ಶಸ್ತ್ರಾಸ್ತ್ರ ಸ್ವೀಕಾರ ವೇಳೆ ಆಣೆ ಪ್ರಮಾಣ!
Team Udayavani, Jul 30, 2023, 10:19 AM IST
ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಎನ್ ಐಎ) ಸದ್ಯದಲ್ಲೇ ಅಧಿಕೃತವಾಗಿ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಲಿದೆ.
ಈ ಬೆನ್ನಲ್ಲೇ ಬೆಂಗಳೂರಿನ ಎನ್‌ಐಎ ಅಧಿಕಾರಿಗಳು ಸಿಸಿಬಿ ಪೊಲೀಸರು ಬಂಧಿಸಿರುವ ಐವರು ಶಂಕಿತರ ಪ್ರಾಥಮಿಕ ವಿಚಾರಣೆ ನಡೆಸಿ ಇಡೀ ವರದಿಯನ್ನು ದೆಹಲಿಯಲ್ಲಿರುವ ಕೇಂದ್ರ ಕಚೇರಿಗೆ ರವಾನೆ ಮಾಡಿದ್ದಾರೆ.
ಶಂಕಿತರು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕ ಸಂಘಟನೆಯಲ್ಲಿ ಸಕ್ರಿಯವಾಗಿರುವುದು ಪತ್ತೆಯಾಗಿದೆ. ಜತೆಗೆ ನಾಜೀರ್‌ನಿಂದ ಪ್ರಚೋದನೆಗೊಂಡ ಉಗ್ರ ಸಂಘಟನೆ ಸೇರಿದ ಶಂಕಿತರು, ಶಸ್ತ್ರಾಸ್ತ್ರ ಸ್ವೀಕರಿಸುವಾಗ ಆಣೆ ಪ್ರಮಾಣ ಮಾಡಿದ್ದರು ಎಂಬುದು ತಿಳಿದು ಬಂದಿದೆ.
ಬೆಂಗಳೂರು ಸರಣಿ ಬಾಂಬ್ ಸ್ಫೋಟದ ಅಪರಾಧಿ ನಾಜೀರ್ ಪ್ರಚೋದನೆ ಮೇರೆಗೆ ಅರಬ್ ರಾಷ್ಟ್ರದಲ್ಲಿ ತಲೆಮರೆಸಿಕೊಂಡಿರುವ ಜುನೈದ್ ಉಗ್ರ ಸಂಘಟನೆ ಸದಸ್ಯರನ್ನು ಸಂಪರ್ಕಿಸಿದ್ದಾನೆ. ಅಲ್ಲದೆ, ಅವರಿಂದ ಲಕ್ಷಾಂತರ ರೂ. ಪಡೆದುಕೊಂಡು ತನ್ನ ಸಹಚರರಿಗೆ ಹಂಚಿದ್ದಾನೆ. ವಿದೇಶದಿಂದಲೇ ಜುನೈದ್‌ಗೆ ಹಣ ಸಂದಾಯವಾಗಿರುವ ಮಾಹಿತಿ ಸಿಕ್ಕಿದೆ.
ಜತೆಗೆ ಎಲ್‌ಇಟಿ ಉಗ್ರರು ಕೂಡ ಜುನೈದ್ ಹಾಗೂ ಇತರೆ ಶಂಕಿತರಿಗೆ ಕೆಲ ಟಾಸ್ಕ್ಗಳನ್ನು ನೀಡಿದ್ದರು. ಅದರ ಪ್ರಕಾರ ಎಲ್ಲರೂ ಉಗ್ರ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಬೆಂಗಳೂರು, ಬೆಳಗಾವಿ, ಮೈಸೂರು ಹಾಗೂ ಮಂಗಳೂರಿನ ಕೆಲ ಭಾಗಗಳನ್ನು ಶಂಕಿತರು ಟಾರ್ಗೆಟ್ ಮಾಡಿಕೊಂಡಿದ್ದರು. ಈ ಬೆನ್ನಲ್ಲೇ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದರು ಎಂಬುದು ಪತ್ತೆಯಾಗಿದೆ. ಈ ಎಲ್ಲ ಅಂಶಗಳನ್ನು ಇಟ್ಟುಕೊಂಡು ಬೆಂಗಳೂರಿನ ಎನ್‌ಐಎ ಅಧಿಕಾರಿಗಳು ಕೇಂದ್ರ ಕಚೇರಿಗೆ ವರದಿ ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ವರದಿಯನ್ನು ಎನ್‌ಐಎ ಕೇಂದ್ರ ಕಚೇರಿಯ ಹಿರಿಯ ಅಧಿಕಾರಿಗಳು ಕೇಂದ್ರ ಗೃಹ ಸಚಿವಾಲಯಕ್ಕೆ ಕಳುಹಿಸಲಿದ್ದು, ಆ ಬಳಿಕ ಸಚಿವಾಲಯದ ಸೂಚನೆ ಮೇರೆಗೆ ತನಿಖೆ ಆರಂಭಿಸಲಿದೆ. ಇನ್ನು ಸಿಸಿಬಿ ಪೊಲೀಸರು ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆ(ಯುಎಪಿಎ) ಅಡಿ ಪ್ರಕರಣ ದಾಖಲಿಸಿಕೊಂಡಿರುವುದರಿಂದ ಎನ್‌ಐಎ ಮುಂದಿನ ತನಿಖೆ ನಡೆಸಲಿದೆ. ಈ ಮಧ್ಯೆ ಸಿಸಿಬಿಯ ಹಿರಿಯ ಅಧಿಕಾರಿಗಳು ದೆಹಲಿಗೆ ತೆರಳಿದ್ದು, ಪರಾರಿಯಾಗಿರುವ ಸಲ್ಮಾನ್ ಹಾಗೂ ಜುನೈದ್ ಪತ್ತೆಗಾಗಿ ಕೇಂದ್ರದ ತನಿಖಾ ಸಂಸ್ಥೆಗಳ ನೆರವು ಕೋರಿದ್ದಾರೆ. ನಾಜೀರ್‌ನಿಂದ ಪ್ರಚೋದನೆಗೊಂಡ ಉಗ್ರ ಸಂಘಟನೆ ಸೇರಿದ ಶಂಕಿತರು, ಶಸ್ತ್ರಾಸ್ತ್ರಗಳನ್ನು ಪಡೆಯುವಾಗ ಆಣೆ ಪ್ರಮಾಣ ಮಾಡಿದ್ದರು ಎಂಬುದು ತಿಳಿದು ಬಂದಿದೆ.
ಆತನ ಅಣತಿಯಿಂದ ಗ್ರೇನೇಡ್ ಮತ್ತು ಶಸ್ತ್ರಾಸ್ತ್ರಗಳನ್ನು ಪಡೆಯುವ ಮೊದಲು ನಾಜೀರ್ ಮತ್ತು ಜುನೈದ್ ಬಂಧಿತ ಐವರು ಶಂಕಿತರಿಂದ ಈ ವಿಚಾರವನ್ನು ಯಾರೊಂದಿಗೂ ಹೇಳಿಕೊಳ್ಳುವುದಿಲ್ಲ. ತಾವು ಕಳುಹಿಸಿದ ಪಾರ್ಸ್‌ಲ್ ಅನ್ನು ಹೇಳುವವರೆಗೂ ತೆರೆಯುವುದಿಲ್ಲ ಎಂದು ಆಣೆ ಮಾಡಿಸಿಕೊಂಡಿದ್ದರು ಎಂಬುದು ಗೊತ್ತಾಗಿದೆ. ಅಂದರೆ ಕಸಮ್ ಎ ಬಾತ್ ಕಿಸ್ಕೋಬಿ ನಹಿ ಬೋಲ್ತಾ ಎಂದು ಆಣೆ ಮಾಡಿಸಿಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ.
ಇನ್ನು ಪೋಕ್ಸೋ ಪ್ರಕರಣದ ಆರೋಪಿ ಸಲ್ಮಾನ್ ಎಂಬಾತ ನಾಜೀರ್ ಸೂಚನೆ ಮೇರೆಗೆ ಜಾಹೀದ್ ತಬ್ರೇಜ್‌ಗೆ ಉತ್ತರ ಪ್ರದೇಶ ಮೂಲದ ವ್ಯಕ್ತಿಯಿಂದ ಗ್ರೇನೇಡ್ ತಂದು ಕೊಟ್ಟಿದ್ದ. ಸದ್ಯ ಸಲ್ಮಾನ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.