6 ಸಾವಿರ ರೂ.ಗೆ ಆಶಾ ಮುಷ್ಕರ ಪಟ್ಟು


Team Udayavani, Sep 8, 2017, 11:01 AM IST

asha-karyakarteyaru.jpg

ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ನೀಡುವ ಗೌರವಧನವನ್ನು ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಐದು ಸಾವಿರ ರೂಪಾಯಿಗೆ ಹೆಚ್ಚಿಸಿದರೂ ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿರುವ ಆಶಾ ಕಾರ್ಯಕರ್ತೆಯರು ಅದರಿಂದ ಹಿಂದೆ ಸರಿಯಲು ನಿರಾಕರಿಸಿದ್ದಾರೆ. ಕನಿಷ್ಠ ಆರು ಸಾವಿರ ಗೌರವಧನ ನೀಡಬೇಕು ಮತ್ತು ಆಶಾ ಸಾಫ್ಟ್ವೇರ್‌ ರದ್ದುಪಡಿಸಬೇಕು ಎಂದು ಪಟ್ಟುಹಿಡಿದಿರುವ ಅವರು ಅಹೋರಾತ್ರಿ ಧರಣಿ ಮುಂದುವರಿಸಿದ್ದಾರೆ. 

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗುರುವಾರ ಆಲ್‌ ಇಂಡಿಯಾ ಯುನೈಟೆಡ್‌ ಟ್ರೇಡ್‌ ಯೂನಿಯನ್‌ ಸೆಂಟರ್‌ (ಎಐಯುಟಿಯುಸಿ) ಮತ್ತು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸ್ವಾತಂತ್ರ್ಯ ಉದ್ಯಾನದಲ್ಲಿ ಜಮಾವಣೆಗೊಂಡ ಕಾರ್ಯಕರ್ತೆಯರು, ರಾಜ್ಯ ಸರ್ಕಾರವೊಂದೇ ಆರು ಸಾವಿರ ರೂ. ಗೌರವಧನ ನೀಡಬೇಕು. ಅಲ್ಲಿಯವರೆಗೂ ಧರಣಿಯಿಂದ ಹಿಂದೆಸರಿಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು. 

ಅನಿರ್ದಿಷ್ಟಾವಧಿ ಮುಷ್ಕರ ಆರಂಭಗೊಂಡ ಬೆನ್ನಲ್ಲೇ ಸರ್ಕಾರದ ಪರವಾಗಿ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್‌ ಸ್ಥಳಕ್ಕೆ ಭೇಟಿ ನೀಡಿ, “ಆಶಾ ಕಾರ್ಯಕರ್ತೆಯರಿಗೆ ವಿವಿಧ ಪ್ರಕಾರದ 32 ಚಟುವಟಿಕೆಗಳನ್ನು ನೀಡಲಾಗಿದೆ. ಅವುಗಳಿಗೆ ಅನುಗುಣವಾಗಿ ಪ್ರೋತ್ಸಾಹಧನ ನಿಗದಿಪಡಿಸಲಾಗಿದೆ.

ಆದರೆ, ಈಗ ಒಟ್ಟಾರೆ ಇಡಿಗಂಟಾಗಿ ಐದು ಸಾವಿರ ರೂ. ಪ್ರೋತ್ಸಾಹಧನ ನೀಡಲಾಗುವುದು. ಜತೆಗೆ ಪ್ರತಿ ತಾಲ್ಲೂಕಿಗೆ ಒಬ್ಬ ಆಶಾ ಸಾಫ್ಟ್ವೇರ್‌ನ ಡೇಟಾ ಎಂಟ್ರಿ ಆಪರೇಟರ್‌ ಅನ್ನು ನಿಯೋಜಿಸಲಾಗುವುದು’ ಎಂದು ಹೇಳಿದರು. ಇದರ ಬೆನ್ನಲ್ಲೇ ಸರ್ಕಾರ ಗೌರವಧನ ಹೆಚ್ಚಿಸಿ ಆದೇಶವನ್ನೂ ಹೊರಡಿಸಿತು.

ಚೌಕಾಸಿ ಬೇಡ
ಆದರೆ, ಇದಕ್ಕೆ ಒಪ್ಪದ ಕಾರ್ಯಕರ್ತೆಯರು, “ಜನಪ್ರತಿನಿಧಿಗಳ ಭತ್ಯೆ-ಗೌರವಧನ ಹೆಚ್ಚಿಸಲು ಸರ್ಕಾರಕ್ಕೆ ಹಣಕಾಸಿನ ಕೊರತೆ ಇಲ್ಲ. ನಿತ್ಯ ಬೀದಿ-ಬೀದಿ ಅಲೆದು ಜನರಿಗೆ ಆರೋಗ್ಯ ಸೇವೆಗಳನ್ನು ನೀಡುವ ನಮಗೆ ಆರು ಸಾವಿರ ಗೌರವಧನ ನೀಡಲು ಚೌಕಾಸಿ ಮಾಡುತ್ತಿದೆ. ಅಷ್ಟಕ್ಕೂ ಈಗಾಗಲೇ ತೆಲಂಗಾಣ, ಕೇರಳದಲ್ಲಿ 6ರಿಂದ 7 ಸಾವಿರ ರೂ. ಗೌರವಧನ ನೀಡಲಾಗುತ್ತಿದೆ. ಅದೇ ಮಾದರಿಯಲ್ಲಿ ತಮಗೂ ನೀಡಬೇಕು’ ಎಂದು ಆಗ್ರಹಿಸಿದರು. 

ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷ ಕೆ.ಸೋಮಶೇಖರ್‌ ಯಾದಗಿರಿ ಮಾತನಾಡಿ, ಆಶಾ ಕಾರ್ಯಕರ್ತೆಯರಿಗೆ ನೀಡುವ ಅನುದಾನದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಾಲು ಇದೆ. ನಾವು ಮಾಡುವ ಕೆಲಸಗಳಿಗೆ ಅನುಗುಣವಾಗಿ ಕೇಂದ್ರ ಅನುದಾನ ನೀಡಿದರೆ, ಅಷ್ಟೇ ಪ್ರಮಾಣದ ಅನುದಾನವನ್ನು ರಾಜ್ಯ ಸರ್ಕಾರ ಮ್ಯಾಚಿಂಗ್‌ ಗ್ರ್ಯಾಂಟ್‌ ರೂಪದಲ್ಲಿ ನೀಡಬೇಕು. ಜತೆಗೆ ವಿಶೇಷ ಗೌರವಧನ ಕೊಡಬೇಕು.

ಆದರೆ, ರಾಜ್ಯ ಸರ್ಕಾರವು ಎಲ್ಲವೂ ಸೇರಿ 5 ಸಾವಿರ ರೂ. ನೀಡುವುದಾಗಿ ಹೇಳುತ್ತಿದೆ. ಹಾಗಾಗಿ, ಇದು ಒಪ್ಪಿತವಲ್ಲ. ಮುಷ್ಕರ ಅನಿರ್ದಿಷ್ಟಾವಧಿಗೆ ಮುಂದುವರಿಯಲಿದೆ ಎಂದು ಹೇಳಿದರು.  ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ಮಾತನಾಡಿ, “ಸರ್ಕಾರ ಐದು ಸಾವಿರ ರೂ. ನೀಡಲು ಮುಂದಾಗಿರುವುದು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಅದೇನೇ ಇರಲಿ, ಈ ಬಗ್ಗೆ ಕಾರ್ಯಕರ್ತೆಯರೊಂದಿಗೆ ಚರ್ಚಿಸಿ, ನಂತರ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು. 

67 ಕಾರ್ಯಕರ್ತೆಯರಿಗೆ 10 ಸಾವಿರ ರೂ.!
ಮುಷ್ಕರದಲ್ಲಿ ಲೇಖಕಿ ರೂಪಾ ಹಾಸನ್‌ ಮಾತನಾಡಿ, ಸುಮಾರು 37 ಸಾವಿರ ಆಶಾ ಕಾರ್ಯಕರ್ತೆಯರಿದ್ದಾರೆ. ಈ ಪೈಕಿ 67 ಜನ ಮಾತ್ರ ಮಾಸಿಕ 10 ಸಾವಿರ ಪ್ರೋತ್ಸಾಹಧನ ಪಡೆದಿದ್ದಾರೆ. ಇದು ಆಶಾ ಸಾಫ್ಟ್ವೇರ್‌ನ ಕೊಡುಗೆ. ಉಳಿದವರಿಗೆ ಗರಿಷ್ಠ ಕೇವಲ 2 ಸಾವಿರ ರೂ. ಬಂದಿದೆ.

ಅನೇಕರಿಗೆ ಇದು ಕೂಡ ಬಂದಿಲ್ಲ. ಇನ್ನು ಮ್ಯಾಚಿಂಗ್‌ ಗ್ರ್ಯಾಂಟ್‌ ಅಂತೂ ದೂರದ ಮಾತಾಗಿದೆ. ಹೀಗಿರುವಾಗ, ಬದುಕು ಸಾಗಿಸುವುದು ಹೇಗೆ ಎಂದು ಆಕ್ರೋಶ ವ್ಯಕ್ತಪಡಿಸಿದರು. “ಸರ್ಕಾರ ಒಟ್ಟಾರೆ 32 ಚಟುವಟಿಕೆಗಳನ್ನು ನೂತನ ಸಾಫ್ಟ್ವೇರ್‌ನಲ್ಲಿ ಅಳವಡಿಸಿದೆ.

ಇದರಲ್ಲಿ 8ರಿಂದ 10 ಚಟುವಟಿಕೆಗಳು ಮಾತ್ರ ನಿರಂತರವಾಗಿರುತ್ತವೆ. ಇವುಗಳನ್ನು ಆಯಾ ತಿಂಗಳು ಮಾಡಿಮುಗಿಸಿದರೂ ತಾಂತ್ರಿಕ ಕಾರಣಗಳಿಂದ ಪ್ರೋತ್ಸಾಹಧನ ಖಾತೆಗೆ ಬರುವುದೇ ಇಲ್ಲ. ನಮ್ಮದಲ್ಲದ ಕಾರಣಗಳಿಗೆ ತೊಂದರೆ ಅನುಭವಿಸಬೇಕಿದೆ.

ಕಳೆದ ನಾಲ್ಕು ತಿಂಗಳಲ್ಲಿ ಬರೀ 1,500 ರೂ. ಜಮೆ ಆಗಿದೆ’ ಎಂದು ಹಾಸನ ತಾಲ್ಲೂಕು ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಮಹಾಲಕ್ಷ್ಮೀ ಆರೋಪಿಸಿದರು. ಮುಷ್ಕರದಲ್ಲಿ ವಕೀಲರಾದ ಹೇಮಲತಾ ಮಹಿಷಿ, ಎಐಯುಟಿಯುಸಿ ಉಪಾಧ್ಯಕ್ಷ ಕೆ. ರಾಧಾಕೃಷ್ಣ, ಆರೋಗ್ಯ ಇಲಾಖೆ ನಿರ್ದೇಶಕ ನಟರಾಜ್‌ ಮತ್ತಿತರರು ಭಾಗವಹಿಸಿದ್ದರು. 

ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನದ ಪ್ರಮಾಣವನ್ನು ಆರು ಸಾವಿರ ರೂ.ಗೆ ಏರಿಕೆ ಮಾಡಬೇಕು ಎಂಬ ಬೇಡಿಕೆ ಇತ್ತು. ಅದನ್ನು ಈಗ ಐದು ಸಾವಿರಕ್ಕೆ ಏರಿಸಲಾಗಿದೆ. ಗೌರವಧನ ಸೇರಿದಂತೆ ಮತ್ತಿತರ ಭತ್ಯೆಗಳ ಮೂಲಕ ಅವರು ಇನ್ನು ಮುಂದೆ ಪ್ರತಿ ತಿಂಗಳು ಕನಿಷ್ಟವೆಂದರೂ ಹತ್ತು ಸಾವಿರ ರೂ ಪಡೆಯಲಿ¨ªಾರೆ.
-ಕೆ.ಆರ್‌.ರಮೇಶ್‌ಕುಮಾರ್‌, ಆರೋಗ್ಯ ಸಚಿವ

ಟಾಪ್ ನ್ಯೂಸ್

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.