ತಂದೆ ಧ್ವನಿಯಲ್ಲಿ ಬಾಗಿಲು ತೆಗೆಸಿ ಲೈಂಗಿಕ ದೌರ್ಜನ್ಯ: 5 ವರ್ಷ ಜೈಲು
Team Udayavani, Jun 14, 2023, 3:32 PM IST
ಬೆಂಗಳೂರು: ತಂದೆ ಧ್ವನಿಯಲ್ಲಿ ಬಾಗಿಲು ತೆರೆಯಿಸಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ 1ನೇ ತ್ವರಿತ ವಿಶೇಷ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಸಂತ್ರಸ್ತೆ ತಂದೆಯ ಸ್ನೇಹಿತನಾಗಿರುವ ಗವಿಯಪ್ಪ(31) ಶಿಕ್ಷೆಗೊಳಗಾದ ವ್ಯಕ್ತಿ. ಆಗಾಗ್ಗೆ ಮನೆಗೆ ಬಂದು ಹೋಗುತ್ತಿದ್ದ. 2021ರ ಜನವರಿ 13ರಂದು ತಂದೆ ಹೊರಗಡೆ ಹೋಗಿದ್ದರು. ಆಗ ಶಾಲೆಯಿಂದ ಮನೆಗೆ ಬಂದಿದ್ದ ಬಾಲಕಿ, ಬಾಗಿಲು ಹಾಕಿಕೊಂಡು ಊಟ ಮಾಡುತ್ತಿದ್ದಳು. ಅದೇ ವೇಳೆ ಮನೆಗೆ ಬಂದ ಗವಿಯಪ್ಪ, ಸಂತ್ರಸ್ತೆ ತಂದೆ ಧ್ವನಿಯಲ್ಲಿ ಬಾಗಿಲು ತೆರೆಯುವಂತೆ ಹೇಳಿದ್ದ. ಆಕೆ ಬಾಗಿಲು ತೆರೆಯುತ್ತಿದ್ದಂತೆ ಬಾಲಕಿಯ ಬಾಯಿ ಮುಚ್ಚಿ, ಕೂಗಾಡದಂತೆ ಬೆದರಿಸಿದ್ದಾನೆ. ನಂತರ ಬಾಲಕಿಯ ಬಟ್ಟೆಗಳನ್ನು ಬಿಚ್ಚಿ ಲೈಂಗಿಕ ದೌರ್ಜನ್ಯ ಎಸಗಿ ಪರಾರಿಯಾಗಿದ್ದ. ಕೆಲ ಹೊತ್ತಿನ ಬಳಿಕ ಮನೆಗೆ ಬಂದ ಪೋಷಕರಿಗೆ ಸಂತ್ರಸ್ತೆ ಘಟನೆ ವಿವರಿಸಿದ್ದಾಳೆ.
ಈ ಸಂಬಂಧ ಪೋಷಕರು ಪೀಣ್ಯ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇನ್‌ಸ್ಪೆಕ್ಟರ್ ಸುನೀಲ್ ಪವಾರ್ ಆರೋಪಿಯನ್ನು ಬಂಧಿಸಿ ಕೋರ್ಟ್‌ಗೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ 1ನೇ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎನ್. ರೂಪಾ ವಿಚಾರಣೆ ನಡೆಸಿ ಅಪರಾಧಿಗೆ ಐದು ವರ್ಷ ಜೈಲು ಶಿಕ್ಷೆ, 25 ಸಾವಿರ ರೂ. ದಂಡ ಹಾಗೂ ಡಿಎಲ್‌ಎಸ್ ಎಯಿಂದ ಸಂತ್ರಸ್ತೆಗೆ 50 ಸಾವಿರ ರೂ. ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕರಾಗಿ ಪಿ. ಕೃಷ್ಣವೇಣಿ ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.