ವರ್ತೂರು ಕೆರೆಯಲ್ಲಿ ಮತ್ತೆ ನೊರೆ!
Team Udayavani, May 29, 2017, 12:49 PM IST
ಮಹದೇವಪುರ: ವಾರದಿಂದ ಸುರಿದ ಮಳೆಗೆ ವರ್ತೂರು ಕೆರೆಯಲ್ಲಿ ಮತ್ತೆ ಭಾರಿ ಪ್ರಮಾಣದ ನೊರೆ ಸೃಷ್ಟಿಯಾಗಿ ರಸ್ತೆಗೆ ಹಾರುತ್ತಿರುವುದರಿಂದ ವಾಹನ ಸವಾರರು ಹಾಗೂ ಪಾದಾಚಾರಿಗಳು ಸಮಸ್ಯೆ ಎದುರಿಸುವಂತಾಗಿದೆ.
ನಗರದಲ್ಲಿ ಮುಂಗಾರು ಪೂರ್ವ ಮಳೆಯ ಆರ್ಭಟ ಜೋರಾಗಿದ್ದು, ಮಳೆ ಕಾಲುವೆಗಳಲ್ಲಿ ಒಳಹರಿವು ಹೆಚ್ಚಿದೆ. ಪರಿಣಾಮ ನೊರೆ ಸಮಸ್ಯೆ ಮತ್ತೆ ಕಾಣಿಸಿಕೊಂಡಿದೆ. ಶನಿವಾರ ರಾತ್ರಿ ಭಾರಿ ಪ್ರಮಾಣದ ನೊರೆ ಸೃಷ್ಟಿಯಾಗಿ ರಸ್ತೆ ಮೇಲೆ ಹರಡಿದ್ದರಿಂದ ರಸ್ತೆಯೇ ಕಾಣದ ಸ್ಥಿತಿ ನಿರ್ಮಾಣವಾಗಿತ್ತು.
ಎನ್ಜಿಟಿ ಆದೇಶದ ಬಳಿಕ ಎಚ್ಚೆತ್ತ ಬಿಡಿಎ, ನೊರೆ ರಸ್ತೆಗೆ ಹಾರದಂತೆ ವರ್ತೂರು ಕೋಡಿಯಲ್ಲಿ 20 ಅಡಿ ಎತ್ತರ ಮೆಷ್ ಅಳವಡಿಸೊದೆ. ಆದರೆ ಇತ್ತೀಚೆಗೆ ಬಿರುಗಾಳಿ ಬೀಸಿದಾಗ ವರ್ತೂರು ಕೊಡಿ ಬಳಿ ತಡೆಗೋಡೆ ಸಮೇತ ಮೆಷ್ ರಸ್ತೆಗೆ ವಾಲಿದೆ.
ಇದರಿಂದಾಗಿ ನೊರೆ ರಸ್ತೆಗೆ ಬರುತ್ತಿದ್ದು, ಅಪಘಾತ ಸಂಭವಿಸುವ ಅಪಾಯ ಎದುರಾಗಿದೆ. ಇಷ್ಟಾದರೂ ನೊರೆ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲು ಮುಂದಾಗದ ಅಧಿಕಾರಿಗಳ ವಿರುದ್ಧ ಜನ ತೀವ್ರ ಆಕ್ರೋಶಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.