ಆಯುರ್ವೇದ ಶಿಕ್ಷಣ: ಇಂದು ನಾಳೆ ರಾಷ್ಟ್ರೀಯ ವಿಚಾರ ಸಂಕಿರಣ


Team Udayavani, Sep 20, 2017, 11:42 AM IST

ayurveda-education.jpg

ಬೆಂಗಳೂರು: ಆಯುರ್ವೇದ ಶಿಕ್ಷಣ ತರಬೇತಿಯಲ್ಲಿ ರಚನಾತ್ಮಕ ಮತ್ತು ಕ್ರಿಯಾತ್ಮಕ ಚರ್ಚೆ ಹಾಗೂ ಸುಧಾರಣೆಗಾಗಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌, ತಾರುಣ್ಯ ಶಿಕ್ಷಣ ಟ್ರಸ್ಟ್‌ ವತಿಯಿಂದ ಸೆ.21 ಮತ್ತು 22ರಂದು ಗಾಂಧಿಭವನದಲ್ಲಿ ಜಿಜ್ಞಾಸ-2017 ರಾಷ್ಟ್ರೀಯ ವಿಚಾರ ಸಂಕಿರಣ ಹಮ್ಮಿಕೊಂಡಿದೆ. 

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ “ಜಿಜ್ಞಾಸ ದರ್ಶನ ವೈಜ್ಞಾನಿಕ’ ಸಮಿತಿ ಅಧ್ಯಕ್ಷ ಡಾ. ಆರ್‌.ಕಿಶೋರ್‌ ಕುಮಾರ್‌, ಪ್ರಸಕ್ತ ಆಯುರ್ವೇದ ಶಿಕ್ಷಣದ  ತರಬೇತಿಯ ರಚನಾತ್ಮಕ ಮತ್ತು ಕ್ರಿಯಾತ್ಮಕ ಅಂಶಗಳ ವಿಮರ್ಶೆ, ಅಸಂಘಟಿತ ಸಾಂಪ್ರದಾಯಿಕ ಆಯುರ್ವೇದ ಪದ್ಧತಿಗಳ ಏಕೀಕರಣ, ಆಯುರ್ವೇದ ಶಿಕ್ಷಣದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ, ಆಯುರ್ವೇದ ಪಠ್ಯಕ್ರಮದಲ್ಲಿ ಭಾರತೀಯ ಶಾಸ್ತ್ರದ ಅಧ್ಯಯನ ವ್ಯಾಪ್ತಿ ಮತ್ತು ಸಮಕಾಲಿನ ಗುರುಕುಲ ಪದ್ಧತಿಯ ಕಾರ್ಯ ಇತ್ಯಾದಿ ವಿಷಯದ ಬಗ್ಗೆ ಚರ್ಚೆ ನಡೆಯಲಿದೆ ಎಂದರು.

ಆಯುರ್ವೇದ ಪದವಿ, ಸ್ನಾತಕೋತ್ತರ ಪದವಿ ಕಾಲೇಜಿನ ಸ್ವರೂಪ, ಗುರುಕುಲ ಶಿಕ್ಷಣ ಪದ್ಧತಿ ಜತೆಗೆ ಸಮಕಾಲೀನ ಶಿಕ್ಷಣದ ಪ್ರಸ್ತುತತೆ, ಆಯುರ್ವೇದ ವಿದ್ಯಾರ್ಥಿಗಳಿಗೆ ಕೌಶಲಾಭಿವೃದ್ಧಿ ತರಬೇತಿ ನೀಡುವುದು, ಆಯುರ್ವೇದದ ಪಠ್ಯಕ್ರಮ, ಸಾರ್ವಜನಿಕ ಆರೋಗ್ಯ ಸಂಬಂಧಿಸಿದ ಔಷಧದ ಶೋಧನೆ, ದಾಖಲೆಗಳ ನಿರ್ವಹಣೆ ಇತ್ಯಾದಿ ವಿಷಯದ ಚರ್ಚೆ ನಡೆಯಲಿದೆ. ವಿದ್ಯಾರ್ಥಿಗಳಿಗೆ ಆಯುರ್ವೇದ ಶಿಕ್ಷಣದಲ್ಲಿ ಹೆಚ್ಚಿನ ತರಬೇತಿ ಮತ್ತು ಕೌಶಲಾಭಿವೃದ್ಧಿಗೊಳಿಸುವ ಗುರಿಯೊಂದಿಗೆ ಈ ವಿಚಾರ ಸಂಕಿರಣ ನಡೆಯಲಿದೆ.

ಕೆಲವೊಂದು ನಿರ್ಣಯವನ್ನು ತೆಗೆದುಕೊಳ್ಳಲಿದ್ದೇವೆ ಎಂದು ಹೇಳಿದರು. ಕೇಂದ್ರ ಆಯುಷ್‌ ಇಲಾಖೆಯ ಪದ್ಮಶ್ರೀ ವೈ. ರಾಜೇಶ್‌ ಕೊಟೆಚಾ ಅವರು ವಿಚಾರ ಸಂಕಿರಣವನ್ನು ಉದ್ಘಾಟಿಸಲಿದ್ದಾರೆ. ಅವಿನಾಶಿಲಿಂಗಮ್‌ ವಿವಿಯ ಕುಲಾಧಿಪತಿ ಪದ್ಮಶ್ರೀ ಡಾ.ಪಿ.ಆರ್‌. ಕೃಷ್ಣಕುಮಾರ್‌, ಕೇಂದ್ರ ಆಯುಷ್‌ ಇಲಾಖೆಯ ಪ್ರೊ.ವೈ.ಕೆ.ಎಸ್‌.ಧೀಮಾನ್‌, ಡಾ.ಅಹಲ್ಯ ಶರ್ಮಾ ಮೊದಲಾದ ಗಣ್ಯರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಎರಡು ದಿನದ ವಿಚಾರ ಸಂಕಿರಣದಲ್ಲಿ ಆಯುರ್ವೇದದ ವಿವಿಧ ಆಯಾಮದ ಬಗ್ಗೆ ಸಂಶೋಧನಾ ಪ್ರಬಂಧ ಮಂಡನೆ, ಸುಧಾರಣೆಗೆ ಬೇಕಾದ ಕ್ರಮದ ಬಗ್ಗೆ ಚರ್ಚೆ ನಡೆಯಲಿದೆ. ಆಯುರ್ವೇದದ ಸಂಶೋಧಕರು, ಶಿಕ್ಷಣ ಸಂಸ್ಥೆಗಳ ನಿರ್ದೇಶಕರು, ಮುಖ್ಯಸ್ಥರು, ಶಿಕ್ಷಣ ತಜ್ಞರು, ಅಧ್ಯಾಪಕರು, ನೀತಿ ನಿರೂಪಕರು, ಉದ್ಯಮಿಗಳು ಸೇರಿ 150ಕ್ಕೂ ಅಧಿಕ ವಿಶೇಷ ಆಹ್ವಾನಿತರು ಭಾಗವಸಲಿದ್ದಾರೆ ಎಂಬ ಮಾಹಿತಿ ನೀಡಿದರು. ಸಂಘಟನಾ ಸಮಿತಿ ಅಧ್ಯಕ್ಷ ಡಾ.ರಾಮಕೃಷ್ಣ, ಸಂಯೋಜಕ ವಿನೀತ್‌ ಮೋಹನ್‌ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.