ಆಟೋ ನಿಲ್ದಾಣಕ್ಕೆ ಬೆಂಕಿ: 35 ಆಟೋಗಳು ಭಸ್ಮ
Team Udayavani, Feb 24, 2024, 12:02 PM IST
ಬೆಂಗಳೂರು: ಪ್ಲಾಸ್ಟಿಕ್ ತ್ಯಾಜ್ಯದ ಗೋಡೌನ್‌ಗೆ ಹೊತ್ತಿದ ಬೆಂಕಿ ಆಟೋ ಸ್ಟಾಂಡ್‌ಗೂ ತಗುಲಿದ ಪರಿಣಾಮ 35ಕ್ಕೂ ಹೆಚ್ಚು ಆಟೋಗಳು ಬೆಂಕಿಗಾ ಹುತಿಯಾಗಿರುವ ಘಟನೆ ಚಂದ್ರಾಲೇಔಟ್‌ನ ನಾಯಂಡಹಳ್ಳಿ ಸಮೀಪದ ಗಂಗೊಂಡನಹಳ್ಳಿ ಯಲ್ಲಿ ಶುಕ್ರವಾರ ನಸುಕಿನಲ್ಲಿ ನಡೆದಿದೆ.
ಅವಘಡದಲ್ಲಿ 35ಕ್ಕೂ ಹೆಚ್ಚು ಆಟೋಗಳು, 50 ಲಕ್ಷ ರೂ. ಮೌಲ್ಯದ ಪ್ಲಾಸ್ಟಿಕ್ ವಸ್ತುಗಳು ಸುಟ್ಟು ಹೋಗಿವೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಗ್ನಿಶಾಮಕ ದಳ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
ಗಂಗೊಂಡನಹಳ್ಳಿ ಸಮೀಪ ನದೀಮ್ ಮಾಲೀಕತ್ವದ ಪ್ಲಾಸ್ಟಿಕ್ ತ್ಯಾಜ್ಯ ವಸ್ತುಗಳ ಗೋಡೌನ್ ಮತ್ತು ಪಕ್ಕದಲ್ಲೇ ರಿಜ್ವಾನ್‌ಗೆ ಸೇರಿದ ಆಟೋ ಸ್ಟಾಂಡ್ ಇದೆ. ಶುಕ್ರವಾರ ನಸುಕಿನ 1.30ರಲ್ಲಿ ಪ್ಲಾಸ್ಟಿಕ್ ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲ ಕ್ಷಣದಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಗೋಡೌನ್ ಆವರಿಸಿಕೊಂಡಿದೆ.
ಬಳಿಕ ಪಕ್ಕದಲ್ಲೇ ಇದ್ದ ಆಟೋ ಸ್ಟಾಂಡ್‌ಗೆ ವ್ಯಾಪಿಸಿ 30ಕ್ಕೂ ಹೆಚ್ಚು ಆಟೋಗಳು ಬೆಂಕಿಗೆ ಆಹುತಿಯಾಗಿವೆ. ದಟ್ಟ ಹೊಗೆ ಕಂಡು ಭೀತಿಗೊಂಡ ಸ್ಥಳೀಯರು, ಕೂಡಲೇ ಪೊಲೀಸ್ ನಿಯಂತ್ರಣ ಕೊಠಡಿ ಮತ್ತು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. 5 ವಾಹನಗಳಲ್ಲಿ ಧಾವಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ, 6 ತಾಸು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿ¨ªಾರೆ.
ಪ್ಲಾಸ್ಟಿಕ್ ತ್ಯಾಜ್ಯ ವಿಂಗಡಿಸಿ ಕೈಗಾರಿಕೆಗಳಿಗೆ ಪೂರೈಕೆ: ನಗರದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿ ನಂತರ ವಿಂಗಡಿಸಿ ಕುಂಬಳಗೋಡು, ಜಿಗಣಿ ಮತ್ತು ದಾಬಸಪೇಟೆಯ ಕೈಗಾರಿಕೆಗಳಿಗೆ ನದೀಮ್ ಪೂರೈಸುತ್ತಿದ್ದರು. ಬಿಬಿಎಂಪಿ ಮತ್ತು ಚಿಂದಿ ಆಯುವರಿಂದ ನದೀಮ್ ಪ್ಲಾಸ್ಟಿಕ್ ತ್ಯಾಜ್ಯ ವಸ್ತುಗಳನ್ನು ಖರೀದಿಸುತ್ತಿದ್ದರು ಎಂಬುದು ಗೊತ್ತಾಗಿದೆ. ಬೆಂಕಿ ಅವಘಡಕ್ಕೆ ಕಾರಣವೇನು ಎಂಬುದು ಖಚಿತವಾಗಿಲ್ಲ.
ಪ್ಲಾಸ್ಟಿಕ್ ಗೋಡೌನ್‌ನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡು ಆಟೋ ಸ್ಟಾಂಡ್‌ಗೆ ಬೆಂಕಿ ಕೆನ್ನಾಲಿಗೆ ವ್ಯಾಪಿಸಿದೆ ಎಂದು ಹೇಳಲಾಗಿದೆ. ಸ್ಟಾಂಡ್‌ನಲ್ಲಿ ನಿಲುಗಡೆ ಮಾಡಿದ್ದ ಆಟೋಗಳ ಸಿಲಿಂಡರ್ ಸ್ಫೋಟಿಸಿದ ಪರಿಣಾಮ ಬೆಂಕಿಯ ತೀವ್ರತೆ ಹೆಚ್ಚಾಗಿದೆ ಎಂದು ಹೇಳಲಾಗಿದೆ. ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಸದ್ಯ ಬೆಂಕಿ ಅವಘಡದಿಂದ ಘಟನೆ ನಡೆದಿದೆ ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀ ಸರು ಮಾಹಿತಿ ನೀಡಿದರು. ಈ ಬಗ್ಗೆ ಚಂದ್ರಾ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ಶಾಸಕ ಕೃಷ್ಣಪ್ಪ ಭೇಟಿ: ಮನೆ ಮುಂಭಾಗ ನಿಲುಗಡೆ ಮಾಡಲು ಜಾಗದ ಕೊರತೆಯಿಂದಾಗಿ ಕೆಲ ಆಟೋ ಚಾಲಕರು, ದಿನಕ್ಕೆ 30 ರೂ. ಬಾಡಿಗೆಯಂತೆ ತಿಂಗಳಿಗೆ 900 ರೂ. ಬಾಡಿಗೆ ನೀಡಿ ಆಟೋ ಸ್ಟಾಂಡ್‌ನಲ್ಲಿ ಆಟೋಗಳನ್ನು ಚಾಲಕರು ನಿಲ್ಲಿಸುತ್ತಿದ್ದರು. ಜತೆಗೆ ಗುಜರಿಗೆ ಸೇರುವ ಆಟೋಗಳು ಈ ಆವರಣದಲ್ಲಿದ್ದವು. ಇದರೊಂದಿಗೆ ಟಾಟಾ ಏಸ್ ವಾಹನಗಳನ್ನು ನಿಲುಗಡೆ ಮಾಡಲಾಗುತ್ತಿತ್ತು ಎಂಬುದು ಗೊತ್ತಾಗಿದೆ.
ಇನ್ನು ಘಟನಾ ಸ್ಥಳಕ್ಕೆ ವಿಜಯನಗರ ಶಾಸಕ ಎಂ. ಕೃಷ್ಣಪ್ಪ ಭೇಟಿ ಕೊಟ್ಟು ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಂತ್ರಸ್ತರಿಗೆ ನೆರವಾಗುವ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ!
Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
MUST WATCH
ಹೊಸ ಸೇರ್ಪಡೆ
Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ
LignoSat: ಮರದಿಂದ ತಯಾರಿಸಿದ ವಿಶ್ವದ ಮೊದಲ ಉಪಗ್ರಹ ಉಡಾವಣೆ!
ಕರಾವಳಿಯಲ್ಲಿ ಕಾಶ್ಮೀರಿ ಕೇಸರಿ ಬೆಳೆದ ಟೆಕ್ಕಿಗಳು; ಹೊಸ ಪ್ರಯೋಗದಲ್ಲಿ ಮೊದಲ ಯಶಸ್ಸು !
Madarsa Act: ಯುಪಿ ಮದರಸಾ ಕಾಯ್ದೆ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ
Kharge: ಬೆಂಗಳೂರಿಗೆ ಬಂದು ನನ್ನ ಜತೆ ಚರ್ಚೆಗೆ ನಿಲ್ಲಿ: ಪ್ರಧಾನಿ ಮೋದಿಗೆ ಖರ್ಗೆ ಸವಾಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.