Assault Case: ಸಿಐಡಿ ಕಚೇರಿಯ ಮಹಿಳಾ ಅಧಿಕಾರಿಗೆ ಲೈಂಗಿಕ ದೌರ್ಜನ್ಯ: ಪ್ರಕರಣ ದಾಖಲು
Team Udayavani, Dec 3, 2023, 9:38 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಸಿಐಡಿ ಕಚೇರಿಯ ಮಹಿಳಾ ಅಧಿಕಾರಿಯೊಬ್ಬರಿಗೆ ಬೆಳಗಾವಿ ಮೂಲದ ಪರಿಚಿತ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.
ಈ ಸಂಬಂಧ ಸಂತ್ರಸ್ತ ಮಹಿಳಾ ಅಧಿಕಾರಿ ನೀಡಿದ ದೂರಿನ ಮೇರೆಗೆ ವಿಧಾನಸೌಧ ಠಾಣೆಯಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ್ ಮೂಲದ ಮಹಾಲಿಂಗ(35)ಎಂಬಾತನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಆರೋಪಿ ಮಹಾಲಿಂಗ ಹಾಗೂ ಸಂತ್ರಸ್ತೆ ಒಂದು ವರ್ಷದಿಂದ ಪರಿಚಯವಿದ್ದು, ಇಬ್ಬರ ನಡುವೆ ಹಣಕಾಸಿನ ವ್ಯವಹಾರ ನಡೆದಿತ್ತು. ಮಹಿಳೆ ಆರೋಪಿಗೆ ಹಣ ಕೊಟ್ಟಿದ್ದರು. ಈ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದು ಕೃತ್ಯ ನಡೆದಿರುವ ಸಾಧ್ಯತೆಯಿದೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
ದೂರಿನಲ್ಲಿ ಏನಿದೆ?: ಸಿಐಡಿ ಕಚೇರಿಯಲ್ಲಿ ಸೆಕ್ಷನ್ ಆಫೀಸರ್ ಆಗಿರುವ 44 ವರ್ಷದ ಸಂತ್ರಸ್ತೆ ನ.29 ರಂದು ಮಧ್ಯಾಹ್ನ 2.15ರ ಸಮಯದಲ್ಲಿ ಅರಮನೆ ರಸ್ತೆಯ ಶ್ರೀಮುನೇಶ್ವರ ದೇವಸ್ಥಾನದ ಮುಂದೆ ಫುಟ್‌ಪಾತ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಆಗ ಪರಿಚಿತನಾದ ಮಹಾಲಿಂಗ ಏಕಾಏಕಿ ಸಂತ್ರಸ್ತೆಯನ್ನು ಅಡ್ಡಗಟ್ಟಿ ಮೈ, ಕೈ ಮುಟ್ಟಿ, ಅಶ್ಲೀಲ ಪದಗಳಿಂದ ನಿಂದಿಸಿದ್ದಾನೆ. ಅಲ್ಲದೆ, “ನೀ ನನ್ನ ಜತೆ ಬರಲಿಲ್ಲ ಅಂದರೆ ಕೊಲೆ ಮಾಡುತ್ತೇನೆ’ ಎಂದು ಬೆದರಿಕೆ ಹಾಕಿ ಸಾರ್ವಜನಿಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಹೀಗಾಗಿ ದೌರ್ಜನ್ಯ ಎಸಗಿರುವ ಮಹಾಲಿಂಗ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಮಹಿಳೆ ದೂರು ನೀಡಿದ್ದಾರೆ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.