ಸಂಚಾರ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ: ಇಬ್ಬರ ಸೆರೆ
Team Udayavani, Jul 22, 2023, 9:53 AM IST
ಬೆಂಗಳೂರು: ನೋ-ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ಕಾರಿಗೆ ವೀಲ್ ಕ್ಲಾಂಪ್ ಹಾಕಿದಕ್ಕೆ ಸಂಚಾರ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಇಬ್ಬರು ಆರೋಪಿಗಳನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.
ಸ್ಥಳೀಯ ನಿವಾಸಿಗಳಾದ ಸುಲೇಮಾನ್ ಮತ್ತು ಫಹಾದ್ ಎಂಬುವರನ್ನು ಬಂಧಿಸ ಲಾಗಿದೆ. ಆರೋಪಿಗಳು ಬಾಣಸವಾಡಿ ಸಂಚಾರ ಠಾಣೆಯ ಕಾನ್ಸ್ಟೇಬಲ್ ಉಮೇಶ್ ಮೇಲೆ ಹಲ್ಲೆ ನಡೆಸಿದ್ದರು. ಕಾನ್ಸ್ಟೇಬಲ್ ಉಮೇಶ ಮತ್ತು ಎಎಸ್ಐ ನಾರಾಯಣಸ್ವಾಮಿ ಜತೆ ಜುಲೈ 19ರಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸಂಜೆ 6 ಗಂಟೆ ಸುಮಾರಿಗೆ ಎಚ್ಆರ್ಬಿಆರ್ ಲೇಔಟ್ನ 5ನೇ ಮುಖ್ಯರಸ್ತೆಯಲ್ಲಿ ಈ ವೇಳೆ ಕಾರು ಮಾಲೀಕ ನೋ ಪಾರ್ಕಿಂಗ್ನಲ್ಲಿ ಕಾರು ನಿಲ್ಲಿಸಿದ್ದಾನೆ. ಅದನ್ನು ಗಮನಿಸಿದ ಉಮೇಶ್ ಕಾರಿಗೆ ವೀಲ್ ಕ್ಲಾಂಪ್ ಹಾಕಿದ್ದಾರೆ.
ಕೆಲ ಹೊತ್ತಿನ ಬಳಿಕ ಕಾರಿನ ಬಳಿಕ ಮೊಬೈಲ್ ನಂಬರ್ವೊಂದರಿಂದ ಉಮೇಶ್ಗೆ ಕರೆ ಬಂದಿದ್ದು, ತಮ್ಮ ಜತೆ ಇರುವ ಮಹಿಳೆಗೆ ತೊಂದರೆ ಆಗಿದ್ದು, ಕೂಡಲೇ ಸ್ಥಳಕ್ಕೆ ಬಂದು ಕ್ಲಾಂಪ್ ತೆಗೆಯುವಂತೆ ಕೋರಿದ್ದಾರೆ. ಹೀಗಾಗಿ ಎಎಸ್ಐ ನಾರಾಯಣಸ್ವಾಮಿ ಜತೆ ಸ್ಥಳಕ್ಕೆ ಬಂದ ಉಮೇಶ್, ಮೇಲೆ ಏಕಾಏಕಿ ಇಬ್ಬರು ಪುರುಷರು ಮತ್ತು ಮಹಿಳೆಯರು ಜಗಳ ತೆಗೆದು, ಯಾಕ್ಕೆ ಕ್ಲಾಂಪ್ ಹಾಕಿದ್ದಿರಾ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಅದಕ್ಕೆ ಉಮೇಶ್, ನಿಷೇಧಿತ ಪ್ರದೇಶದಲ್ಲಿ ಕಾರು ನಿಲ್ಲಿಸಿದ್ದಿರಾ? ಹೀಗಾಗಿ ಕ್ಲಾಂಪ್ ಹಾಕಲಾಗಿದೆ ಎಂದಿದ್ದಾರೆ. ಆಗ ಆಕ್ರೋಶ ಗೊಂಡ ಇಬ್ಬರು ಪುರುಷರು ಉಮೇಶ್ ಮೇಲೆ ಹಲ್ಲೆ ನಡೆಸಿದ್ದಾರೆ. ಮಹಿಳೆಯರು ಕೂಡ ಅದಕ್ಕೆ ಸಹಕಾರ ನೀಡುತ್ತಿದ್ದರು ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.