ಕಲಾಕೃತಿಗಳ ಮೂಲಕ ಸ್ವಾತಂತ್ರ್ಯ ಸಂಗ್ರಾಮದ ನೆನಪು
Team Udayavani, Sep 28, 2021, 1:23 PM IST
ಬೆಂಗಳೂರು: ಕರ್ನಾಟಕ ಲಲಿತಕಲಾ ಅಕಾಡೆಮಿ “ಆಜಾದಿಕಾ ಅಮೃತ್ ಮಹೋತ್ಸವ’ದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸ್ವಾತಂತ್ರ್ಯ ಸಂಗ್ರಾಮ ನೆನಪಿಸುವಂತಹ ವಿಶಿಷ್ಟ ಕಾರ್ಯಕ್ರಮ ರೂಪಿಸುತ್ತಿದೆ.
ಹಿರಿಯ ಕಲಾವಿದರ ಜತೆಗೂಡಿ ಸ್ವಾತಂತ್ರ್ಯ ಹೋರಾಟಗಾರರನ್ನು ಹೋರಾಟದ ಸನ್ನಿವೇಶಗಳನ್ನು ಕಲಾಕೃತಿಗಳ ಮೂಲಕ ಹಿಡಿದಿಡುವ ಕೆಲಸ ನಡೆಯಲಿದೆ. ಸ್ವಾತಂತ್ರ್ಯ ಹೋರಾಟಗಾರರನ್ನು ಹುಟ್ಟೂರಿನಲ್ಲೆ ಅವರ ಸಾಧನೆ ಗಳನ್ನು ಪರಿಚಯಿಸುವ ಅಪರೂಪದ ಕಾರ್ಯಕ್ರಮ ಇದಾಗಿರಲಿದೆ. ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಆಜಾದಿಕಾ ಅಮೃತ್ ಮಹೋತ್ಸವಕ್ಕಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಯ ಅಕಾಡೆಮಿಗಳು ಮತ್ತು ಪ್ರಾಧಿಕಾರಿಗಳು ಹಲವು ರೀತಿಯ ಕಾರ್ಯಕ್ರಮ ಗಳನ್ನು ರೂಪಿಸುವಲ್ಲಿ ನಿರತವಾಗಿವೆ.
ಅದೇ ರೀತಿಯಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿ ಕೂಡ ವಿಶೇಷ ಕಾರ್ಯಕ್ರಮ ರೂಪಿಸಿದೆ. ಭಾರತ ಸ್ವಾತಂತ್ರ್ಯ ಸಂಗ್ರಾಮಕ್ಕಾಗಿ ಅನೇಕ ಮಹನೀಯರು ಕೊಡುಗೆ ನೀಡಿದ್ದಾರೆ. ಅಂತಹ ಹೋರಾಟಗಾರರ ಬಗ್ಗೆ ಅವರ ಹುಟ್ಟೂರಿನಲ್ಲಿರುವ ಜನರಿಗೆ ಸರಿಯಾದ ಮಾಹಿತಿಯಿಲ್ಲ. ಆ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರರನನ್ನು ನೆನೆಪಿಸುವ ನಿಟ್ಟಿನಲ್ಲಿ ಕೆಲಸ ನಡೆಯಲಿದೆ ಎಂದು ಲಲಿತ ಕಲಾ ಅಕಾಡೆಮಿಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಎಲ್ಲೆಲ್ಲಿ ಆಜಾದಿಕಾ ಅಮೃತ್ ಮಹೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂಬ ಬಗ್ಗೆ ಚರ್ಚೆ ಕೂಡ ನಡೆದಿದೆ. ರಾಜ್ಯದ ಹಲವು ಸ್ಥಳಗಳು ಸ್ವಾತಂತ್ರ್ಯ ಹೋರಾಟಕ್ಕೆ ಸಾಕ್ಷಿಯಾಗಿವೆ. ಅಂತಹ ಪ್ರದೇಶಗಳಲ್ಲಿ ಹಿರಿಯ ಚಿತ್ರಕಲಾವಿದರೊಡಗೂಡಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.
ಎಲ್ಲೆಲ್ಲಿ ಕಾರ್ಯಕ್ರಮ ನಡೆಯಲಿದೆ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಈಸೂರು, ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ಬಳಿಯ ವಿದುರಾಶ್ವತ್ಥ, ಮಂಡ್ಯ ಜಿಲ್ಲೆಯ ಶಿವಪುರ ಸೇರಿದಂತೆ ರಾಜ್ಯದ ಅನೇಕ ಸ್ಥಳಗಳ ಬ್ರಿಟಿಷರ ವಿರುದ್ಧದ ಹೋರಾಟಕ್ಕೆ ಸಾಕ್ಷಿಯಾಗಿವೆ.
ಆ ಸ್ಥಳ ಮಹಿಮೆ ಬಗ್ಗೆ ಆ ಭಾಗದ ಜನರಿಗೆ ಐತಿ ಹಾಸಿಕ ಮಾಹಿತಿ ಸರಿಯಾಗಿಲ್ಲ.ಆ ಹಿನ್ನೆಲೆಯಲ್ಲಿ ಹಿರಿಯ ಕಲಾವಿದರು ಸ್ಥಳದಲ್ಲೇ ಚಿತ್ರ ಬಿಡಿಸುವ ಮೂಲಕ ಹೋರಾಟ ಸನ್ನಿವೇಶಗಳನ್ನು ಜನರಿಗೆ ಕಟ್ಟಿ ಕೊಡಲಿದ್ದಾರೆ ಎಂದು ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಡಿ.ಮಹೇಂದ್ರ ಹೇಳಿದ್ದಾರೆ.ಈ ಕಾರ್ಯಕ್ಕೆ ಹಿರಿಯ ಕಲಾವಿದರುಗಳನ್ನು ಬಳಸಿಕೊಳ್ಳಲು ಆಲೋಚನೆ ನಡೆಸಲಾಗಿದೆ. ಸುಮಾರು 50 ಜನ ಕಲಾವಿದರ ಜತೆಗೆ ಕಿರಿಯ ಕಲಾವಿದರನ್ನು ಕೂಡ ಬಳಕೆ ಮಾಡಿಕೊಳ್ಳಲಾಗುವುದು. ಕಾರ್ಯಕ್ರಮದ ರೂಪುರೇಷೆ ಗಳು ಕೂಡ ಸಿದ್ಧವಾಗುತ್ತಿವೆ ಎಂದು ತಿಳಿಸಿದ್ದಾರೆ.
ಈ ಮಧ್ಯೆ, ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿ ತಂತೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಸರ್ಕಾರ ಅನುಮತಿ ಪಡೆಯಬೇಕಾಗಿದೆ. ಸರ್ಕಾರ ಕಾರ್ಯಕ್ರಮ ನಡೆಸಲು ಅನುಮತಿ ನೀಡಿದ ತಕ್ಷಣ ಜಿಲ್ಲಾವಾರು ಪ್ರವಾಸ ಆರಂಭವಾಗಲಿದೆ ಎಂದು ಅಕಾಡೆಮಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆಜಾದಿಕಾ ಅಮೃತ್ ಮಹೋತ್ಸವ’ದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸ್ವಾತಂತ್ರ್ಯ ಸಂಗ್ರಾಮ ನೆನಪಿಸುವಂತಹ ವಿಶಿಷ್ಟಕಾರ್ಯಕ್ರಮ ರೂಪಿಸುತ್ತಿದೆ. ಸ್ವಾತಂತ್ರ್ಯ ಸಂಗ್ರಾಮವನ್ನು ಜನರಿಗೆ ಚಿತ್ರಗಳ ಮೂಲಕ ಕಟ್ಟಿಕೊಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.– ಡಿ.ಮಹೇಂದ್ರ, ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ
–ದೇವೇಶ ಸೂರಗುಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
MUST WATCH
ಹೊಸ ಸೇರ್ಪಡೆ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.