ಬಂದ್ ಯಶಸ್ವಿಗೊಳಿಸುತ್ತೇವೆ: ಡಾ.ಜಿ.ಪರಮೇಶ್ವರ್
Team Udayavani, Sep 10, 2018, 6:50 AM IST
ಬೆಂಗಳೂರು: ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕರೆ ನೀಡಿರುವ ಭಾರತ್ ಬಂದ್ ರಾಜ್ಯದಲ್ಲಿ ಸರ್ಕಾರಿ ಪ್ರಾಯೋಜಿತ ಬಂದ್ ಆಗುವುದು ಖಚಿತ. ಭಾರತ್ ಬಂದ್‌ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಈಗಾಗಲೇ ಬೆಂಬಲ ವ್ಯಕ್ತಪಡಿಸಿದ್ದರೆ, ಉಪಮುಖ್ಯಮಂತ್ರಿಯೂ ಆಗಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕೂಡ ರಾಜ್ಯದಲ್ಲಿ ಬಂದ್ ಯಶಸ್ವಿಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಬಂದ್‌ಗೆ ರಾಜ್ಯದಲ್ಲಿ ರಾಜ್ಯದ ವಿವಿಧ ಸಂಘಟನೆಗಳು ಮಾತ್ರವಲ್ಲದೆ, ಜೆಡಿಎಸ್
ಕೂಡ ಬೆಂಬಲ ವ್ಯಕ್ತಪಡಿಸಿದೆ. ಹೀಗಾಗಿ ಬಂದ್ ಯಶಸ್ವಿಯಾಗಲಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರದ ವಿರುದ್ಧ ಕರೆ ನೀಡಿರುವ ಬಂದ್‌ಗೆ ರಾಜ್ಯಗಳಲ್ಲಿ ಆಡಳಿತದಲ್ಲಿರುವ ಪಕ್ಷ ಬೆಂಬಲಿಸಬಾರದು
ಎಂಬ ನಿಯಮವೇನೂ ಇಲ್ಲ. ಜನರ ಸಮಸ್ಯೆ, ಅವರಿಗೆ ಆಗುವ ತೊಂದರೆಗಳಿಗೆ ಸ್ಪಂದಿಸುವುದು ಮುಖ್ಯವಾಗುತ್ತದೆ. ಪೆಟ್ರೋಲ್,ಡೀಸೆಲ್ ಬೆಲೆ ಏರಿಕೆಯಿಂದ ಇತರ ದಿನ ಉಪಯೋಗಿ ವಸ್ತುಗಳ ಬೆಲೆಯೂ ಹೆಚ್ಚಾಗುತ್ತದೆ. ಹೀಗಾಗಿ ಜನರ ಹಿತದೃಷ್ಟಿಯಿಂದ ಬಂದ್‌ಗೆ ಕರೆ ನೀಡಲಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಗಳು ಇವುಗಳ ಮೇಲೆ ವಿಧಿಸಿರುವ ಸೆಸ್ ಕಡಿಮೆ ಮಾಡಬೇಕು ಎಂಬ ವಾದ ಸರಿಯಲ್ಲ. ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳಿಂದ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗುತ್ತಿರುವುದರಿಂದ ಅದನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರವೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
MUST WATCH
ಹೊಸ ಸೇರ್ಪಡೆ
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.