ಎಲ್ಲಾ ಹಾಲಿಗಳಿಗೆ ಟಿಕೆಟ್‌ ಖಾತ್ರಿ ಇಲ್ಲ


Team Udayavani, Mar 27, 2018, 6:00 AM IST

26BNP-(19).jpg

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಆಕಾಂಕ್ಷಿಗಳ ಪಟ್ಟಿಯನ್ನು “ಹೈಕಮಾಂಡ್‌’ ಅಂಗಳಕ್ಕೆ ತಲುಪಿಸಲು ಕೆಪಿಸಿಸಿ ಚುನಾವಣಾ ಸಮಿತಿ ನಿರ್ಧರಿಸಿದ್ದು, ಹಾಲಿ ಶಾಸಕರ ಕ್ಷೇತ್ರಗಳಲ್ಲಿನ ಇತರೆ ಆಕಾಂಕ್ಷಿಗಳು ಪಟ್ಟಿಯಲ್ಲಿ ಸೇರಿದ್ದಾರೆ.

ಹಾಲಿ ಶಾಸಕರ ಪೈಕಿ ಅನಾರೋಗ್ಯ ಹಾಗೂ ಕ್ಷೇತ್ರದಲ್ಲಿ ವಿರೋಧಿ ಅಲೆ ಇರುವವರಿಗೆ ಟಿಕೆಟ್‌ ನೀಡದಿರುವ ಸಂಬಂಧ ನೇರವಾಗಿ ಶಿಫಾರಸು ಮಾಡಲು “ಧೈರ್ಯ’ ಮಾಡದ ಚುನಾವಣಾ ಸಮಿತಿ ಹೈಕಮಾಂಡ್‌ಗೆ ಎಲ್ಲರ ಪಟ್ಟಿ ಕಳುಹಿಸಲು ತೀರ್ಮಾನಿಸಿದೆ. ಹೀಗಾಗಿ, ಇದೀಗ ಎಲ್ಲರ ಚಿತ್ತ ಹೈಕಮಾಂಡ್‌ನ‌ತ್ತ ಎಂಬಂತಾಗಿದೆ.

ಅನಾರೋಗ್ಯದಿಂದ ಬಳಲುತ್ತಿರುವ ಹಾಗೂ ಕ್ಷೇತ್ರದಲ್ಲಿ ವರ್ಚಸ್ಸು ಕಳೆದುಕೊಂಡಿರುವ ಹಾಲಿ ಶಾಸಕರಿಗೆ ನಿಮ್ಮ ಬದಲಿಗೆ ಬೇರೆ
ಅಭ್ಯರ್ಥಿ ಹೆಸರು ಕೊಡಿ ಇಲ್ಲವೇ ನಾವೇ ಆ ಕೆಲಸ ಮಾಡುತ್ತೇವೆ ಎಂದು ಹೈಕಮಾಂಡ್‌ ನಿಂದಲೇ ಸೂಚನೆ ಸಿಗಲಿದೆ ಎಂದು
ಮೂಲಗಳು ತಿಳಿಸಿವೆ.

ಈ ನಡುವೆ ಎಐಸಿಸಿ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷ ಮಧುಸೂಧನ್‌ ಮಿಸಿOಉ ಮಂಗಳವಾರ ಬೆಂಗಳೂರಿಗೆ ಆಗಮಿಸುತ್ತಿದ್ದು,ರಾಜ್ಯ ಚುನಾವಣಾ ಸಮಿತಿ ಸದಸ್ಯರೊಂದಿಗೆ ಚರ್ಚೆ ನಡೆಸಲಿದ್ದಾರೆ. ಏಪ್ರಿಲ್‌ 2 ರಂದು ನಡೆಯುವ ಪರಿಶೀಲನಾ ಸಮಿತಿ ಸಭೆಯಲ್ಲಿ ಮಧುಸೂಧನ ಮಿಸಿOಉ ನೇತೃತ್ವದ ಸಮಿತಿ ರಾಜ್ಯ ಚುನಾವಣಾ ಸಮಿತಿಯ ಪಟ್ಟಿ ಬಗ್ಗೆ ಚರ್ಚೆ ನಡೆಸಲಿದ್ದು ಅಲ್ಲಿ ಒಂದೊಂದು ಕ್ಷೇತ್ರಕ್ಕೆ ಎರಡೆರಡು ಹೆಸರುಗಳ ಪಟ್ಟಿ ಸಿದಟಛಿಪಡಿಸಲಾಗುವುದು. ನಂತರ ರಾಹುಲ್‌ ಗಾಂಧಿ ಅಧ್ಯಕ್ಷತೆಯ ಕೇಂದ್ರ ಸಮಿತಿಗೆ ಪಟ್ಟಿ ತಲುಪಿ ಅಲ್ಲಿ ಒಂದು ಹೆಸರು ಅಂತಿಮಗೊಳ್ಳಲಿದೆ ಎಂದು ಹೇಳಲಾಗಿದೆ.

ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಬೆಂಗಳೂರು ವಿಭಾಗದಲ್ಲಿ ಏಪ್ರಿಲ್‌ ಮೊದಲ ವಾರದಲ್ಲಿ ಜನಾಶೀರ್ವಾದ ಯಾತ್ರೆ ಕೈಗೊಳ್ಳಲು ತೀರ್ಮಾನಿಸಿದ್ದು, ಆ ಯಾತ್ರೆಯ ನಂತರ ಎಐಸಿಸಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಸಲು ತೀರ್ಮಾನಿಸಿದ್ದಾರೆ.

ಆ ಸಭೆಯ ನಂತರ ಏಪ್ರಿಲ್‌ 15ರ ವೇಳೆಗೆ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರಿನ ಹೊರ ವಲಯದಲ್ಲಿ ಖಾಸಗಿ ರೆಸಾರ್ಟ್‌ನಲ್ಲಿ ನಡೆದ ಸಭೆಯಲ್ಲಿ ಕೆಪಿಸಿಸಿ ಚುನಾವಣಾ ಸಮಿತಿ ಸಭೆಯಲ್ಲಿ 224
ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸುದೀರ್ಘ‌ವಾಗಿ ಚರ್ಚಿಸಲಾಯಿತು. ಕೆಲವು ಹಾಲಿ ಶಾಸಕರ ಕ್ಷೇತ್ರಗಳಲ್ಲಿಯೂ
ಪ್ರಬಲ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿರುವುದರಿಂದ ಅಂತಿಮ ತೀರ್ಮಾನ ಹೈಕಮಾಂಡ್‌ಗೆ ಬಿಡಲು ನಿರ್ಧರಿಸಲಾಯಿತು.
ಈ ಹಿಂದೆ ನಡೆದ ಮೊದಲ ಸಭೆಯಲ್ಲಿ ಕಾಂಗ್ರೆಸ್‌ ಶಾಸಕರು ಇಲ್ಲದ 90 ಕ್ಷೇತ್ರಗಳ ಬಗ್ಗೆ ಚರ್ಚಿಸಿ ಆಕಾಂಕ್ಷಿಗಳ  ಪಟ್ಟಿ 
ಸಿದ್ಧಪಡಿಸಲಾಗಿತ್ತು. ಹೀಗಾಗಿ, ಸೋಮವಾರದ ಸಭೆಯಲ್ಲಿ ಹಾಲಿ ಶಾಸಕರು, ಜೆಡಿಎಸ್‌ ಹಾಗೂ ಇತರೆ ಪಕ್ಷಗಳಿಂದ  ಬಂದಿರುವ ಶಾಸಕರ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಚರ್ಚೆ ನಡೆಯಿತು.

ಸಭೆಯಲ್ಲಿ ಕೆಲವರು ಹಾಲಿ ಶಾಸಕರಿಗೆ ಟಿಕೆಟ್‌ ಖಾತ್ರಿ ಮಾಡಿ ಕ್ಷೇತ್ರದಲ್ಲಿ ಚುನಾವಣಾ ಕೆಲಸ ಮಾಡಲು ಅವಕಾಶ ಮಾಡಿಕೊಡುವಂತೆ ಸಲಹೆ ನೀಡಿದರಾದರೂ ಆ ಸೂಚನೆಯೂ ಹೈಕಮಾಂಡ್‌ನಿಂದಲೇ ಬರಲಿ ಎಂಬ ಲೆಕ್ಕಾಚಾರದಲ್ಲಿ ಸಂಪೂರ್ಣ ಪಟ್ಟಿಯನ್ನು ಹೈ ಕಮಾಂಡ್‌ಗೆ ಕಳುಹಿಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

ಹಾಲಿ ಇರುವ ಸುಮಾರು 15 ರಿಂದ 20 ಶಾಸಕರ ಕಾರ್ಯ ವೈಖರಿಯ ಬಗ್ಗೆ ಆರೋಪಗಳು ಕೇಳಿ ಬಂದಿದ್ದು, ಕೆಲವು ಶಾಸಕರ ಅನಾರೋಗ್ಯ ಹಾಗೂ ವಯಸ್ಸಿನ ಕಾರಣ ಟಿಕೆಟ್‌ ನೀಡುವುದು ಅನುಮಾನ ಎನ್ನಲಾಗುತ್ತಿದೆ. ಅಲ್ಲದೇ ರಾಹುಲ್‌ ಗಾಂಧಿ ಕೂಡ ಎಲ್ಲ ಕ್ಷೇತ್ರಗಳ ವರದಿ ಪಡೆದುಕೊಂಡಿದ್ದು, ಅವರ ಬಳಿ ಇರುವಮಾಹಿತಿಯನ್ನೂ ಪರಿಗಣಿಸಿ ಯಾರಿಗೆ ಟಿಕೆಟ್‌ ನೀಡಬೇಕು ಎನ್ನುವುದನ್ನು ಅಂತಿಮಗೊಳಿಸಲಿದ್ದಾರೆ ಎಂದು ಹೇಳಲಾಗಿದೆ.

ಸಭೆಯ ನಂತರ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌, ಹಾಲಿ ಶಾಸಕರ ಕ್ಷೇತ್ರಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಎಲ್ಲ ಶಾಸಕರ ಹೆಸರು ಮತ್ತು ಆಕಾಂಕ್ಷಿಗಳ ಹೆಸರನ್ನೂ ಕೇಂದ್ರಕ್ಕೆ ಕಳುಹಿಸಲು ನಿರ್ಧರಿಸಿದ್ದೇವೆ. ಏಪ್ರಿಲ್‌ 9,10 ರಂದು ದೆಹಲಿಯಲ್ಲಿ ಕೇಂದ್ರ ಸಮಿತಿ ಸಭೆ ನಡೆಯಲಿದೆ. ಏಪ್ರಿಲ್‌ 15ರೊಳಗೆ 224 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದರು.

ವೀರಪ್ಪ ಮೊಯಿಲಿ ಅವರು ತಮ್ಮ ಪುತ್ರನ ಅರ್ಜಿ ಪರಿಗಣಿಸದಂತೆ ಮನವಿ ಮಾಡಿದ್ದಾರೆ. ಹರ್ಷ ಮೊಯಿಲಿಗೆ ನೋಟಿಸ್‌ ನೀಡಿದ್ದೇವೆ. ಇನ್ನೆರಡು ದಿನದಲ್ಲಿ ಉತ್ತರ ಕೊಡುತ್ತಾರೆ ಎಂದು ಹೇಳಿದರು.

ಲಿಂಗಾಯಿತ ಪ್ರತ್ಯೇಕ ಧರ್ಮದ ಬಗ್ಗೆ ಮುನಿಸಿಕೊಂಡಿರುವ ಶ್ಯಾಮನೂರು ಶಿವಶಂಕರಪ್ಪ, ಎಸ್‌.ಎಸ್‌.ಮಲ್ಲಿಕಾರ್ಜುನ್‌
ಕುರಿತು ಕೇಳಿದಾಗ, ಲಿಂಗಾಯಿತ -ವೀರಶೈವ ಪ್ರತ್ಯೇಕ ಧರ್ಮ ಶಿಫಾರಸಿಗೂ ಪಕ್ಷಕ್ಕೂ ಸಂಬಂಧವಿಲ್ಲ. ಪಕ್ಷದ ಚುನಾವಣಾ ಸಮಿತಿ ಇಬ್ಬರ ಹೆಸರನ್ನೂ ಪಟ್ಟಿಯಲ್ಲಿ ಸೇರಿಸಿದೆ ಎಂದು ತಿಳಿಸಿದರು.

ಪುತ್ರ ಹರ್ಷಗೆ ಟಿಕೆಟ್‌ ಬೇಡ
ಎಂದ ಸಂಸದ ಮೊಯಿಲಿ

ಗುತ್ತಿಗೆದಾರರು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಿದ್ದಾರೆ ಎಂಬ ಟ್ವೀಟ್‌ ಮಾಡಿದ ಆರೋಪ ಎದುರಿಸಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದ ಕಾರ್ಕಳ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿ ಹರ್ಷ ಮೊಯಿಲಿ ಹೆಸರನ್ನು ಪಟ್ಟಿಯಲ್ಲಿ ಸೇರಿಸದಂತೆ ವೀರಪ್ಪ ಮೊಯಿಲಿ ಅವರೇ ಸಭೆಯಲ್ಲಿ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಅವರ ಮನವಿ ಮೇರೆಗೆ ಹರ್ಷ ಹೆಸರನ್ನು ಕೈ ಬಿಡಲಾಗಿದೆ.  

ಖೇಣಿಗೆ ವಿರೋಧ 
ಬೀದರ್‌ ದಕ್ಷಿಣ ಕ್ಷೇತ್ರದ ಶಾಸಕ ಅಶೋಕ್‌ ಖೇಣಿ ಹೆಸರು ಪಟ್ಟಿಯಲ್ಲಿ ಸೇರಿಸಲು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಆದರೂ, ಅವರ ಹೆಸರನ್ನೂ ಪಟ್ಟಿಯಲ್ಲಿ ಸೇರಿಸಲಾಗಿದೆ. ಅಲ್ಲದೇ ಜೆಡಿಎಸ್‌ನಿಂದ ಬಂದಿರುವ ಏಳು ಜನ ಬಂಡಾಯ ಶಾಸಕರ ಹೆಸರುಗಳನ್ನೂ ಪಟ್ಟಿಯಲ್ಲಿ ಸೇರಿಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

ನಾಳೆ ಸಿಎಂ, ಪರಂ ಸಭೆ 
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್‌ ಅವರು ಬುಧವಾರ ಜಿಲ್ಲಾಧ್ಯಕ್ಷರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಪ್ರತ್ಯೇಕ ಸಭೆ ನಡೆಸಿ, ಈಗಾಗಲೇ ಸಿದಟಛಿಪಡಿಸಿರುವ ಪಟ್ಟಿಯ ಬಗ್ಗೆಯೂ ಮತ್ತೂಂದು ಬಾರಿ ಅಭಿಪ್ರಾಯ ಸಂಗ್ರಹಿಸಿ ಕೇಂದ್ರ ಚುನಾವಣಾ ಸಮಿತಿ ಸಭೆ ವೇಳೆ ಮಂಡಿಸಲಿದ್ದಾರೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

SMG-Meggan

Shivamogga: ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿ ಸಾವು

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ

Hunasu-Accident

ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿಗೆ ತೀವ್ರ ಗಾಯ

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

KSRTC

Ticket Price Hike: ನಾಲ್ಕು ನಿಗಮಗಳ ಬಸ್‌ ಪ್ರಯಾಣ ದರ ಇಂದು ಮಧ್ಯರಾತ್ರಿಯಿಂದಲೇ ಹೆಚ್ಚಳ

1-asasa

Viksit Bharat ‘ಯಂಗ್‌ ಲೀಡರ್ ಡೈಲಾಗ್‌’:ಉಡುಪಿಯ ಮನು ಶೆಟ್ಟಿ ಆಯ್ಕೆ

chowta-Rajnath

Request: ಮಂಗಳೂರಿನಲ್ಲಿ ಸೈನಿಕ ಶಾಲೆ, ಮಿಲಿಟರಿ ನೆಲೆ ಸ್ಥಾಪಿಸಿ: ಕ್ಯಾ.ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

KSRTC

Ticket Price Hike: ನಾಲ್ಕು ನಿಗಮಗಳ ಬಸ್‌ ಪ್ರಯಾಣ ದರ ಇಂದು ಮಧ್ಯರಾತ್ರಿಯಿಂದಲೇ ಹೆಚ್ಚಳ

1-sdasad

Shivamogga: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಇಂದಿನಿಂದಲೇ ನೀರು

1-atul-subhash

Atul Subhash ಆತ್ಮಹ*ತ್ಯೆ ಪ್ರಕರಣ: ಪತ್ನಿ, ಕುಟುಂಬದವರಿಗೆ ಜಾಮೀನು ಮಂಜೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

SMG-Meggan

Shivamogga: ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿ ಸಾವು

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ

puttige-6-

Udupi;ಗೀತಾರ್ಥ ಚಿಂತನೆ 146: ಚಾರ್ವಾಕ ಬಿಟ್ಟು ಉಳಿದೆಲ್ಲ ಮತಗಳಲ್ಲಿ ಪುಣ್ಯಪಾಪ ಕಲ್ಪನೆ

train-track

ಜ.6- 9: ಜೋಕಟ್ಟೆ ಲೆವೆಲ್‌ಕ್ರಾಸ್‌ ಬಂದ್‌

1-ksde

CPCRI; ಅಡಿಕೆ ಉತ್ಪನ್ನ ಬಗ್ಗೆ ಸಂಶೋಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.