ವೇತನಾನುದಾನಕ್ಕಾಗಿ ಅಹೋರಾತ್ರಿ ಸತ್ಯಾಗ್ರಹ
Team Udayavani, Jul 23, 2018, 7:00 AM IST
ಬೆಂಗಳೂರು: ದಶಕಗಳ ಹಿಂದೆ ಆರಂಭವಾಗಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸುವಲ್ಲಿ
ರಾಜ್ಯ ಸರ್ಕಾರ ತಾರತಮ್ಯ ಮಾಡಿರುವುದು ಸರಿಯಲ್ಲ. ಎಲ್ಲ ಅರ್ಹ ಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸಿ, ಅಲ್ಲಿನ
ಶಿಕ್ಷಕರಿಗೆ ಸೂಕ್ತ ಸೇವಾ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿನೊಂದ ಶಿಕ್ಷಕರು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ (ಫ್ರೀಡಂ ಪಾರ್ಕ್) ಅಹೋರಾತ್ರಿ ಸತ್ಯಾಗ್ರಹ ಆರಂಭಿಸಿದ್ದಾರೆ.
1987ರಿಂದ 1994-95ರ ಅವಧಿಯಲ್ಲಿ ಆರಂಭವಾಗಿರುವ ಸಾವಿರಾರು ಶಾಲೆಗಳಿಗೆ ಸರ್ಕಾರ ವೇತನಾನುದಾನ ನೀಡಿದೆ. ಆದರೆ, ಇದೇ ಅವಧಿಯಲ್ಲಿ ಆರಂಭವಾದ ಸುಮಾರು 87 ಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸಲು ಸರ್ಕಾರ ಇಲ್ಲಸಲ್ಲದ ಆಕ್ಷೇಪಣೆ ಒಡ್ಡುತ್ತಿದೆ. 87 ಶಾಲೆಗಳ ಕಡತಕ್ಕೆ ಆರ್ಥಿಕ ಅನುಮೋದನೆ ನೀಡದೆ ಹಿಂದಕ್ಕೆ ಕಳುಹಿಸಿದೆ ಎಂದು ರಾಜ್ಯ ಅನುದಾನಕ್ಕೆ ಒಳಪಡುತ್ತಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಒಕ್ಕೂಟದ ಅಧ್ಯಕ್ಷ ವರದರಾಜ್ ಹೇಳಿದ್ದಾರೆ.
87 ಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸುವ ಸಂಬಂಧ 2017ರ ಸೆ.15 ಮತ್ತು 27ರಂದು ನಡೆದ ಸಭೆಯಲ್ಲಿ ಅಂದಿನ
ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದರು. ತನ್ವೀರ್ ಸೇಠ್ ಕೂಡ ಸಮಸ್ಯೆಗೆ ಪರಿಹಾರ ನೀಡುವುದಾಗಿ ಹೇಳಿದ್ದರು.
87 ಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸುವವರೆಗೂ ಪ್ರತಿಭಟನೆ ನಡೆಸಲಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ
Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ
Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ
Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್
Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್; ಬೆಳಗಾವಿಗೆ ವಂದೇ ಭಾರತ್ ವಿಸ್ತರಣೆಗೆ ಮನವಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.