ಬೆಂಗಳೂರು: ಹಾಡಹಗಲೇ ಕೈ ನಾಯಕ, APMC ಅಧ್ಯಕ್ಷನ ಮೇಲೆ Firing
Team Udayavani, Feb 3, 2017, 1:06 PM IST
ಬೆಂಗಳೂರು: ಯಲಹಂಕದ ಕೋಗಿಲು ಕ್ರಾಸ್ ಸಿಗ್ನಲ್ ಬಳಿ ಶುಕ್ರವಾರ ಹಾಡಹಗಲೇ ಎಪಿಎಂಸಿ ಅಧಕ್ಷ ಶ್ರೀನಿವಾಸ್ ಕಡಬಗೆರೆ ಮೇಲೆ ಗುಂಡಿನ ದಾಳಿ ನಡೆದಿದೆ.
ಸರ್ಕಾರಿ ಕಾರಿನಲ್ಲಿದ್ದ ಶ್ರೀನಿವಾಸ್ ಅವರ ಮೇಲೆ ಪಲ್ಸರ್ ಬೈಕ್‌ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ.ಈ ವೇಳೆ ಶ್ರೀನಿವಾಸ್ ಗನ್‌ಮ್ಯಾನ್ ಕೂಡ ಪ್ರತಿ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ.
ಗಂಭೀರವಾಗಿ ಗಾಯಗೊಂಡಿರುವ ಶ್ರೀನಿವಾಸ್ ಮತ್ತು ಚಾಲಕನನ್ನು ಹೆಬ್ಬಾಳದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶ್ರೀನಿವಾಸ್ ಬೆನ್ನಿಗೆ ಗುಂಡು ಹೊಕ್ಕಿರುವುದಾಗಿ ತಿಳಿದು ಬಂದಿದೆ.ಮುಂಜಾಗೃತಾ ಕ್ರಮವಾಗಿ ಆಸ್ಪತ್ರೆಯ ಎದುರು 2 ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.
ಯಲಹಂಕ ಪೊಲೀಸರು,ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು ಸ್ಥಳದಲ್ಲಿ ನಾಲ್ಕು ಗುಂಡುಗಳು ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.
ರೌಡಿಶೀಟರ್ ಪಾಯ್ಸನ್ ರಾಮನ ಸ್ವಂತ ಅಣ್ಣನಾಗಿದ್ದ ಶ್ರೀನಿವಾಸ್ ಅಲಿಯಾಸ್ ಡಾಬಾ ಸೀನಾ ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿ ಎಪಿಎಂಸಿ ಸದಸ್ಯರಾಗಿ ಆಯ್ಕೆಯಾಗಿದ್ದರು. ನೆಲಮಂಗಲದ ದಾಸನಪುರದ ಎಪಿಎಂಸಿ ಅಧ್ಯಕ್ಷರಾಗಿದ್ದರು. ಈ ಹಿಂದೆ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
Bengaluru: ಮಾದಾವರ ವಿಸ್ತರಿತ ಮೆಟ್ರೊದಲ್ಲಿ ಮೊದಲ ದಿನ 16000 ಜನ ಪ್ರಯಾಣ
Bengaluru: ಅಪರಾಧ, ರೌಡಿಸಂ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಿ: ಡಿಜಿಪಿ ಸೂಚನೆ
MUST WATCH
ಹೊಸ ಸೇರ್ಪಡೆ
Mangalore: ಪ್ರಯಾಣಿಕರಿಗಾಗಿ ಸಿಗ್ನಲ್‌ಗಳಲ್ಲೇ ಬಸ್ ನಿಲುಗಡೆ; ಅನಾಹುತಕ್ಕೆ ಎಡೆ
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.