“ಬಿ’ ಖಾತಾಗೆ “ಎ’ ಖಾತಾ ನೀಡುವ ಚಿಂತನೆ


Team Udayavani, Mar 17, 2017, 11:37 AM IST

bbmp.jpg

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಭೂ ಪರಿವರ್ತನೆಗೊಂಡ “ಬಿ’ ಖಾತಾ ಆಸ್ತಿಗಳಿಗೆ “ಎ’ ಖಾತಾ ನೀಡುವ ಕುರಿತಂತೆ ಸರ್ಕಾರದ ಅಡ್ವೋಕೇಟ್‌ ಜನರಲ್‌ ಅವರ ಸಲಹೆ ಪಡೆಯಲು ಮುಂದಾಗಿದ್ದೇವೆ ಎಂದು ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಕೆ.ಗುಣಶೇಖರ್‌ ತಿಳಿಸಿದ್ದಾರೆ. 

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳಿಂದ ಭೂ ಪರಿವರ್ತನೆ­ಗೊಂಡ ಬಿ ಖಾತಾ ನಿವೇಶನಗಳಿಗೆ ಬ್ಯಾಂಕ್‌ಗಳಲ್ಲಿ ಸಾಲ ಸೇರಿ ಹಲವು ಸೌಲಭ್ಯಗಳು ದೊರೆಯುತ್ತಿಲ್ಲ. ಹೀಗಾಗಿ ಬಿ ಖಾತಾಗಳನ್ನು ಎ ಖಾತಾಗಳಾಗಿ ಪರಿವರ್ತಿಸುವ ಪ್ರಸ್ತಾಪವಿದೆ. ಆ ನಿಟ್ಟಿನಲ್ಲಿ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ಅಡ್ವೋಕೇಟ್‌ ಜನರಲ್‌ ಅವರ ಸಲಹೆ ಕೋರಲಾಗಿದ್ದು, ಪಾಲಿಕೆ ಬಜೆಟ್‌ಗೆ ಮುನ್ನ ಸಲಹೆ ಸಿಕ್ಕರೆ ಅದನ್ನು ಬಜೆಟ್‌ನಲ್ಲಿ ಘೋಷಿಸಲಾಗುವುದು ಎಂದು ಹೇಳಿದರು. 

ರಾಜ್ಯ ಬಜೆಟ್‌ನಲ್ಲಿ ಬೆಂಗಳೂರು ಅಭಿವೃದ್ಧಿಗೆ ಹೆಚ್ಚಿನ ಅನುದಾನ ಮೀಸಲಿಡಲಾಗಿದ್ದು, ನಮ್ಮ ಕ್ಯಾಂಟೀನ್‌, ಟೆಂಡರ್‌ಶ್ಯೂರ್‌ ಯೋಜನೆ, ರಸ್ತೆಗಳ ಉನ್ನತೀಕರಣ, ಕುಡಿಯುವ ನೀರು ಪೂರೈಕೆ ಸೇರಿ ಹಲವಾರು ಯೋಜನೆಗಳಿಗೆ ಪ್ರಾಮುಖ್ಯತೆ ನೀಡಲಾಗಿದೆ. ಒಟ್ಟಾರೆಯಾಗಿ ಬಜೆಟ್‌ನಲ್ಲಿ ಎಂಟು ಸಾವಿರ ಕೋಟಿ ರೂ. ಗೂ ಹೆಚ್ಚು ಅನುದಾನ ಬೆಂಗಳೂರಿಗೆ ನೀಡಲು ಉದ್ದೇಶಿಸಲಾಗಿದೆ. ಅದರ ಹಿನ್ನೆಲೆಯಲ್ಲಿ ಪಾಲಿಕೆ ಬಜೆಟ್‌ ಮತ್ತಷ್ಟು ಜನಪರ ಹಾಗೂ ವಾಸ್ತವಿಕವಾಗಿರುತ್ತದೆ ಎಂದು ಭರವಸೆ ನೀಡಿದರು. 

ಆಸ್ತಿಗಳ ಪತ್ತೆಗೆ ಡಿಜಿಟಲ್‌ ನಂಬರ್‌: ಪಾಲಿಕೆ ವ್ಯಾಪ್ತಿಯಲ್ಲಿರುವ ವಸತಿ ಮತ್ತು ವಸತಿಯೇತರ ಆಸ್ತಿಗಳ ಪತ್ತೆಗಾಗಿ ಪ್ರತಿ ಮನೆಗೂ ಡಿಜಿಟಲ್‌ ಡೋರ್‌ ನಂಬರ್‌ ನೀಡಲು ನಿರ್ಧರಿಸಲಾಗಿದೆ. ಇದರಿಂದ ಪಾಲಿಕೆಯ ವ್ಯಾಪ್ತಿಯಲ್ಲಿರುವ ಮನೆಗಳ ಸಂಖ್ಯೆ ದೊರೆಯಲಿದೆ. ಇದರೊಂದಿಗೆ ಬಹೃತ್‌ ಕಟ್ಟಡಗಳ ಟೋಟಲ್‌ ಸ್ಟೇಷನ್‌ ಸರ್ವೆಗೆ ಟೆಂಡರ್‌ ಆಹ್ವಾನಿಸಲಾಗಿದ್ದು, ತಿಂಗಳಾಂತ್ಯಕ್ಕೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

ನಗರದಲ್ಲಿರುವ ರುದ್ರಭೂಮಿಗಳು ಮತ್ತು ವಿದ್ಯುತ್‌ ಚಿತಾಗಾರಗಳ ಅಭಿವೃದ್ಧಿಗಾಗಿ ಬಜೆಟ್‌ನಲ್ಲಿ ವಿಶೇಷವಾಗಿ 150 ಕೋಟಿ ರೂ. ಮೀಸಲಿಡಲಾಗುತ್ತಿದೆ. ಜತೆಗೆ ರುದ್ರಭೂಮಿಗಳನ್ನು ಶಾಂತಿಧಾಮಗಳನ್ನಾಗಿ ಪರಿವರ್ತಿಸಿ ನಿರ್ವಹಣೆ ಮಾಡುವ ಜವಾಬ್ದಾರಿಯನ್ನು ತೋಟಗಾರಿಕೆ ಇಲಾಖೆಗೆ ವಹಿಸಲಾಗುತ್ತಿದ್ದು, ಹಳೆಯ ಮಾರುಕಟ್ಟೆಗಳನ್ನು ತೆರವುಗೊಳಿಸಿ ವಾಹನ ನಿಲುಗಡೆ ಕಟ್ಟಡಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು. 

ಮಾರ್ಚ್‌ 25ಕ್ಕೆ ಬಿಬಿಎಂಪಿ ಬಜೆಟ್‌
2017-18 ನೇ ಸಾಲಿನ ಬಿಬಿಎಂಪಿ ಬಜೆಟ್‌ ಮಾ.25ರಂದು ಬೆಳಗ್ಗೆ 10.30 ಕ್ಕೆ ಮಂಡಿಸಲಾ­ಗುವುದು.ಈ ಬಾರಿಯ ಪಾಲಿಕೆ ಬಜೆಟ್‌ನಲ್ಲಿ ಜನಪರ ಮತ್ತು ಕಲ್ಯಾಣ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಪಾಲಿಕೆಗೆ ಪ್ರಸಕ್ತ ಸಾಲಿನಲ್ಲಿ ಸಂಗ್ರಹವಾಗಿರುವ ಆದಾಯಕ್ಕೆ ಅನುಗುಣವಾಗಿ ಯೋಜನೆಗಳನ್ನು ಘೋಷಿಸಲಾಗುವುದು.

ಟಾಪ್ ನ್ಯೂಸ್

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Bengaluru: ಸೆಂಟ್ರಿಂಗ್‌ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್‌ ವಶಕ್ಕೆ

Bengaluru: ಸೆಂಟ್ರಿಂಗ್‌ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್‌ ವಶಕ್ಕೆ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.