ವಂಶಾಡಳಿತದ ಅಪಾಯಗಳ ಬಗ್ಗೆ ಜಾಗೃತಿ ಅಗತ್ಯ
Team Udayavani, Jun 27, 2018, 11:54 AM IST
ಬೆಂಗಳೂರು: ವಂಶಾಡಳಿತ ನಂಬುವುದು ಬಹಳ ಅಪಾಯಕಾರಿಯಾಗಿದ್ದು, ಈ ಬಗ್ಗೆ ನಿರಂತರವಾಗಿ ಅರಿವು ಮೂಡಿಸಬೇಕಿದೆ ಎಂದು ವಿದೇಶಾಂಗ ಖಾತೆ ರಾಜ್ಯ ಸಚಿವ ಎಂ.ಜೆ.ಅಕರ್ ಹೇಳಿದರು.
ಬಿಜೆಪಿ ಬೆಂಗಳೂರು ಮಹಾನಗರ ಘಟಕವು ನಗರದ ಭಾರತೀಯ ವಿದ್ಯಾಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ “ತುರ್ತುಪರಿಸ್ಥಿತಿ ಒಂದು ಕರಾಳ ನೆನಪು’ ಕಾರ್ಯಕ್ರಮದಲ್ಲಿ ಪ್ರಮುಖ ಭಾಷಣಕಾರರಾಗಿ ಮಾತನಾಡಿದ ಅವರು, ಅಧಿಕಾರ ಒಂದೇ ಕುಟುಂಬದವರಲ್ಲಿ ಮುಂದುವರಿಯುವುದು, ಅಧಿಕಾರವು ತಲೆಮಾರುಗಳ ಹಕ್ಕು ಎಂಬ ಧೋರಣೆ ಅಪಾಯಕಾರಿ. ಈ ಬಗ್ಗೆ ಜನರಲ್ಲಿ ನಿರಂತರವಾಗಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ತುರ್ತು ಪರಿಸ್ಥಿತಿಯ ಕರಾಳ ಘಟನೆ ಸಂಭವಿಸಿ 43 ವರ್ಷ ಕಳೆದರೂ ಇಂದಿಗೂ ಕೆಲ ಪಕ್ಷ, ನಾಯಕರಲ್ಲಿ ಅದೇ ಧೋರಣೆ ಮುಂದುವರಿದಿದೆ. ಕೆಲ ನಾಯಕರು ತುರ್ತು ಪರಿಸ್ಥಿತಿ ಹೇರಿಕೆಗೆ ಈಗಲೂ ಸಮರ್ಥನೆ ನೀಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
1975ರ ಜೂನ್ 25ರ ಮಧ್ಯರಾತ್ರಿ ತುರ್ತುಪರಿಸ್ಥಿತಿ ಹೇರಿದರೂ ಇದಕ್ಕೆ ಜನವರಿಯಿಂದಲೇ ಸಿದ್ಧತೆ ನಡೆದಿತ್ತು. 1971ರ ಲೋಕಸಭಾ ಚುನಾವಣೆಯಲ್ಲಿ 356 ಸ್ಥಾನ ಪಡೆದು ಬಹುಮತವಿದ್ದರೂ ದೇಶದಲ್ಲಿ ಸ್ಥಿರತೆ ಇರಲಿಲ್ಲ. ಆರ್ಥಿಕ ಸ್ಥಿತಿ ಹದಗೆಟ್ಟಿತ್ತು. ನಕ್ಸಲರ ಹಾವಳಿ ತೀವ್ರವಾಗಿತ್ತು. ಕಾರ್ಮಿಕರು ಹೋರಾಟಕ್ಕಿಳಿದಿದ್ದರು. ಭ್ರಷ್ಟಾಚಾರ ಮೇರೆ ಮೀರಿತ್ತು.
ಇಂತಹ ಸಂದರ್ಭದಲ್ಲಿ ಜಯಪ್ರಕಾಶ್ ನಾರಾಯಣ್ ಅವರು ಹೋರಾಟಕ್ಕಿಳಿದರು. ಅವರಿಗೆ ಅಪಾರ ಸ್ಪಂದನೆ ವ್ಯಕ್ತವಾಯಿತು. ಕೊನೆಗೆ ಕರಾಳ ಅಧ್ಯಾಯಕ್ಕೆ ತೆರೆ ಬಿತ್ತು ಎಂದರು. ಮಾಧ್ಯಮಗಳಿಗೆ ನಿರ್ಬಂಧ ಹೇರಿದ್ದನ್ನು ವಿರೋಧಿಸಿ ಹಲವರು ಪ್ರತಿರೋಧ ವ್ಯಕ್ತಪಡಿಸಿದರು. ಇಂದು ದೇಶದಲ್ಲಿರುವಷ್ಟು ಅಭಿವ್ಯಕ್ತಿ ಸ್ವಾತಂತ್ರ್ಯ ಜಗತ್ತಿನ ಬೇರೆಲ್ಲೂ ಇಲ್ಲ. 2014ರಿಂದ ಈವರೆಗಿನ ಕಾಲವು ಪರಿವರ್ತನೆ, ಪುನಾರಚನೆಯ ಪರ್ವದಂತಿದೆ.
ಕಲ್ಯಾಣ ರಾಜ್ಯ ನಿರ್ಮಾಣಕ್ಕೆ ಪ್ರಯತ್ನ ನಡೆದಿದೆ ಎಂದು ಹೇಳಿದರು. ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ತುರ್ತು ಪರಿಸ್ಥಿತಿ ದೇಶದ ಇತಿಹಾಸದಲ್ಲಿ ಕರಾಳ ಅಧ್ಯಾಯ. ಅಧಿಕಾರ ರಕ್ಷಣೆಗಾಗಿ ಕಾಂಗ್ರೆಸ್ ಹೇರಿದ ತುರ್ತು ಪರಿಸ್ಥಿತಿಯಿಂದ ಜನತಂತ್ರದ ಕಗ್ಗೊಲೆಯಾಯಿತು ಎಂದರು.
ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಬಿಜೆಪಿ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಭಾರತಿ ಶೆಟ್ಟಿ, ಬಿಜೆಪಿ ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷ ಪಿ.ಎನ್.ಸದಾಶಿವ ಉಪಸ್ಥಿತರಿದ್ದರು.
ಬುದ್ದಿಜೀವಿಗಳಿಗೆ ಪ್ರಶ್ನೆ: ತುರ್ತು ಪರಿಸ್ಥಿತಿ ಕರಾಳ ಘಟನೆ ಸಂಭವಿಸಿ 43 ವರ್ಷ ಕಳೆದರೂ ಕಾಂಗ್ರೆಸ್ ಪಶ್ಚಾತಾಪ ಪಡುತ್ತಿಲ್ಲ. ರಾಜ್ಯ, ರಾಷ್ಟ್ರದ ಬುದ್ದಿಜೀವಿಗಳಿಗೆ ಒಂದು ಪ್ರಶ್ನೆ ಕೇಳ ಬಯಸುತ್ತೇನೆ. ದೇಶದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ,
ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲಾಗುತ್ತಿದೆ ಎಂದು ಬೊಬ್ಬೆ ಹೊಡೆಯುತ್ತಿದ್ದಾರೆ. ಆದರೆ ಕಾಂಗ್ರೆಸ್‌ನ ಹಿಂದಿನ ಆಡಳಿತ ಕಾರ್ಯವೈಖರಿ ಬಗ್ಗೆ ಗೊತ್ತಿಧ್ದೋ, ಗೊತ್ತಿಲ್ಲದೆಯೋ ಕಾಂಗ್ರೆಸ್ ಬೆಂಬಲಿಸುತ್ತಿರುವುದು ದೇಶದ ದುರಂತವೇ ಸರಿ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದರು.
“ದೇಶ ರಕ್ಷಿಸುವ ಸೇನೆ ಬಗ್ಗೆ ಕಾಂಗ್ರೆಸ್ ಸಂಶಯ ವ್ಯಕ್ತಪಡಿಸುತ್ತದೆ. ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರಿಗಿಂತ ಭದ್ರತಾ ಪಡೆಗಳಿಂದ ಹೆಚ್ಚು ಜನ ಹತರಾಗಿದ್ದಾರೆ ಎಂದು ಸುದ್ದಿ ಹಬ್ಬಿಸುತ್ತಿದೆ. ಭಾರತೀಯ ಸೈನಿಕರ ಶೌರ್ಯವನ್ನು ಇಡೀ ವಿಶ್ವವೇ ಪ್ರಶಂಸಿಸುತ್ತಿದ್ದರೆ ಕಾಂಗ್ರೆಸ್ ಮಾತ್ರ ದೇಶ ರಕ್ಷಣೆಯ ಈ ಕ್ರಮವನ್ನು ಪ್ರಶ್ನಿಸುತ್ತಿದೆ’.
-ಎಂ.ಜೆ. ಅಕರ್, ಕೇಂದ್ರ ವಿದೇಶಾಂಗ ರಾಜ್ಯ ಸಚಿವ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ
Road mishap: ಗೂಡ್ಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್ ಕಾನ್‌ಸ್ಟೇಬಲ್ ಸಾವು
MUST WATCH
ಹೊಸ ಸೇರ್ಪಡೆ
Mangaluru: ಪಂಪ್‌ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು
Ullal: ತೊಕ್ಕೊಟ್ಟು-ಮುಡಿಪು ರಸ್ತೆಗೆ ತೇಪೆ ಕಾಮಗಾರಿ
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.