ಬೆಂಗಳೂರು ಸ್ವರ್ಗ; ಆದರೆ ನೀರಿನ ಬಳಕೆ ಮಾತ್ರ ಅಸಮರ್ಪಕ
Team Udayavani, Aug 10, 2017, 12:22 PM IST
ಬೆಂಗಳೂರು: ರಾಜಧಾನಿ ಬೆಂಗಳೂರು ಸ್ವರ್ಗದ ಹಿರಿಯಣ್ಣ ಎಂದು ಜಲ ತಜ್ಞ ರಾಜೇಂದ್ರಸಿಂಗ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸಾಕಷ್ಟು ನೀರಿನ ಲಭ್ಯತೆ ಇದೆ. ಆದರೆ, ಸರಿಯಾದ ಹಾಗೂ ವ್ಯವಸ್ಥಿತ ಬಳಕೆಯಾಗುತ್ತಿಲ್ಲ. ಸ್ಥಳೀಯ ಕೆರೆಗಳನ್ನು ಸದುಪ ಯೋಗಪಡೆಸಿಕೊಳ್ಳದೆ ಹಾಳು ಮಾಡಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ನೀರಿನ ಮರು ಬಳಕೆಗೆ
ಹೆಚ್ಚಿನ ಆದ್ಯತೆ ನೀಡದೆ ಕಾವೇರಿ ಕಣಿವೆಯಿಂದ ನೀರು ತರುವ ಪ್ರಯತ್ನ ಮಾಡಲಾಗುತ್ತಿದೆ. ಜಲಮೂಲ ಸಂರಕ್ಷಿಸಿ ನೀರಿನ
ಮರುಬಳಕೆಗೆ ಹೆಚ್ಚು ಒತ್ತು ನೀಡಬೇಕು ಎಂದರು. ಆಡಳಿತ ನಡೆಸುವವರು ಇರುವ ನೀರಿನ ಬಳಕೆಯಲ್ಲಿ ಶಿಸ್ತು ತರಬೇಕು. ನಗರದ ಅನೇಕ ಕೆರೆಗಳು ಕಲುಷಿತಗೊಂಡು ಮಾಲಿನ್ಯಕ್ಕೆ ಕಾರಣವಾಗಿವೆ. ಅವುಗಳ ಪುನಶ್ಚೇತನಕ್ಕೆ ಆದ್ಯತೆ ನೀಡಬೇಕು. ಆದರೆ, ರಾಜಕೀಯ ನಾಯಕರು ನೀರಿನ ವ್ಯವಸ್ಥಿತ ಬಳಕೆಗೆ ಆದ್ಯತೆ ನೀಡುತ್ತಿಲ್ಲ. ಹೀಗಾಗಿ ನೀರಿನ ಬರ ಕಾಡುತ್ತಿದೆ ಎಂದು ಹೇಳಿದರು. ರಾಜ್ಯದಲ್ಲಿ ಹಸಿರು ವಲಯ ಕಡಿಮೆಯಾಗಿ ತಾಪಮಾನ ಪ್ರಮಾಣ ಹೆಚ್ಚಾಗಿರುವುದು ಹವಾಮಾನ ವೈಪರಿತ್ಯಕ್ಕೆ ಕಾರಣವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.