Bengaluru: ಅರೆಬೆತ್ತಲೆಗೊಳಿಸಿ ಹಲ್ಲೆ; 7 ಮಂದಿ ಆರೋಪಿಗಳ ಸೆರೆ
Team Udayavani, Jun 9, 2024, 10:49 AM IST
ಬೆಂಗಳೂರು: ಮದ್ಯದ ಅಮಲಿನಲ್ಲಿ ಸಿಗರೇಟ್ ವಿಚಾರಕ್ಕೆ ಪರಿಚಿತನ ಮೇಲೆ ಹಲ್ಲೆ ಮಾಡಿದ್ದ 7 ಜನ ಆರೋಪಿಗಳನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಾಡುಗೋಡಿ ನಿವಾಸಿಗಳಾದ ಮಂಜುನಾಥ್, ಸಂತೋಷ್, ಆಕಾಶ್, ಅಮರೇಶ್, ನವೀನ್, ವಿಶಾಲ್ ಜೋಷಿ ಮತ್ತು ಸುರೇಂದ್ರನನ್ನು ಬಂಧಿಸಲಾಗಿದೆ. ಆರೋಪಿಗಳು ಬಿಹಾರ ಮೂಲದ ಧನಂಜಯ್ ಎಂಬಾತನನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿದ್ದರು ಎಂದು ಪೊಲೀಸರು ಹೇಳಿದರು.
ಬಿಹಾರ ಮೂಲದ ಧನಂಜಯ್ ಮತ್ತು ನೇಪಾಳ ಹಾಗೂ ಸ್ಥಳೀಯ ನಿವಾಸಿಗಳಾದ ಆರೋಪಿಗಳು ಕಾಡುಗೋಡಿಯ ಹೋಟೆಲ್ ವೊಂದರಲ್ಲಿ ಬೇರೆ ಬೇರೆ ವಿಭಾಗಗಳಲ್ಲಿ ಕೆಲಸ ಮಾಡುತ್ತಿದ್ದರು. ಮೇ 7 ರ ತಡರಾತ್ರಿ ಎಲ್ಲರೂ ಪಾರ್ಟಿ ಮಾಡಿದ್ದಾರೆ. ಧನಂಜಯ್ ಕೂಡ ಮದ್ಯ ಸೇವಿಸಿ, ಆರೋಪಿಗಳ ಪೈಕಿ ಪರಿಚಯವಿದ್ದವನಿಂದ ಸಿಗರೇಟ್ ಕೇಳಿದ್ದಾನೆ. ಅದೇ ವಿಚಾರಕ್ಕೆ ಧನಂಜಯ್ ಹಾಗೂ ಆರೋಪಿಗಳ ನಡುವೆ ಗಲಾಟೆ ಆರಂಭವಾಗಿತ್ತು. ಅದು ವಿಕೋಪಕ್ಕೆ ಹೋದಾಗ ಕೋಪಗೊಂಡ ಧನಂಜಯ್ ಕಲ್ಲು ಎತ್ತಿಹಾಕಿ ಆರೋಪಿಗಳ ರೂಮ್ ಬಾಗಿಲು ಒಡೆದಿದ್ದಾನೆ. ಅದರಿಂದ ಸಿಟ್ಟಿಗೆದ್ದ ಆರೋಪಿಗಳು ಧನಂಜಜ್ ನನ್ನ ಅರಬೆತ್ತಲೆಗೊಳಿಸಿ ರಸ್ತೆಗೆ ಕರೆತಂದು ಕೈಗೆ ಸಿಕ್ಕ ದೊಣ್ಣೆ, ಕಲ್ಲು, ಬೆಲ್ಟ್, ಕ್ರೇಟ್‌ನಿಂದ ಹಲ್ಲೆ ಮಾಡಿದ್ದರು. ಆರೋಪಿಗಳು ಬಡಿದಾಡಿದ ದೃಶ್ಯ ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಅದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವಿಡಿಯೋ ವೈರಲ್ ಆಗುತ್ತಿದಂತೆ ಎಚ್ಚೆತ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ನಂತರ ಘಟನೆಯ ಕುರಿತು ಹೋಟೆಲ್ ಮ್ಯಾನೇಜರ್ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು. ಕಾಡುಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.