Crime News: ಹಳೇ ದ್ವೇಷಕ್ಕೆ ನಡುರಸ್ತೆಯಲ್ಲಿ ತಮಿಳುನಾಡಿನ ವ್ಯಕ್ತಿ ಭೀಕರ ಕೊಲೆ
Team Udayavani, Oct 12, 2023, 12:21 PM IST
ಬೆಂಗಳೂರು: ಹಳೇ ದ್ವೇಷಕ್ಕೆ ದುಷ್ಕರ್ಮಿಗಳು ವ್ಯಕ್ತಿಯೊಬ್ಬನನ್ನು ನಡು ರಸ್ತೆಯಲ್ಲೇ ಭೀಕರವಾಗಿ ಹತ್ಯೆಗೈದಿರುವ ಘಟನೆ ರಾಮಮೂರ್ತಿನಗರ ಠಾಣೆ ವ್ಯಾಪ್ತಿಯ ಬಾಣಸವಾಡಿ ಮುಖ್ಯರಸ್ತೆಯಲ್ಲಿ ಬುಧವಾರ ಸಂಜೆ ನಡೆದಿದೆ.
ಬಾಣಸವಾಡಿ ನಿವಾಸಿ ಮದನ್(32) ಕೊಲೆಯಾದವ. ಕೃತ್ಯ ಎಸಗಿದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
ತಮಿಳುನಾಡಿನ ಚೆನ್ನೈ ಮೂಲದ ಮದನ್, ಈ ಮೊದಲು ಬೆಂಗಳೂರಿನಲ್ಲಿಯೇ ವಾಸವಾಗಿದ್ದ. ನಾಲ್ಕು ವರ್ಷ ಹಿಂದೆ ಚೆನ್ನೈಗೆ ಹೋಗಿ, ಚಾಲಕನಾಗಿ ಕೆಲಸ ಮಾಡುತ್ತಿದ್ದ. ತಿಂಗಳ ಹಿಂದಷ್ಟೇ ಬೆಂಗಳೂರಿಗೆ ಬಂದಿದ್ದು, ಸದ್ಯ ಯಾವುದೇ ಕೆಲಸಕ್ಕೆ ಹೋಗುತ್ತಿರಲಿಲ್ಲ ಎಂಬುದು ಗೊತ್ತಾಗಿದೆ. ಮದನ್ ಇತ್ತೀಚೆಗೆ ಹೃತ್ವಿಕ್ ಎಂಬಾತನ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿದ್ದ ಎಂದು ಹೇಳಲಾಗಿದೆ. ಅದೇ ದ್ವೇಷಕ್ಕೆ ಹತ್ಯೆ ನಡೆದಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಕಟಿಂಗ್ ಶಾಪ್‌ಗೆ ಹೋಗುವಾಗ ಹತ್ಯೆ: ಬುಧವಾರ ಸಂಜೆ 6 ಗಂಟೆಗೆ ಮದನ್ ಬಾಣಸವಾಡಿ ಮುಖ್ಯರಸ್ತೆಯಲ್ಲಿರುವ ಕಟಿಂಗ್ ಶಾಪ್‌ಗೆ ಹೋಗುತ್ತಿದ್ದ. ಅದೇ ವೇಳೆ ನಾಲ್ಕೈದು ಮಂದಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮದನ್ ಮೇಲೆ ದಾಳಿ ನಡೆಸಿ, ಮನಬಂದಂತೆ ಹಲ್ಲೆ ನಡೆಸಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಆತನನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ರಾಮಮೂರ್ತಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.