ಅಂತ್ಯ ಕಾಣಿಸಲು ವಕೀಲರು, ನಟರು, ಅಭಿಮಾನಿಗಳನ್ನು ಒಳಗೊಂಡಂತೆ ಸ್ಮಾರಕ ಸಮಿತಿ ರಚನೆ ಮಾಡುತ್ತಿದೆ ಎಂದರು.

ಚಿತ್ರನಟರಾದ ಚರಣ್‌ ರಾಜ್‌, ದುನಿಯಾ ವಿಜಯ್, ಪ್ರೇಮ್, ಶ್ರೀನಗರ ಕಿಟ್ಟಿ, ಬಾಲಾಜಿ ರವಿಚಂದ್ರನ್‌, ರವಿಶಂಕರ್‌ ಗೌಡ , ನೀನಾಸಂ ಸತೀಶ್‌, ಸಿಹಿ ಕಹಿ ಚಂದ್ರು, ರವಿಕೃಷ್ಣ, ವಿಜಯ್‌ ಸೂರ್ಯ, ನಿರ್ದೇಶಕ ರಘುರಾಮ್ ವಿಷ್ಣುವರ್ಧನ್‌ ಅವರೊಟ್ಟಿಗೆ ಕಳೆದ ದಿನಗಳನ್ನು ನೆನದು ವಿಷ್ಣು ಅಭಿನಯಿಸಿದ ಚಿತ್ರದ ಹಾಡನ್ನು ಹಾಡಿ ನೆರದಿದ್ದವರನ್ನು ರಂಜಿಸಿದರು. ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌.ದೊರೆಸ್ವಾಮಿ ಉಪಸ್ಥಿತರಿದ್ದರು.

ಅಭಿಮಾನಿಗಳಿಂದ ಜನ್ಮದಿನ ಆಚರಣೆ
ಕೆಂಗೇರಿ:
ಕೆಂಗೇರಿ-ಉತ್ತರಹಳ್ಳಿ ರಸ್ತೆಯಲ್ಲಿರುವ ಅಭಿಮಾನ್‌ ಸ್ಟುಡಿಯೋ ಆವರಣದಲ್ಲಿರುವ ಡಾ,ವಿಷ್ಣುವರ್ದನ್‌ ಸಮಾಧಿಯಲ್ಲಿ (ಸ್ಮಾರಕ) ವಿಷ್ಣು ಅವರ 68ನೇ ಹುಟ್ಟು ಹಬ್ಬವನ್ನು ಅಭಿಮಾನಿಗಳು ಆಚರಿಸಿದರು.

ಬೆಳಗಿನಿಂದಲೆ ಸಾವಿರಾರು ಸಂಖ್ಯೆಯಲ್ಲಿ ಡಾ.ವಿಷ್ಣುವರ್ದನ್‌ ಭಕ್ತರು ಅಭಿಮಾನ್‌ ಸ್ಟುಡಿಯೋ ಆವರಣದಲ್ಲಿರುವ ಡಾ.ವಿಷ್ಣುವರ್ದನ್‌ ಸಮಾಧಿ ಸ್ಥಳಕ್ಕೆ ಬರಲು ಆರಂಭಿಸಿ ಅಲ್ಲಿ ವಿಷ್ಣು ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿದರು. ಇದೇ ವೇಳೆ ಭಾರತೀಯ ರೆಡ್‌ಕ್ರಾಸ್‌ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಅಭಿಮಾನಿಗಳು ಸ್ವಯಂಪ್ರೇರಿತರಾಗಿ ರಕ್ತದಾನವನ್ನು ಮಾಡಿದರು.

ಟಾಪ್ ನ್ಯೂಸ್

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

Bengaluru: ಕಾರು ಢಿಕ್ಕಿಯಾಗಿ ಟೆಕಿ ಸಾವು

Bengaluru: ಕಾರು ಢಿಕ್ಕಿಯಾಗಿ ಟೆಕಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

doctor

ಕೊಪ್ಪಳದಲ್ಲಿ ಕ್ಯಾನ್ಸರ್‌ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್‌ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.