ಅಶೋಕ್ ವಿರುದ್ಧದ ಎಸಿಬಿ ವಿಚಾರಣೆಗೆ ತಡೆ
Team Udayavani, Jan 26, 2018, 11:59 AM IST
ಬೆಂಗಳೂರು: ಬಗರ್ ಹುಕುಂ ಜಮೀನನ್ನು ಅಕ್ರಮವಾಗಿ ಅನರ್ಹ ಫಲಾನುಭವಿಗಳಿಗೆ ಮಂಜೂರು ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖಲಿಸಿರುವ ಎಫ್ಐಆರ್‌ಗೆ ಹೈಕೋರ್ಟ್ ಗುರುವಾರ ಮಧ್ಯಂತರ ತಡೆಯಾಜ್ಞೆ ನೀಡಿದ್ದು ಇದರಿಂದ ಸದ್ಯಕ್ಕೆ ಎಸಿಬಿ ವಿಚಾರಣೆ ಎದುರುಸುವುದರಿಂದ ಅಶೋಕ್ ಪಾರಾದಂತಾಗಿದೆ.
ತಮ್ಮ ವಿರುದ್ಧ ಎಸಿಬಿ ದಾಖಲಿಸಿರುವ ಎಫ್ಐಆರ್ ರದ್ದುಗೊಳಿಸಬೇಕು ಎಂದು ಕೋರಿ ಆರ್. ಅಶೋಕ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಆರ್.ಬಿ. ಬೂದಿಹಾಳ್ ಅವರಿದ್ದ ಏಕಸದಸ್ಯಪೀಠ, ಈ ಆದೇಶ ನೀಡಿ ವಿಚಾರಣೆ ಮುಂದೂಡಿತು.
ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಅವರು 1998 ರಿಂದ 2006ರ ಅವಧಿಯವರೆಗೆ ಬೆಂಗಳೂರು ದಕ್ಷಿಣ ತಾಲ್ಲೂಕು ಬಗರ್ ಹುಕುಂ ಭೂ-ಸಕ್ರಮೀಕರಣ ಸಮಿತಿಯ ಅಧ್ಯಕ್ಷರಾಗಿದ್ದಾಗ ಕಾನೂನು ಬಾಹಿರವಾಗಿ ಅನರ್ಹ ಫಲಾನುಭವಿಗಳಿಗೆ ಜಮೀನು ಮಂಜೂರು ಮಾಡಿದ್ದಾರೆ ಎಂದು ಆರೋಪಿಸಿ ಎ.ಆನಂದ ಎಂಬುವರು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು. ಈ ದೂರು ಆಧರಿಸಿ ಎಸಿಬಿ ಪೊಲೀಸರು ಅಶೋಕ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.
ತಾವು ಯಾವುದೇ ಅಕ್ರಮ ನಡೆಸಿಲ್ಲ. ಕೇವಲ ರಾಜಕೀಯ ದುರುದ್ದೇಶದಿಂದ ತಮ್ಮ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹೀಗಾಗಿ, ತಮ್ಮ ವಿರುದ್ಧ ಎಸಿಬಿ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಆರ್. ಅಶೋಕ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಜೊತೆಗೆ ಅರ್ಜಿ ಇತ್ಯರ್ಥವಾಗುವವರೆಗೆ ಎಫ್‌ಐಆರ್ ಆಧರಿಸಿ ತಮ್ಮ ವಿರುದ್ಧ ಯಾವುದೇ ಕ್ರಮಕ್ಕೆ ಮುಂದಾಗದಂತೆ ಎಸಿಬಿಗೆ ನಿರ್ದೇಶಿಸುವಂತೆ ಮನವಿ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.