ಬಲಿಪ ನಾರಾಯಣ ಭಾಗವತರಿಗೆ ಪ್ರತಿಷ್ಠಿತ “ಪಾರ್ತಿಸುಬ್ಬ ಪ್ರಶಸ್ತಿ’
Team Udayavani, Sep 18, 2018, 6:00 AM IST
ಬೆಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿ 2017ನೇ ಸಾಲಿನ ವಿವಿಧ ಪ್ರಶಸ್ತಿಗಳನ್ನು ಪ್ರಕಟಿಸಿದ್ದು ಪ್ರತಿಷ್ಠಿತ
“ಪಾರ್ತಿಸುಬ್ಬ’,ಪ್ರಶಸ್ತಿಗೆ ತೆಂಕುತಿಟ್ಟು ಯಕ್ಷಗಾನ ಕಲಾವಿದ ಮೂಡಬಿದರೆಯ ಮಾರೂರು ಗ್ರಾಮದ ಬಲಿಪ ನಾರಾಯಣ ಭಾಗವತ ಆಯ್ಕೆಯಾಗಿದ್ದಾರೆ.
ಕನ್ನಡ ಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಪ್ರೊ.ಎಂ.ಎ.ಹೆಗಡೆ, ಪಾರ್ತಿಸುಬ್ಬ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನ ಪ್ರಕಟಿಸಿದರು. ಯಕ್ಷಗಾನ ಕ್ಷೇತ್ರದಲ್ಲಿನ ಸಾಧನೆಗಾಗಿ ನೀಡಲಾಗುವ ಪಾರ್ತಿಸುಬ್ಬ ಪ್ರಶಸ್ತಿಗೆ ಬಲಿಪ ನಾರಾಯಣ ಭಾಗವತ (ಯಕ್ಷಗಾನ ಪ್ರಸಂಗ ಕತೃì ಮತ್ತು ಖ್ಯಾತ ಭಾಗವತರು) ಅವರನ್ನು ಆಯ್ಕೆ ಮಾಡಲಾಗಿದ್ದು, ಪ್ರಶಸ್ತಿ 1ಲಕ್ಷ ರೂ.ನಗದು ಮತ್ತು ಫಲಕವನ್ನು ಒಳಗೊಂಡಿದೆ ಎಂದರು.
ಹಾಗೆ, 2017ನೇ ಸಾಲಿನ ಗೌರವ ಪ್ರಶಸ್ತಿಗೆ ಉತ್ತರ ಕನ್ನಡ ಜಿಲ್ಲೆ ಶಿರಸಿಯ ಶಂಕರ ಭಾಗವತ (ಮದ್ದಳೆ ವಾದಕರು), ಬಂಟ್ವಾಳ ತಾಲೂಕಿನ ಇರಾ ಗ್ರಾಮದ ಬರೆ ಕೇಶವ ಭಟ್ (ತಾಳಮದ್ದಳೆ ಅರ್ಥಗಾರಿಕೆ), ಕುಂದಾಪುರದ ಹೆಚ್.ಶ್ರೀಧರ್ ಹಂದೆ ಕೋಟ (ಬಡಗುತಿಟ್ಟು ಯಕ್ಷಗಾನ ವಿದ್ವಾಂಸರು ಮತ್ತು ಭಾಗವತರು), ತಿಪಟೂರಿನ ಅರಳಗುಪ್ಪೆಯ ಎ.ಎಂ.ಶಿವಶಂಕರಯ್ಯ (ಮೂಡಲಪಾಯ ಯಕ್ಷಗಾನ ಭಾಗವತರು) ಮತ್ತು ಬೆಂಗಳೂರಿನ ಕರಿಯಣ್ಣ ನವರು
(ಮೂಡಲಪಾಯ ಯಕ್ಷಗಾನ ಪಾತ್ರಧಾರಿ)ಆಯ್ಕೆಯಾಗಿದ್ದು, ಪ್ರಶಸ್ತಿ 50 ಸಾವಿರ ರೂ.ನಗದು ಮತ್ತು ಫಲಕ ಒಳಗೊಂಡಿದೆ ಎಂದು ತಿಳಿಸಿದರು.
2017ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿಗೆ ಬಲಿಪ ನಾರಾಯಣ ಭಾಗವತರ “ಬಲಿಪರ ಜಯಲಕ್ಷಿ$¾à’ (ಪ್ರಸಂಗ ಸಂಕಲನ)ಮತ್ತು ಶಿವಮೊಗ್ಗ ಜಿಲ್ಲೆ ಸಾಗರದ ಪ್ರೊ.ಜಿ.ಎಸ್.ಭಟ್ ಅವರ ಯಕ್ಷಗಾನ “ಅಂಗೋಪಾಂಗ ಸಮತೋಲನ ವಿಚಾರ’ (ಸಂಶೋಧನಾ ಗ್ರಂಥ) ಕೃತಿಗಳು ಭಾಜನವಾಗಿವೆ.
ಪ್ರಶಸ್ತಿ 25 ಸಾವಿರ ರೂ.ನಗದು ಮತ್ತು ಸ್ಮರಣಿಕೆಯನ್ನು ಒಳಗೊಂಡಿದ್ದು, ಸೆಪ್ಟೆಂಬರ್ ಕೊನೆ ವಾರ ಅಥವಾ ಅಕ್ಟೋಬರ್ ಮೊದಲ ವಾರದಲ್ಲಿ ಉಡುಪಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರೊ.ಎಂ.ಎ.ಹೆಗಡೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.