ಅಣು ವಿಕಿರಣ ಕುರಿತು ಜಾಗೃತಿ ಅಗತ್ಯ
Team Udayavani, Dec 4, 2017, 12:37 PM IST
ಕೆಂಗೇರಿ: ರಾಸಾಯನಿಕ ಹಾಗೂ ಅಣು ವಿಕಿರಣಗಳಿಂದ ಉಂಟಾಗಬಹುದಾದ ಅನಾಹುತಗಳ ಬಗ್ಗೆ ಜಾಗೃತರಾಗುವ ಮೂಲಕ ಭವಿಷಯದಲ್ಲಿ ಎದುರಾಗಬಹುದಾದ ದುಷ್ಪರಿಣಾಮಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಅಮೆರಿಕದ ರಿಚ್‌ಲ್ಯಾಂಡ್ ಆಪರೇಷನ್ ಎನರ್ಜಿ ವಿಭಾಗದ ಮಾಜಿ ವ್ಯವಸ್ಥಾಪಕ ಕೀತ್ ಎಕ್ಲೇನ್ ತಿಳಿಸಿದರು.
ಬೆಂಗಳೂರು-ಮೈಸೂರು ಮುಖ್ಯ ರಸ್ತೆಯ ಕುಂಬಳಗೋಡು ಡಾನ್ ಬಾಸ್ಕೊ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಸಾಯನ ಶಾಸ್ತ್ರ ಹಾಗೂ ವಿಕಿರಣ ವಿಪತ್ತು ನಿರ್ವಹಣೆ ಕುರಿತು ಆಯೋಜಿಸಿದ್ದ ವಿಚಾರ ಸಂಕಿರಣಕ್ಕೆ ಚಾಲನೆ ನೀಡಿ ಮಾತನಾಡಿ, ಸಾರ್ವಜನಿಕರ ಹಿತದೃಷ್ಟಿಯಿಂದ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಹಾಗೂ ಸುರಕ್ಷಿತ ವ್ಯವಸ್ಥೆ ನಿರ್ಮಿಸಿಕೊಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಅಮೆರಿಕದ ಆರ್‌ಜೆ ಲೀ ಗ್ರೂಪ್ ಸೆಂಟರ್‌ನ ತಾಂತ್ರಿಕ ವಿಭಾಗದ ನಿರ್ದೇಶಕ ಲ್ಯಾರಿ ಎಲ್. ಲಾಕ್‌ರೆಮ್ ಮಾತನಾಡಿ, ಜೈವಿಕ ಹಾಗೂ ರೇಡಿಯಾಲಾಜಿಕಲ್ ಲ್ಯಾಬೊರೋಟರಿಗಳಿಂದ ಹೊರಬರುವ ಕಲುಷಿತ ತ್ಯಾಜ್ಯವನ್ನು ಅತ್ಯಾಧುನಿಕ ತಾಂತ್ರಿಕ ಉಪಕರಣಗಳನ್ನು ಬಳಸಿ ಪರಿಸರಕ್ಕೆ ಹಾನಿಯಾಗದಂತೆ ಎಚ್ಚರಿಕೆ ವಹಿಸುವ ಮೂಲಕ ನಾಗರಿಕರ ಆರೋಗ್ಯ ಆದ್ಯತೆ ನೀಡಬೇಕಿದೆ ಎಂದರು.
ಎಸಿಎಚ್‌ಎಂಎಂ ಇಂಡಿಯಾ ವಿಭಾಗದ ಸಂಸ್ಥಾಪಕ ಅಧ್ಯಕ್ಷ ಡಾ.ರಾಮ್‌ಪುರ್ ವಿಶ್ವನಾಥ್, ಉಪಾಧ್ಯಕ್ಷ ಡಾ.ಬಿ.ಎಸ್.ಜಯಪ್ರಕಾಶ್, ಪ್ರಿನ್ಸಿಪಾಲ್ ಡಾ.ಎಂ.ಮುರಳೀಧರ್ ರಾವ್, ತಾಂತ್ರಿಕ ಮಹಾವಿದ್ಯಾಲಯದ ಸಮೂಹ ಸಂಸ್ಥೆಗಳ ನಿರ್ದೇಶಕ ಡಾ.ಆರ್. ಕೃಷ್ಣ , ಸಿವಿಲ್ ವಿಭಾಗದ ಮುಖ್ಯಸ್ಥ ಪ್ರಸನ್ನ ಕುಮಾರ್, ಸಂಚಾಲಕ ಎ.ಜಸ್ವಂತ್‌ಗೌಡ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Manya: ಭಜನ ಮಂದಿರದಿಂದ ಕಳವು ಆರೋಪಿಗಳಿಂದ ಮಾಹಿತಿ ಸಂಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.