ಅರ್ಕಾವತಿ ಡಿ ನೋಟಿಫಿಕೇಷನ್‌ ಹಗರಣ ಮುಚ್ಚಿ ಹಾಕಲು ಯತ್ನ

Team Udayavani, Jan 10, 2018, 12:02 PM IST

jagadeesh.jpg

ಬೆಂಗಳೂರು: ಅರ್ಕಾವತಿ ಡಿ ನೋಟಿಫಿಕೇಷನ್‌ ಹಗರಣ ಮುಚ್ಚಿ ಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ಯತ್ನಿಸುತ್ತಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್‌ ಶೆಟ್ಟರ್‌ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅರ್ಕಾವತಿ ಡಿ ನೋಟಿಫಿಕೇಷನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ.ಕೆಂಪಣ್ಣ ಆಯೋಗದ ವರದಿಯನ್ನು ಸರ್ಕಾರ ಜನರ ಮುಂದಿಡಲಿ ಎಂದು ಆಗ್ರಹಿಸಿದರು.

ಅರ್ಕಾವತಿ ಬಡಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 650 ಎಕರೆ ಡಿ ನೋಟಿಫಿಕೇಷನ್‌ ಮಾಡಿರುವುದು ನಿಜ. ನಾನು ಒಂದೇ ಒಂದು ಎಕರೆ ಡಿ ನೋಟಿಫಿಕೇಷನ್‌ ಮಾಡಿಲ್ಲ ಎಂದು ಪದೇ ಪದೇ ಹೇಳುತ್ತಿರುವ ಸಿದ್ದರಾಮಯ್ಯ ನ್ಯಾ.ಕೆಂಪಣ್ಣ ಆಯೋಗದ ವರದಿ ಬಹಿರಂಗಕ್ಕೆ ಯಾಕೆ ಮುಂದಾಗುತ್ತಿಲ್ಲ. ನಮ್ಮ ಮಾಹಿತಿ ಪ್ರಕಾರ ಆ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌, ಹೈಕೋರ್ಟ್‌ ಆದೇಶ ಉಲ್ಲಂ ಸಲಾಗಿದೆ ಎಂದು ಆಯೋಗ ವರದಿ ನೀಡಿದೆ ಎಂದು ಹೇಳಿದರು.

ಬಿಜೆಪಿ ವತಿಯಿಂದಲೂ ಅರ್ಕಾವತಿ ಡಿ ನೋಟಿಫಿಕೇಷನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿ.ಸೋಮಣ್ಣ ಅವರ ಸಮಿತಿ ಸಾಕಷ್ಟು ದಾಖಲೆ, ವರದಿಯನ್ನು ಆಯೋಗಕ್ಕೆ ನೀಡಿತ್ತು. ಆದರೆ, ವರದಿ ಸರ್ಕಾರಕ್ಕೆ ಸಲ್ಲಿಕೆಯಾದ ನಂತರ ಮಾಧ್ಯಮಕ್ಕೆ ಮಾಹಿತಿಯೇ ನೀಡಲಿಲ್ಲ.

ಅವರೇ ಮುಖ್ಯಮಂತ್ರಿಗೆ ಕ್ಲೀನ್‌ಚಿಟ್‌ ಎಂದು ಹೇಳಿಕೊಳ್ಳುತ್ತಿದ್ದಾರೆ. ಆಯೋಗದ ವರದಿ ಕೊಟ್ಟ ನಂತರ ಅದರ ಪರಾಮರ್ಶೆಗೆ ಮತ್ತೂಂದು ಸಮಿತಿ ನೇಮಿಸುವ ಅವಶ್ಯಕತೆ ಏನಿತ್ತು. ಆಯೋಗದ ತನಿಖೆಯಲ್ಲಿ ಸಿದ್ದರಾಮಯ್ಯ ತಪ್ಪು ಮಾಡಿದ್ದಾರೆ ಎಂಬುದು ಪ್ರಸ್ತಾಪಗೊಂಡಿರುವುದರಿಂದ ಅದನ್ನು ಮುಚ್ಚಿ ಹಾಕಲು ಸಮಿತಿ ನೇಮಿಸಲಾಗಿದೆ ಎಂದು ದೂರಿದರು.

ಆಗ್ರಹ: ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಯಾವ ಸಚಿವರ ಮಾತನ್ನೂ ಅಧಿಕಾರಿಗಳು ಕೇಳುತ್ತಿಲ್ಲ. ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಅಪಘಾತದಲ್ಲಿ ಗಾಯಗೊಂಡ ಯುವಕ ಮೃತಪಟ್ಟಿದ್ದಾನೆ ಎಂದು ಏಳು ಗಂಟೆ ಶವಾಗಾರದಲ್ಲಿ ಇಡಲಾಗಿತ್ತು. ಆ ನಂತರ ಅವರ ಸಂಬಂಧಿಕರು ನೋಡಿದಾಗ ಇನ್ನೂ ಜೀವ ಇತ್ತು. ತಕ್ಷಣ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಒಂದು ಗಂಟೆ ಮುಂಚೆ ಬಂದಿದ್ದರೆ ಬದುಕಿಸಬಹುದಿತ್ತು ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಸರ್ಕಾರದಲ್ಲಿ ಸರ್ಕಾರಿ ಆಸ್ಪತ್ರೆಗಳು ಕೆಲಸ ಮಾಡುತ್ತಿರುವ ಪರಿ ಇದು ಎಂದು ಆಕ್ರೋಶ ವ್ಯಕ್ತಪಡಿಸಿದರು. ಉಸ್ತುವಾರಿ ಸಚಿವ ವಿನಯ್‌ ಕುಲಕರ್ಣಿ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಇದುವರೆಗೂ ಅಲ್ಲಿಗೆ ಭೇಟಿ ನೀಡಿಲ್ಲ. ತಕ್ಷಣಕ್ಕೆ ಘಟನೆಗೆ ಕಾರಣರಾದ ವೈದ್ಯರನ್ನು ವಜಾ ಮಾಡಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

Vijay Hazare Trophy: Padikkal century; Karnataka entered the semi after winning against Baroda

VijayHazareTrophy: ಪಡಿಕ್ಕಲ್‌ ಶತಕ; ಬರೋಡಾ ವಿರುದ್ದ ಗೆದ್ದು ಸೆಮಿ ಪ್ರವೇಶಿಸಿದ ಕರ್ನಾಟಕ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Leopard: ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಪ್ರತ್ಯಕ್ಷ.. ಸೆರೆ ಹಿಡಿಯಲು ಆಗ್ರಹ

Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

Mine Tragedy: ಇಂದು ಮತ್ತೆ ಮೂರು ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-bng

Bengaluru: 54 ಪಾಲಿಕೆ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

16-bng

Bengaluru: 4 ಕೋಟಿ ಪ್ರಯಾಣಿಕರು: ಏರ್‌ ಪೋರ್ಟ್ ದಾಖಲೆ

15-metro

Bengaluru: ಪ್ರತಿ ಸೋಮವಾರ ಮುಂಜಾನೆ 4.15ರಿಂದಲೇ ಮೆಟ್ರೋ ಸೇವೆ

14-bng

Bengaluru: ತಾಯಿಗೆ ನಿಂದಿಸುತ್ತಿದ್ದ ತಮ್ಮನ ಕೊಂದ ಸಹೋದರನ ಬಂಧನ

13-bng

Bengaluru: ಕೆಂಗೇರಿಯ ಮಧು ಪೆಟ್ರೋಲ್‌ ಬಂಕ್‌ ಜಂಕ್ಷನ್‌ ಮೃತ್ಯುಕೂಪ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Vijay Hazare Trophy: Padikkal century; Karnataka entered the semi after winning against Baroda

VijayHazareTrophy: ಪಡಿಕ್ಕಲ್‌ ಶತಕ; ಬರೋಡಾ ವಿರುದ್ದ ಗೆದ್ದು ಸೆಮಿ ಪ್ರವೇಶಿಸಿದ ಕರ್ನಾಟಕ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

22-uv-fusion

TEENAGE: ಹುಚ್ಚುಕೋಡಿ ಮನಸ್ಸಿಗೂ ಕಡಿವಾಣ ಬೇಕಿದೆ

21-uv-fusion

Ashram: ಹಿರಿಯ ಜೀವಗಳ ಶುಭಾಶೀರ್ವಾದ -ಸಾರ್ಥಕ ಭಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.