ಬೆಂಗಳೂರು:ಗಣೇಶ ಪ್ರತಿಷ್ಠಾಪನೆ; ನೆಲಬಾಡಿಗೆ ವಿನಾಯ್ತಿ
Team Udayavani, Aug 15, 2018, 12:12 PM IST
ಬೆಂಗಳೂರು: ನಗರದಲ್ಲಿ ಗಣೇಶ ಮೂರ್ತಿ ಪ್ರತಿ ಷ್ಠಾಪನೆಗೆ ಅನುಮತಿ ಪಡೆ ಯಲು ಅಲೆ ಯಬೇಕಿಲ್ಲ. ಆಯಾ ವಲಯಗಳ ಜಂಟಿ ಆಯುಕ್ತರ ಕಚೇರಿಯಲ್ಲೇ ಪಡೆಯ ಬಹುದು. ಜತೆಗೆ, ಪ್ರತಿಷ್ಠಾಪನೆಗೆ ವಿಧಿಸಲಾಗುವ ನೆಲ ಬಾಡಿಗೆಯಿಂದಲೂ ವಿನಾಯ್ತಿ ನೀಡಲಾಗಿದೆ.
ಮಂಗಳವಾರ ಬಿಬಿಎಂಪಿ ಸಭೆಯಲ್ಲಿ ಈ ಸಂಬಂಧ ನಿರ್ಣಯ ಕೈಗೊಳ್ಳಲಾಯಿತು. ನಗರದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಪಾಲಿಕೆ, ತಾತ್ಕಾಲಿಕ ವಿದ್ಯುತ್ ಸಂಪರ್ಕಕ್ಕಾಗಿ ಬೆಸ್ಕಾಂ ಕಚೇರಿ ಮತ್ತು ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಾಯ. ಇದಕ್ಕಾಗಿ ಮೂರೂ ಕಚೇರಿಗಳಿಗೆ ಅಲೆದಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಏಕಗವಾಕ್ಷಿ ಪದ್ಧತಿ ಅಡಿ ಒಂದೇ ಕಡೆ (ಆಯಾ ಜಂಟಿ ಆಯುಕ್ತರ ಕಚೇರಿ) ಅನುಮತಿ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ಮೇಯರ್ ಸಂಪತರಾಜ್ ತಿಳಿಸಿದರು.
ಅಷ್ಟೇ ಅಲ್ಲ, ಗಣೇಶನ ಪ್ರತಿಷ್ಠಾಪನೆಗೆ ಪ್ರತಿ ಚದರ ಮೀಟರ್‌ಗೆ 1 ರೂ. ನೆಲ ಬಾಡಿಗೆ ಪಡೆಯಲಾಗುತ್ತಿತ್ತು. ಇನ್ಮುಂದೆ ಇದನ್ನೂ ರದ್ದುಪಡಿಸಲಾಗಿದೆ ಎಂದರು. ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಪದ್ಮನಾಭ ರೆಡ್ಡಿ, ಗಣೇಶನ ಪ್ರತಿಷ್ಠಾಪನೆಗೆ ವಿಧಿಸಲಾಗುವ ಶುಲ್ಕ ರದ್ದುಪಡಿಸಬೇಕು. ಏಕಗವಾಕ್ಷಿ ಪದ್ಧತಿ ಜಾರಿಗೊಳಿಸಬೇಕು ಎಂದು ತಿಳಿಸಿದರು.
ಶಾಸಕ ಮುನಿರತ್ನ ಮಾತನಾಡಿ, ಪರಿಸರ ಸ್ನೇಹಿ ಗಣಪತಿ ಪ್ರತಿಷ್ಠಾಪಿಸುವವರಿಗೆ ಮಾತ್ರ ಅನುಮತಿ ನೀಡಬೇಕು. ಈ ನಿಯಮ ಉಲ್ಲಂ ಸುವವರ ವಿರುದ್ಧ ಕೇಸು ದಾಖಲಿಸ ಬೇಕು ಎಂದರು. ಇದಕ್ಕೆ ಆಕ್ಷೇಪಿಸಿದ ಪದ್ಮನಾಭ ರೆಡ್ಡಿ, ಮನೆಯಲ್ಲಿ ಪಿಒಪಿ ಗಣೇಶ ಪ್ರತಿಷ್ಠಾಪಿಸಿದರೆ ಕೇಸು ಹಾಕಲು ಸಾಧ್ಯವೇ? ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.