ವಿಧಾನಸಭೆ ಚುನಾವಣೆ ಮಹತ್ವದ್ದಾಗಿದೆ
Team Udayavani, May 6, 2018, 10:58 AM IST
ಬೆಂಗಳೂರು: ದೇಶದ ಭವಿಷ್ಯದ ದೃಷ್ಠಿಯಿಂದ ಕರ್ನಾಟಕ ವಿಧಾನಸಭೆ ಚುನಾವಣೆ ಮಹತ್ವದ್ದಾಗಿದೆ ಎಂದು ಸಂಸದ
ಶಶಿ ತರೂರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಗೆಲುವು ರಾಜ್ಯದ ದೃಷ್ಠಿಯಿಂದ ಮಾತ್ರವಲ್ಲ. ಪ್ರಜಾಪ್ರಭುತ್ವದ ದೃಷ್ಠಿಯಿಂದಲೂ ಮಹತ್ವದ್ದಾಗಿದೆ.
ಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ. ಆದರೆ, ಅವರ ಪಕ್ಷದ ಅಭ್ಯರ್ಥಿಗಳನ್ನು ನೋಡಿದರೆ ಗೊತ್ತಾಗುತ್ತದೆ. ಅವರ ಪಟ್ಟಿಯಲ್ಲಿರುವವರು ಎಲ್ಲರೂ ಮೋಸ್ಟ್ ವಾಂಟೆಡ್‌ಗಳಾಗಿದ್ದಾರೆ ಎಂದು ಆರೋಪಿಸಿದರು.
ದೇಶದ ಆರ್ಥಿಕ ಪರಿಸ್ಥಿತಿ ಹದಗೆಡುತ್ತಿದ್ದರೂ ಕರ್ನಾಟಕ ಉತ್ತಮ ಆರ್ಥಿಕ ಸ್ಥಿತಿ ಹೊಂದಿದೆ. ವಿಶ್ವದ ಬಂಡವಾಳ ಕರ್ನಾಟಕಕ್ಕೆ ಹರಿದು ಬರುತ್ತಿದೆ. ಮೋದಿ ಹಾಗೂ ಅಮಿತ್ ಶಾ ಅವರ ಸುಳ್ಳುಗಳನ್ನು ರಾಜ್ಯದ ಜನತೆ ಗುರುತಿಸಿದ್ದಾರೆ. ಮೇಕ್ ಇನ್ ಇಂಡಿಯಾ ಬಗ್ಗೆ ಮಾತನಾಡುವ ಪ್ರಧಾನಿ, ಎಚ್‌ಎಎಲ್‌ಗೆ ದೊರೆಯಬೇಕಿದ್ದ ಯುದ್ಧ ವಿಮಾನ ಖರೀದಿಯನ್ನು ಖಾಸಗಿ ಕಂಪನಿಗೆ ನೀಡಿ ಬೆಂಗಳೂರಿಗರ
ಉದ್ಯೋಗ ಕಸಿದುಕೊಂಡಿದ್ದಾರೆ ಎಂದು ದೂರಿದರು.
ಪಾಕಿಸ್ತಾನದಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡಿರುವ ಬಗ್ಗೆ ಆಕ್ಷೇಪಿಸಿರುವ ಬಿಜೆಪಿಯವರು ಗತಕಾಲದ ಇತಿಹಾಸ ಇಟ್ಟುಕೊಂಡು ವಾದ ಮಾಡುತ್ತಾರೆ. ಕಾಂಗ್ರೆಸ್ ಭವಿಷ್ಯದ ಬಗ್ಗೆ ಚಿಂತನೆ ಮಾಡುತ್ತದೆ. ಟಿಪ್ಪು ಕರ್ನಾಟಕದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಅವರ ಕಾರ್ಯಗಳನ್ನು ರಾಜ್ಯ ಸರ್ಕಾರ ಗುರುತಿಸಿದೆ ಎಂದು ಹೇಳಿದರು. ನಾನು ಗೌಡ, ನಾನೂ ಸಿಎಂ ಆಗುವೆ: ಸಚಿವ ಡಿಕೆಶಿ ಪಾಂಡವಪುರ: ನಾನು ಕೂಡ ಜೆಡಿಎಸ್‌ನ ಎಚ್.ಡಿ.ಕುಮಾರಸ್ವಾಮಿ ರೀತಿ ಗೌಡ. ನಾನೂ ಮುಖ್ಯಮಂತ್ರಿಯಾಗುತ್ತೇನೆ ಎಂದು ಇಂಧನ ಸಚಿವ, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುನರುಚ್ಚರಿಸಿದ್ದಾರೆ. ನಗರದಲ್ಲಿ ಶನಿವಾರ ಪ್ರಚಾರ
ಭಾಷಣ ಮಾಡಿ, ನಾನು ಕೂಡ ಜೆಡಿಎಸ್‌ನ ಎಚ್.ಡಿ.ಕುಮಾರಸ್ವಾಮಿ ರೀತಿ ಗೌಡ. ನಾನೂ ಮುಖ್ಯಮಂತ್ರಿಯಾಗುತ್ತೇನೆ. ಹೀಗಾಗಿ ಜೆಡಿಎಸ್‌ನ ಯಾವುದೇ ಗೊಡ್ಡು ಬೆದರಿಕೆಗಳಿಗೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕ್ಷೇತ್ರದ ಮತದಾರರು ಕಿವಿಗೊಡದೆ
ಕಾಂಗ್ರೆಸ್ ಬೆಂಬಲಿತ ಸ್ವರಾಜ್ ಇಂಡಿಯಾ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವ ಮೂಲಕ ಕಾಂಗ್ರೆಸ್ ಕೈ ಬಲಪಡಿಸಬೇಕು ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.