ಬಿ-ಫಾರ್ಮ ಸೀಟು ಹಂಚಿಕೆ ತಾತ್ಕಾಲಿಕ ಸ್ಥಗಿತ
Team Udayavani, Jul 19, 2017, 5:40 AM IST
ಬೆಂಗಳೂರು: ರಾಜ್ಯ ಸರಕಾರ ಬಿ-ಫಾರ್ಮ ಕೋರ್ಸ್‌ಗೆ 20:80ರ ಸರಾಸರಿಯಲ್ಲಿದ್ದ ಸೀಟು ಹಂಚಿಕೆ ಪ್ರಮಾಣವನ್ನು 50:50ಕ್ಕೆ ಮಾರ್ಪಾಡು ಮಾಡಿ ಹೊರಡಿಸಿದ್ದ ಆದೇಶಕ್ಕೆ ರಾಜ್ಯ ಹೈಕೋರ್ಟ್ ತಡೆಯಾಜ್ಞೆ ನೀಡಿರುವ ಹಿನ್ನೆಲೆಯ ಬಿ-ಫಾರ್ಮ ಕೋರ್ಸ್‌ಗೆ ಪ್ರವೇಶಾತಿ ತಾತ್ಕಾಲಿಕ ಸ್ಥಗಿತಗೊಂಡಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬಿ-ಫಾರ್ಮ ಕೋರ್ಸ್‌ಗೆ ಲಭ್ಯವಿರುವ ಸೀಟಿಗೆ ಕೌನ್ಸೆಲಿಂಗ್ ಹಾಗೂ ಆಪ್ಶನ್ ಎಂಟ್ರಿ ಕೂಡ ಅವಕಾಶ ನೀಡಿತ್ತು. ಈ ಮಧ್ಯೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದರಿಂದ ಪ್ರಕ್ರಿಯೆ ಸದ್ಯ ಸ್ಥಗಿತಗೊಂಡಿದೆ. ಶೇ. 20ರಷ್ಟು ಸರಕಾರಿ ಕೋಟಾ ಹಾಗೂ ಶೇ. 80ರಷ್ಟು ಖಾಸಗಿ ಕೋಟಾದ ಬದಲಿಗೆ ತಲಾ ಶೇ. 50ರಷ್ಟು ಸರಕಾರಿ ಹಾಗೂ ಖಾಸಗಿ ಕೋಟಾ ಮಾಡಿರುವುದರ ವಿರುದ್ಧ ಕೆಲವರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಸರಕಾರಿ ಕೋಟಾವನ್ನು ಶೇ. 20ರಿಂದ ಶೇ. 50ಕ್ಕೆ ಏರಿಕೆ ಮಾಡಿದ್ದರಲ್ಲಿ ಶೇ. 30ರಷ್ಟು ಹೆಚ್ಚುವರಿಯಾಗಿದ್ದು, ಅದಕ್ಕೆ ಮಾತ್ರ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಕಳೆದ ವರ್ಷದಂತೆ 20:80ರ ಅನುಪಾತದಲ್ಲಿ ಸೀಟು ಹಂಚಿಕೆಗೆ ಅವಕಾಶ ನೀಡಬೇಕು ಎಂದು ಪ್ರಾಧಿಕಾರದ ಅಧಿಕಾರಿಗಳು ಸರಕಾರಕ್ಕೆ ಪತ್ರ ಬರೆದಿದ್ದಾರೆ. ಆದರೆ, ಸರಕಾರದಿಂದ ಈವರೆಗೆ ಪ್ರಾಧಿಕಾರಕ್ಕೆ ಯಾವುದೇ ಉತ್ತರ ಬಂದಿಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ.
ಕೆಎಇ ಎದುರು ವಿದ್ಯಾರ್ಥಿಗಳ ಜಾತ್ರೆ
ನೀಟ್ ತೇರ್ಗಡೆಯಾಗಿರುವ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಸೋಮವಾರದಿಂದಲೇ ಆರಂಭವಾಗಿದ್ದು, ಹೊರ ರಾಜ್ಯದ ವಿದ್ಯಾರ್ಥಿಗಳು ಸಹಿತ ಕರ್ನಾಟಕದ ಬಹುತೇಕ ವಿದ್ಯಾರ್ಥಿಗಳು ಬೆಂಗಳೂರು ಕೇಂದ್ರ ಆಯ್ಕೆ ಮಾಡಿಕೊಂಡಿರುವುದರಿಂದ ಪರಿಶೀಲನೆ ವೇಳೆ ವಿದ್ಯಾರ್ಥಿಗಳ ಸಂಖ್ಯೆ ನಿರೀಕ್ಷೆಗೂ ಮೀರಿತ್ತು. ಪರಿಶೀಲನೆ ತ್ವರಿತಗತಿಯಲ್ಲಿ ಆಗದ ಕಾರಣ, ಅನೇಕ ವಿದ್ಯಾರ್ಥಿಗಳಲ್ಲಿ ಸಮರ್ಪಕ ದಾಖಲೆ ಇಲ್ಲದ ಕಾರಣ ಕೆಇಎ ಅಧಿಕಾರಿಗಳು, ವಿದ್ಯಾರ್ಥಿಗಳು, ಹೆತ್ತವರು ರಾತ್ರಿ ಪೂರ್ತಿ ಜಾಗರಣೆ ಮಾಡಿದ್ದಾರೆ. ರಾಜ್ಯದಲ್ಲಿ ಲಭ್ಯವಿರುವ ವೈದ್ಯಕೀಯ, ದಂತವೈದ್ಯಕೀಯ ಸೀಟ್‌ಗೆ ನೀಟ್ ತೇರ್ಗಡೆಯಾದ ಸಾವಿರಾರು ವಿದ್ಯಾರ್ಥಿಗಳು ಪ್ರಾಧಿಕಾರದ ಸೂಚನೆಯಂತೆ ನೋಂದಣಿ ಮಾಡಿಕೊಂಡಿದ್ದರು. ಹೊರ ರಾಜ್ಯದವರಿಗೂ ಅವಕಾಶ ನೀಡಿರುವುದರಿಂದ ಅವರ ಸಂಖ್ಯೆಯೂ ಹೆಚ್ಚಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
E-Khata: ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ
MUDA CASE: ಸಿಎಂ ಆಪ್ತ, ಸಂಸದ ಇ.ಡಿ. ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
ShivaRajkumar: ʼಘೋಸ್ಟ್ʼ ಬಳಿಕ ಮತ್ತೆ ಶ್ರೀನಿ ಜತೆ ಶಿವಣ್ಣ ಸಿನಿಮಾ; ಟೈಟಲ್ ರಿವೀಲ್
World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ
Sullia: 10 ವರ್ಷದ ಬಳಿಕ ಚಿಂಗಾಣಿ ಗುಡ್ಡೆ ಟ್ಯಾಂಕ್‌ಗೆ ಕೊನೆಗೂ ನೀರು ಬಂತು!
Waqf Board Case: ಆಪ್ ಶಾಸಕ ಅಮಾನತುಲ್ಲಾ ಖಾನ್ ಗೆ ಜಾಮೀನು
Bantwal: ಶಂಭೂರಿನ ಎಂಆರ್‌ಎಫ್ ತಿಂಗಳಲ್ಲಿ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.