ಬಾಹುಬಲಿ ಕಾಫಿ ಟೇಬಲ್ ಬುಕ್ ಬಿಡುಗಡೆ
Team Udayavani, Feb 23, 2018, 6:00 AM IST
ಬೆಂಗಳೂರು: ಶ್ರವಣಬೆಳಗೊಳದಲ್ಲಿ ನಡೆಯುತ್ತಿರುವ ಮಹಾಮಸ್ತಕಾಭಿಷೇಕದ ಅಂಗವಾಗಿ “ಉದಯವಾಣಿ’ ಹೊರತಂದಿರುವ ಬಾಹುಬಲಿ ಕುರಿತ ಅತ್ಯಾಕರ್ಷಕ ಕೃತಿಯನ್ನು (ಕಾಫಿ ಟೇಬಲ್ ಬುಕ್) ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಬಿಡುಗಡೆಗೊಳಿಸಿದರು.
ಅಧಿಕೃತ ನಿವಾಸ ಕಾವೇರಿಯಲ್ಲಿ ಕೃತಿ ಬಿಡುಗಡೆಗೊಳಿಸಿ ವಿಶ್ವದ ಗಮನ ಸೆಳೆದಿರುವ ಮಹಾಮಸ್ತಕಾಭಿಷೇಕದ ಪ್ರಯುಕ್ತ “ಉದಯವಾಣಿ’ ಪತ್ರಿಕೆಯು ವಿಶೇಷ ಕೃತಿ ಹೊರತಂದಿರುವುದು ಶ್ಲಾಘನೀಯ ಎಂದು ಹೇಳಿದರು.
ಶ್ರವಣಬೆಳಗೊಳ ಹಾಗೂ ಬಾಹುಬಲಿ ಇತಿಹಾಸದ ಸಮಗ್ರ ಚಿತ್ರಣ ನೀಡುವುದರ ಜತೆಗೆ ಬಾಹುಬಲಿ ಮೂರ್ತಿ, ಮಹಾಮಸ್ತಕಾಭಿಷೇಕ, ಆ ಪರಿಸರದ ಧಾರ್ಮಿಕ ಹಾಗೂ ಐತಿಹಾಸಿಕ ಸ್ಥಳಗಳ ಅಂದವಾದ ಚಿತ್ರ ಒಳಗೊಂಡಿರುವುದು ಕೃತಿಯ ಮೆರುಗು ಹೆಚ್ಚಿಸಿದೆ ಎಂದು ತಿಳಿಸಿದರು.
ಶ್ಲಾಘನೆ
ಇದೇ ಸಂದರ್ಭದಲ್ಲಿ ಶ್ರವಣಬೆಳಗೊಳದಲ್ಲಿ ಕೃತಿ ಬಿಡುಗಡೆಗೊಳಿಸಿದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಇದೊಂದು ಕಲಾತ್ಮಕ ಕೃತಿ ಎಂದು ಬಣ್ಣಿಸಿದರು.
ಉದಯವಾಣಿಯ ಈ ಪ್ರಯತ್ನ ಶ್ರೀ ಕ್ಷೇತ್ರದ ಇತಿಹಾಸದ ಪುಟದಲ್ಲಿ ದಾಖಲಾಗಲಿದೆ. ಅಸಂಖ್ಯಾತ ಭಕ್ತ ಸಮೂಹಕ್ಕೆ ಇದು ಮೆಚ್ಚುಗೆಯಾಗಲಿದೆ ಎಂದು ಇದೇ ಸಂದರ್ಭದಲ್ಲಿ ತರಂಗ ವ್ಯವಸ್ಥಾಪಕ ಸಂಪಾದಕರಾದ ಡಾ. ಸಂಧ್ಯಾ ಪೈ ಅವರಿಗೆ ಸಂದೇಶ ರವಾನಿಸಿದರು.
ಮಣಿಪಾಲ್ ಮೀಡಿಯಾ ಸಮೂಹದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನೋದ್‌ಕುಮಾರ್, ಉದಯವಾಣಿ ಬೆಂಗಳೂರು ಆವೃತ್ತಿ ಸಂಪಾದಕ ಶಿವಸುಬ್ರಹ್ಮಣ್ಯ ಕೆ. ಉಪಸ್ಥಿತರಿದ್ದರು. “ಬಾಹುಬಲಿ’ ಕಾಫಿ ಟೇಬಲ್ ಬುಕ್ 152 ಪುಟಗಳನ್ನು ಒಳಗೊಂಡಿದೆ.
Video:FAKKRUDHIN H
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.