ಸ್ಲಂನಲ್ಲಿ ಅಪಾರ್ಟ್‌ಮೆಂಟ್ ಕಟ್ಟಲು ನೆರವು
Team Udayavani, Sep 26, 2019, 3:08 AM IST
ಬೆಂಗಳೂರು: “ಕೊಳಗೇರಿ ಪ್ರದೇಶಗಳಲ್ಲಿ ಬಹುಮಹಡಿ ಕಟ್ಟಡಗಳನ್ನು ನಿರ್ಮಿಸಲು ಮುಂದೆಬರುವ ಬಿಲ್ಡರ್‌ಗಳು, ಡೆವಲಪರ್‌ಗಳಿಗೆ ಸರ್ಕಾರ ಆರ್ಥಿಕ ನೆರವು ನೀಡಲಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ನಗರದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಆವರಣದಲ್ಲಿ ಬುಧವಾರ ರಾಷ್ಟ್ರೀಯ ರಿಯಲ್ ಎಸ್ಟೇಟ್ ಅಭಿವೃದ್ಧಿ ಪರಿಷತ್ತು, ಕರ್ನಾಟಕ (ಎನ್‌ಆರ್‌ಇಡಿಸಿಒ) ಹಮ್ಮಿಕೊಂಡಿದ್ದ ಕರ್ನಾಟಕ ಬಿಲ್ಡರ್ ಮತ್ತು ಡೆವಲಪರ್ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರವು ಪ್ರತಿಯೊಬ್ಬರಿಗೂ ಸೂರು ಕಲ್ಪಿಸಲು ಹಲವು ಯೋಜನೆ ರೂಪಿಸಿದೆ. ಇದಕ್ಕೆ ಪೂರಕವಾಗಿ ರಾಜ್ಯದ ಕೊಳಗೇರಿಗಳಲ್ಲಿ 2 ಬಿಎಚ್‌ಕೆ ಫ್ಲಾಟ್‌ಗಳಿರುವ ಬಹುಮಹಡಿ ವಸತಿ ಸಮುತ್ಛಯಗಳನ್ನು ನಿರ್ಮಿಸಲು ಮುಂದೆ ಬಂದರೆ, ಅಗತ್ಯವಿರುವ ಹಣ ನೀಡಲು ಸರ್ಕಾರ ಸಿದ್ಧವಿದೆ ಎಂದರು.
ಸೂರು ಇಲ್ಲದವರು ಮನೆ ನಿರ್ಮಿಸಿಕೊಳ್ಳಲು ರಾಜ್ಯದಲ್ಲಿ ಈಗಾಗಲೇ ಇಂದಿರಾ ಆವಾಸ್, ಬಸವ ವಸತಿ, ಅಂಬೇಡ್ಕರ್ ವಸತಿ ಯೋಜನೆ ಸೇರಿದಂತೆ ಹಲವು ಯೋಜನೆಗಳನ್ನು ರೂಪಿಸಲಾಗಿದೆ. ಕೊಳಗೇರಿಗಳ ನೂರಾರು ಕುಟುಂಬಗಳಿಗೆ ಸೂರಿಲ್ಲ. ಇದ್ದರೂ ಸುಸ್ಥಿತಿಯಲ್ಲಿ ಇರುವುದಿಲ್ಲ. ಅಂತಹ ಕಡೆಗಳಲ್ಲಿ ಬಹುಮಹಡಿ ವಸತಿ ಸಮುತ್ಛಯಗಳ ನಿರ್ಮಾಣಕ್ಕೆ ಬಿಲ್ಡರ್‌ಗಳು ಮುಂದೆಬರಬೇಕು. ರಿಯಲ್ ಎಸ್ಟೇಟ್ ಉದ್ಯಮದ ಬೆಳವಣಿಗೆಗೆ ಪೂರಕವಾದ ಯಾವುದೇ ರೀತಿಯ ಸಲಹೆಗಳನ್ನು ಸರ್ಕಾರ ತಕ್ಷಣ ಅನುಷ್ಠಾನಗೊಳಿಸಲು ಬದ್ಧವಾಗಿದೆ ಎಂದು ಭರವಸೆ ನೀಡಿದರು.
ಕಿರುಕುಳ ನೀಡಿದರೆ ಕ್ರಮ: ಭೂಮಿ ಪರಿವರ್ತನೆ, ಕಟ್ಟಡ ನಿರ್ಮಾಣ ಯೋಜನೆಗಳಿಗೆ ಅನುಮತಿ ನೀಡುವಲ್ಲಿ ಇರುವ ವಿಳಂಬ ಧೋರಣೆ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಮೂಲಕ ರಿಯಲ್ ಎಸ್ಟೇಟ್ ಉದ್ಯಮವನ್ನು ಪ್ರೋತ್ಸಾಹಿಸಲಾಗುವುದು. ಅಧಿಕಾರಿಗಳು ಬಿಲ್ಡರ್‌ಗಳಿಗೆ ಕಿರುಕುಳ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್ಚರಿಸಿದರು.
ಎನ್‌ಆರ್‌ಇಡಿಸಿಒ ಅಧ್ಯಕ್ಷ ಡಾ.ನಿರಂಜನ್ ಹೀರಾನಂದಾನಿ ಮಾತನಾಡಿ, ನಿರ್ಮಾಣ ಯೋಜನೆಗಳಿಗೆ ಅನುಮೋದನೆ, ಭೂಮಿ ಪರಿವರ್ತನೆಗೆ ಮಂಜೂರಾತಿ ಸೇರಿದಂತೆ ಹಲವು ವಿಭಾಗಗಳಲ್ಲಿ ನೂರಾರು ಪ್ರಕರಣಗಳು ಎರಡು-ಮೂರು ವರ್ಷಗಳಿಂದ ವಿಲೇವಾರಿ ಆಗುತ್ತಿಲ್ಲ. ಈ ವಿಳಂಬ ಧೋರಣೆಯು ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಬೇಸರ ಉಂಟುಮಾಡಿದೆ. ತ್ವರಿತಗತಿಯಲ್ಲಿ ಅನುಮತಿ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ಕೇಂದ್ರ ಸರ್ಕಾರ ಈಗಾಗಲೇ ನಿರ್ಮಾಣ ಯೋಜನೆಗಳಿಗಿದ್ದ ತೆರಿಗೆ, ಕಾರ್ಪೊರೇಟ್ ಕಂಪನಿಗಳಿಗೆ ವಿಧಿಸುತ್ತಿದ್ದ ತೆರಿಗೆ ಪ್ರಮಾಣ ಸಾಕಷ್ಟು ಕಡಿತಗೊಳಿಸಿದೆ. ಗೃಹ ಸಾಲದ ಮೇಲಿನ ಬಡ್ಡಿ ದರ ಕಡಿಮೆ ಮಾಡುವುದು ಸೇರಿದಂತೆ ಉದ್ಯಮದ ಚೇತರಿಕೆಗೆ ಹಲವು ಕ್ರಮಗಳನ್ನು ಕೈಗೊಂಡಿದೆ. ಇದಕ್ಕೆ ಪೂರಕವಾಗಿ ರಾಜ್ಯ ಸರ್ಕಾರಗಳು ಕೂಡ ಉತ್ತೇಜನಕಾರಿ ಕ್ರಮ ಕೈಗೊಳ್ಳಬೇಕು.
ಈ ನಿಟ್ಟಿನಲ್ಲಿ ಮಹಾರಾಷ್ಟ್ರ ಸರ್ಕಾರ ಅಭಿವೃದ್ಧಿ ಶುಲ್ಕವನ್ನು ಶೇ.33ರಷ್ಟು ಕಡಿಮೆ ಮಾಡಿದೆ. ನೋಂದಣಿ ಮುದ್ರಾಂಕ ಶುಲ್ಕ ಕಡಿಮೆ ಮಾಡಲು ಚಿಂತನೆ ನಡೆಸಿದೆ. ಕರ್ನಾಟಕವೂ ಈ ದಿಸೆಯಲ್ಲಿ ಚಿಂತನೆ ನಡೆಸಬೇಕು ಎಂದು ಹೇಳಿದರು. ಎನ್‌ಆರ್‌ಇಡಿಸಿಒ ಕರ್ನಾಟಕ ವೃತ್ತದ ಅಧ್ಯಕ್ಷ ಎಂ. ಸತೀಶ್ ಕುಮಾರ್, ಗೌರವ ಕಾರ್ಯದರ್ಶಿ ಡಾ.ಸುಜಿತ್ ಕುಮಾರ್, ಎಫ್ಕೆಸಿಸಿಐ ಅಧ್ಯಕ್ಷ ಸಿ.ಆರ್. ಜನಾರ್ದನ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು
New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್ ಕಸ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.