Bangalore: ಅಕ್ರಮ ವಾಸವಾಗಿದ್ದ ವಿದೇಶಿ ಪ್ರಜೆಗಳ ಮನೆ ಮೇಲೆ ದಾಳಿ
Team Udayavani, Apr 2, 2024, 9:17 AM IST
ಬೆಂಗಳೂರು: ವೀಸಾ ಅವಧಿ ಮುಗಿದಿದ್ದರೂ ನಗರದಲ್ಲಿ ಅಕ್ರಮವಾಗಿ ವಾಸವಿರುವ ವಿದೇಶಿ ಪ್ರಜೆಗಳ ಮನೆಗಳ ಮೇಲೆ ಸಿಸಿಬಿ ಪೊಲೀಸರು ಸೋಮವಾರ ರಾತ್ರಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಪಾಸ್ಪೋರ್ಟ್ ಮತ್ತು ವೀಸಾ ಅವಧಿ ಮುಗಿದ್ದಿದ್ದರೂ ಕೆಲ ವಿದೇಶಿ ಪ್ರಜೆಗಳು ನಗರದಲ್ಲಿ ಅಕ್ರಮವಾಗಿ ವಾಸವಿದ್ದಾರೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಬಾಣಸವಾಡಿ, ಸುಬ್ಬಯ್ಯಪಾಳ್ಯ, ಶಿವಾಜಿನಗರ, ರಾಮಮೂರ್ತಿ ನಗರ ದಲ್ಲಿ ವಾಸವಿರುವ ನೈಜೀರಿಯಾ ಮತ್ತು ಆಫ್ರಿಕಾ ಪ್ರಜೆಗಳ ಮನೆ ಮೇಲೆ ದಾಳಿ ನಡೆಸಲಾಗಿದೆ. ಈ ವೇಳೆ ಅವಧಿ ಮುಗಿದಿದ್ದ ವೀಸಾ ಮತ್ತು ಪಾಸ್ಪೋರ್ಟ್ಗಳನ್ನು ವಶಪಡಿಸಿಕೊಂಡಿದ್ದಾರೆ.
ವಿದ್ಯಾರ್ಥಿ ವೀಸಾ ಪಡೆದು ನಗರಕ್ಕೆ ಆಗಮಿಸುವ ಕೆಲ ವಿದೇಶಿಯರು ತಮ್ಮ ವೀಸಾ ಅವಧಿ ಮುಗಿದಿದ್ದರೂ ತಮ್ಮ ದೇಶಗಳಿಗೆ ಹಿಂದಿರುಗದೆ ಅಕ್ರಮವಾಗಿ ನೆಲೆಸಿ ಮಾದಕವಸ್ತು ಮಾರಾಟ ಮತ್ತು ಇತರೆ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.