Bangalore: ಹುಕ್ಕಾ ಬಾರ್ ಮೇಲೆ ದಾಳಿ; 4 ಸೆರೆ
Team Udayavani, Feb 20, 2024, 2:11 PM IST
ಬೆಂಗಳೂರು: ರಾಜ್ಯದಲ್ಲಿ ಹುಕ್ಕಾ ಉತ್ಪನ್ನಗಳ ಮಾರಾಟ ನಿಷೇಧ ಹೇರಿ ರಾಜ್ಯ ಸರ್ಕಾರ ಆದೇಶ ಹೊರಡಿಸಿ ದರೂ ಕೆಲ ಪಬ್ ಹಾಗೂ ಹುಕ್ಕಾ ಬಾರ್ಗಳು ಅಕ್ರಮವಾಗಿ ಹುಕ್ಕಾಉತ್ಪನ್ನಗಳ ಮಾರಾಟ ಮಾಡುತ್ತಿ ರುವುದು ಬೆಳಕಿಗೆ ಬಂದಿದೆ.
ಈ ಹಿನ್ನೆಲೆಯಲ್ಲಿ ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಮಹಿಳಾ ಸಂರಕ್ಷಣಾ ದಳ ಪೊಲೀಸರು ಅಶೋಕ ನಗರದ ವುಡ್ಸ್ಟ್ರೀಟ್ಲ್ಲಿರುವ “ಸಿ7 ಆರ್ ಲಾಂಜ್’ ಎಂಬ ಹುಕ್ಕಾಬಾರ್ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಹುಕ್ಕಾ ಸೇದಲು ಬಳಸುವ ಉಪಕರಣಗಳ, ಹುಕ್ಕಾ ಉತ್ಪನ್ನಗಳು ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.
ಈ ಸಂಬಂಧ ಹುಕ್ಕಾ ಬಾರ್ ಮಾಲೀಕ ಶಹಬಾಜ್ ಬಾಷಾ, ಆತನ ಸಹಚರರಾದ ಗಣೇಶ್, ಸಚಿನ್ ಮತ್ತು ಇತರರು ವಿರುದ್ಧ ಅಶೋಕ ನಗರ ಠಾಣೆಯಲ್ಲಿ ಕೋಟಾ³ ಕಾಯ್ದೆ ಮತ್ತು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, ವಿಷ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಕೆಲ ದಿನಗಳ ಹಿಂದೆ ಹುಕ್ಕಾ ಉತ್ಪನ್ನಗಳ ಮಾರಾಟ ಮತ್ತು ಸಂಗ್ರಹಕ್ಕೆ ನಿಷೇಧ ಹೇರಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಆದರೂ, ಆರೋಪಿ ಶಹಬಾಜ್ ಬಾಷಾ ಹುಕ್ಕಾ ಉತ್ಪನ್ನಗಳ ಮಾರಾಟ ಮಾಡುತ್ತಿದ್ದ. ಜತೆಗೆ ಅವಧಿ ಮೀರಿ ಬಾರ್ ನಡೆಸುತ್ತಿದ್ದ. ಈ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ.
ಈ ಸಂಬಂಧ ಸಿಸಿಬಿ ಪೊಲೀಸರು ಪ್ರಕರಣ ದಾಖಲಿಸಿ, ಆರೋಪಿಗಳನ್ನು ಬಂಧಿಸಲು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ನಾಲ್ವರು ಆರೋಪಿ ಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.