ಬಂದ್‌ಗೆ ಬೆಂಬಲ: ದಿನೇಶ್
Team Udayavani, Jan 23, 2018, 7:00 AM IST
ಬೆಂಗಳೂರು: ಮಹದಾಯಿ ನದಿ ವಿವಾದ ಬಗೆಹರಿಸಲು ಪ್ರಧಾನಿ ಮಧ್ಯಸ್ಥಿಕೆ ವಹಿಸುವಂತೆ ಕನ್ನಡ ಪರ ಸಂಘಟನೆಗಳು ಜ.25 ರಂದು ನಡೆಸಲು ಉದ್ದೇಶಿಸಿರುವ ಬಂದ್ ಅನ್ನು ಬೆಂಬಲಿಸುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹದಾಯಿ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡಬೇಕು. ಕೇಂದ್ರ ಸರ್ಕಾರ ಮಹದಾಯಿ ವಿಚಾರದಲ್ಲಿ ರಾಜ್ಯದ ಬೆನ್ನಿಗೆ ನಿಲ್ಲಲಿಲ್ಲ. ಇದು ರಾಜ್ಯದ ಜನತೆಗೆ ಬೇಸರ ತಂದಿದೆ. ಈ ಹಿನ್ನೆಲೆಯಲ್ಲಿ ಕನ್ನಡ ಪರ ಸಂಘಟನೆಗಳು ಹೋರಾಟ ಮಾಡುತ್ತಿವೆ.
ಮಹದಾಯಿ ವಿಚಾರವನ್ನು ಮೊದಲು ಬಿಜೆಪಿಯ ಯಡಿಯೂರಪ್ಪ ರಾಜಕೀಯಕ್ಕಾಗಿ ಬಳಸಿಕೊಂಡರು. ಆದರೆ, ಅವರಿಗೆ ನಿರಾಶೆಯಾಯಿತು.
ಈಗಲಾದರೂ ಎಲ್ಲರೂ ಸೇರಿ ಹೋರಾಟ ಮಾಡಬೇಕು. ಪ್ರಧಾನಿ ಮಧ್ಯ ಪ್ರವೇಶ ಮಾಡುವಂತೆ ಕನ್ನಡಪರ, ರೈತ ಸಂಘಟನೆಗಳು ಬಂದ್‌ಗೆ ಕರೆ ನೀಡಿರುವುದನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು. ಕನ್ನಡ ಪರ ಸಂಘಟನೆಗಳ ಬಂದ್‌ಗೆ ಸರ್ಕಾರದ ಹಸ್ತಕ್ಷೇಪ ಇದೆ ಎನ್ನುವ ಆರೋಪ ಸತ್ಯಕ್ಕೆ ದೂರ. ಜ. 26 ರಂದು ಗಣರಾಜ್ಯೋತ್ಸವ ಇರುವುದರಿಂದ 25 ರಂದು ಬಂದ್ ಮಾಡಲು ಮುಖ್ಯಮಂತ್ರಿ ಸಲಹೆ ನೀಡಿದ್ದರು. ಅದರಂತೆ ಕನ್ನಡ ಪರ ಸಂಘಟನೆಗಳು ಬಂದ್‌ಗೆ ಕರೆ ನೀಡಿವೆ. ಬಂದ್ ಮಾಡುವ ದಿನ ಪ್ರಧಾನಿ ಮೋದಿ, ಅಮಿತ್ ಶಾ ಬರುವುದು ಗೊತ್ತಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.