ಜೆಡಿಎಸ್‌ಗೆ ಆಂಧ್ರದಿಂದ ಸ್ಟಾರ್ ಪ್ರಚಾರಕರ ಆಮದು
Team Udayavani, Jan 25, 2018, 6:15 AM IST
ಬೆಂಗಳೂರು: ವಿಧಾನಸಭೆ ಚುನಾವಣೆಗಾಗಿ “ಸ್ಟಾರ್’ ಪ್ರಚಾರಕರ ಕೊರತೆ ಎದುರಿಸುತ್ತಿರುವ ಜೆಡಿಎಸ್ ನೆರೆಯ ಆಂಧ್ರದಿಂದ ಪವರ್‌ಸ್ಟಾರ್ ಪವನ್ ಕಲ್ಯಾಣ್‌ಗೆ ಗಾಳ ಹಾಕಿದೆ.
ಜತೆಗೆ, ಕಿಚ್ಚ ಸುದೀಪ್ ಅವರಿಗೂ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವಂತೆ ಖುದ್ದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮನವೊಲಿಸಿದ್ದಾರೆ. ಮಧು ಬಂಗಾರಪ್ಪ ಹಾಗೂ ಗೀತಾ ಶಿವರಾಜ್‌ಕುಮಾರ್ ಜೆಡಿಎಸ್‌ನಲ್ಲಿ ಗುರುತಿಸಿಕೊಂಡಿರುವುದರಿಂದ ಶಿವರಾಜ್‌ಕುಮಾರ್ ಜೆಡಿಎಸ್ ಪರ ಪ್ರಚಾರಕ್ಕೆ ಆಗಮಿಸಬಹುದು ಎಂಬ ನಿರೀಕ್ಷೆಯೂ ಇದೆೆ. ಆದರೆ, ಸುದೀಪ್ ಹಾಗೂ ಶಿವರಾಜ್‌ಕುಮಾರ್ ಅವರ ಒಪ್ಪಿಗೆ ಇನ್ನೂ ಸಿಕ್ಕಿಲ್ಲ.
ಎಚ್.ಡಿ.ಕುಮಾರಸ್ವಾಮಿಯವರ ಪುತ್ರ ನಿಖೀಲ್ ಸಹ ಸಿನಿಮಾ ನಟರಾಗಿದ್ದು ಅವರೂ ಜೆಡಿಎಸ್‌ಗೆ “ಸ್ಟಾರ್ ಪ್ರಚಾರಕ’ ಆಗಲಿದ್ದಾರೆ. ಸಿನಿಮಾ ರಂಗದ ಸಂಪರ್ಕದಿಂದ ಕನ್ನಡ ಹಾಗೂ ತೆಲುಗು ಚಿತ್ರರಂಗದ ಕೆಲವು ನಟರನ್ನು ಜೆಡಿಎಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಕರೆತರಲು ನಿಖೀಲ್ ಪ್ರಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಸಿನಿಮಾ ನಟರಿಂದ ಮತ ಗಿಟ್ಟುವುದಿಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ ಅವರು ಆ ಬಗ್ಗೆ ಹೆಚ್ಚಾಗಿ ತಲೆಕೆಡಿಸಿಕೊಂಡಿರಲಿಲ್ಲ. ಆದರೆ, ಈ ಬಾರಿ ಮಾಡು ಇಲ್ಲವೇ ಮಡಿ ಹೋರಾಟ ನಡೆಯುತ್ತಿರುವುದರಿಂದ ಪಕ್ಷದ ಪರವಾಗಿ ಒಂದಷ್ಟು ಸ್ಟಾರ್ ಪ್ರಚಾರಗಳು ಇಳಿದರೆ ಆಕರ್ಷಣೆ ಇರುತ್ತದೆ ಎಂಬುದು ಪಕ್ಷದ ನಾಯಕರ ಸಲಹೆ.
ಹೀಗಾಗಿ, ಕುಮಾರಸ್ವಾಮಿ ಪವನ್‌ಕಲ್ಯಾಣ್ ಜತೆ ಮಾತುಕತೆ ನಡೆಸಿ ಒಪ್ಪಿಸಿದ್ದಾರೆ. ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಪವನ್ ಕಲ್ಯಾಣ್ ಅಭಿಮಾನಿಗಳನ್ನು ಹೊಂದಿರುವುದರಿಂದ ಅವರು ಪ್ರಚಾರಕ್ಕೆ ಬಂದರೆ ನೆರವಾಗಬಹುದು ಎಂಬ ಲೆಕ್ಕಾಚಾರ ಇದೆ. ಚುನಾವಣೆ ವೇಳೆಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿರುವ ಒಂದಷ್ಟು ನಟ-ನಟಿಯರು ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆಯೂ ಇದೆ.
– ಎಸ್.ಲಕ್ಷ್ಮಿನಾರಾಯಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಜಮೀರ್ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ ದೂರು
Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್ ರಾಜೀನಾಮೆಗೆ ಬಿಜೆಪಿ ಪಟ್ಟು
Congress Government: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಮುಹೂರ್ತ ನಿಗದಿ: ವಿಜಯೇಂದ್ರ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
MUST WATCH
ಹೊಸ ಸೇರ್ಪಡೆ
Daily Horoscope; ಇಷ್ಟಾರ್ಥ ಸಿದ್ಧಿಯ ದಿನ..ಉದ್ಯೋಗ ಸ್ಥಾನದಲ್ಲಿ ಸದ್ಯಕ್ಕೆ ನಿಶ್ಚಿಂತೆ
Milk: ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ
Congress: ಜಮೀರ್ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ ದೂರು
Olympics; 2036ರ ಒಲಿಂಪಿಕ್ಸ್‌ಗೆ ಬಿಡ್: ಭಾರತದಿಂದ ಐಒಸಿಗೆ ಅಧಿಕೃತ ಅರ್ಜಿ
Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್ ರಾಜೀನಾಮೆಗೆ ಬಿಜೆಪಿ ಪಟ್ಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.