ಆಯುಷ್ 2ನೇ ಸುತ್ತಿನ ಸೀಟು ಹಂಚಿಕೆ
Team Udayavani, Sep 29, 2018, 6:10 AM IST
ಬೆಂಗಳೂರು: ಮೊದಲ ಸುತ್ತಿನ ಸೀಟು ಹಂಚಿಕೆಯಲ್ಲಿ ಉಳಿದಿರುವ, ಹೊಸದಾಗಿ ಸೇರ್ಪಡೆಗೊಂಡಿರುವ ಮತ್ತು ಹಂಚಿಕೆಯ ನಂತರ ರದ್ದಾಗಿರುವ ಆಯುರ್ವೇದ,ಯುನಾನಿ, ಯೋಗ, ನ್ಯಾಚುರೋಪಥಿ ಮತ್ತು ಹೋಮಿಯೋಪಥಿ ಸೀಟುಗಳ ಎರಡನೇ ಸುತ್ತಿನ ಹಂಚಿಕೆಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ.
ಕಾಲೇಜುವಾರು, ಕೋರ್ಸ್‌ವಾರು ಹಾಗೂ ವರ್ಗವಾರು ಲಭ್ಯವಿರುವ ಸೀಟುಗಳ ವಿವರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಅಕ್ಟೋಬರ್ 1ರಿಂದ ದಾಖಲೆ ಪರಿಶೀಲನೆ ನಡೆಯಲಿದೆ. ಅ.10ರ ಬೆಳಗ್ಗೆ 11 ಗಂಟೆ ತನಕ ಆಪ್ಷನ್ ಎಂಟ್ರಿಗೆ ಅವಕಾಶ ಇದೆ. ಅದೇ ದಿನ ಸಂಜೆ 6ಕ್ಕೆ ಸೀಟು ಹಂಚಿಕೆ ನಡೆಯಲಿದೆ.ಸೀಟು ಪಡೆದ ಅಭ್ಯರ್ಥಿಗಳು ಶುಲ್ಕ ಪಾವತಿಸಿ, ಪ್ರವೇಶಪತ್ರ ಡೌನ್‌ಲೋಡ್ ಮಾಡಿಕೊಳ್ಳಲು ಅ.5ರವರೆಗೂ ಅವಕಾಶ ಇದೆ. ಅ.6ರ ಸಂಜೆ 5.30ರೊಳಗೆ ಸಂಬಂಧಿಸಿದ ಕಾಲೇಜಿಗೆ ದಾಖಲಾಗಬೇಕು. ಮಾಹಿತಿಗಾಗಿ ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನೋಡಬಹುದು ಎಂದು ಪ್ರಕಟಣೆ ತಿಳಿಸಿದೆ.
ಪರೀಕ್ಷೆ ಮುಂದೂಡಿಕೆ: ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಅಕ್ಟೋಬರ್‌ನಲ್ಲಿ ನಡೆಯಬೇಕಿದ್ದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಸರ್ಕಾರದ ಸೂಚನೆಯಂತೆ ಕೆಇಎ ಮುಂದೂಡಿದೆ. 2015ರಲ್ಲಿಯೇ ನೇಮಕಾತಿ ಆದೇಶ ಆಗಿದ್ದರೂ ಈವರೆಗೂ ಸ್ಪರ್ಧಾತ್ಮಕ ಪರೀಕ್ಷೆ ನಡೆದಿಲ್ಲ. ಎರಡೆರೆಡು ಬಾರಿ ಅರ್ಜಿ ಆಹ್ವಾನ ಮಾಡಲಾಗಿದೆ. ಅ.11ರಿಂದ 23ರ ವರೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದಾಗಿಯೂ ಸೂಚನೆ ನೀಡಲಾಗಿತ್ತು. ಈಗ ಏಕಾಏಕಿ ಸರ್ಕಾರವೇ ಪರೀಕ್ಷಾ ದಿನಾಂಕವನ್ನು ಮುಂದೂಡಿದೆ ಮಾತ್ರವಲ್ಲದೆ, ಯಾವಾಗ ನಡೆಸುತ್ತೇವೆ ಎಂಬುದನ್ನೂ ಸ್ಪಷ್ಟಪಡಿಸಿಲ್ಲ.
ಅನುದಾನ ಬಿಡುಗಡೆ
ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸಲು ಮೀಸಲಿಟ್ಟಿರುವ 450 ಕೋಟಿ ರೂ.ಗಳಲ್ಲಿ 150 ಕೋಟಿ ರೂ.ಗಳನ್ನು ಸರ್ಕಾರ ಬಿಡುಗಡೆ ಮಾಡಿದೆ.ಮೂರು ವರ್ಷಗಳಲ್ಲಿ ಸರ್ಕಾರಿ ಪ್ರಾಥಮಿಕ,ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ಕಟ್ಟಡ ದುರಸ್ತಿ, ಮರು ನಿರ್ಮಾಣ ಸೇರಿ ವಿವಿಧ ಕಾಮಗಾರಿಗಳಿಗೆ 450 ಕೋಟಿ.ರೂ.ಗಳನ್ನು ನೀಡಲು ಸರ್ಕಾರ ಒಪ್ಪಿಕೊಂಡಿತ್ತು. 2018-19ನೇ ಸಾಲಿಗೆ ಬಿಡುಗಡೆ ಮಾಡಿರುವ ಅನುದಾನವನ್ನು ಆರ್ಥಿಕ ವರ್ಷಾಂತ್ಯದೊಳಗೆ ಪೂರೈಸುವಂತೆಯೂ ಸರ್ಕಾರ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.