ಮಾರ್ಚ್ 24 ರಿಂದ 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ


Team Udayavani, Feb 19, 2021, 7:42 PM IST

cinema

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ  ಇಂದು ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆ ಜರುಗಿತು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಸಂಘಟಿಸುತ್ತಿರುವ 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು 2021ರ ಮಾರ್ಚ್ 24 ರಿಂದ 31 ರವರೆಗೆ ಬೆಂಗಳೂರಿನಲ್ಲಿ ನಡೆಸಲು ಸಭೆಯಲ್ಲಿ  ನಿರ್ಧರಿಸಲಾಯಿತು. ಈ ಬಾರಿ “ಭಾರತೀಯ ಪ್ರದರ್ಶನ ಕಲೆಗಳ ಮಹತ್ವ” ವಿಷಯದ ಮೇಲೆ ಚಿತ್ರೋತ್ಸವವನ್ನು ಏರ್ಪಡಿಸಲು ನಿರ್ಣಯಿಸಲಾಯಿತು.

ಭಾರತದ ಪ್ರತಿಷ್ಠಿತ ಚಿತ್ರೋತ್ಸವವಾಗಿ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಬೆಳೆದು ಬಂದಿದ್ದು, ಈಗಾಗಲೇ ದೇಶ-ವಿದೇಶಗಳಲ್ಲಿ ಪ್ರಸಿದ್ದಿ ಪಡೆದಿದೆ. ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಅಂತಾರಾಷ್ಟ್ರೀಯ FIAPF ಮಾನ್ಯತೆ ದೊರೆಯುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದ್ದು ಇದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಕೋವಿಡ್ ನಿಯಮಾವಳಿಗಳು ಮತ್ತು ಮಾರ್ಗಸೂಚಿಗಳಿಗನುಸಾರವಾಗಿ ಈ ಚಿತ್ರೋತ್ಸವ ನಡೆಯಬೇಕೆಂದು ಅವರು ಸೂಚಿಸಿದರು.

ಇದನ್ನೂ ಓದಿ:  ಬಿಜೆಪಿಯವರು ಕೂಲಿ ಕಾರ್ಮಿಕರ ವಿರೋಧಿಗಳು: 2 ವರ್ಷದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ: ಸಿದ್ದು

ಬೆಂಗಳೂರಿನ ರಾಜಾಜಿನಗರದಲ್ಲಿರುವ ಒರಾಯನ್ ಮಾಲ್‍ನ ಪಿವಿಆರ್ ಚಿತ್ರಮಂದಿರದ 11 ಪರದೆಗಳಲ್ಲಿ ಒಟ್ಟಾರೆ 50ಕ್ಕೂ ಹೆಚ್ಚು ದೇಶಗಳ ಸುಮಾರು 200 ಅತ್ಯುತ್ತಮ ಚಿತ್ರಗಳನ್ನು ಪ್ರದರ್ಶಿಸಲಾಗುವುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವ ಸಿ.ಸಿ.ಪಾಟೀಲ್ ತಿಳಿಸಿದರು.

ಬೆಂಗಳೂರು ನಗರದಲ್ಲಿ ಏಳು ದಿನಗಳ ಕಾಲ ನಡೆಯುವ ಚಲನಚಿತ್ರೋತ್ಸವದಲ್ಲಿ ಏಷಿಯನ್ ಸಿನಿಮಾ, ಚಿತ್ರಭಾರತಿ (ಭಾರತೀಯ ಸಿನಿಮಾ) ಹಾಗೂ ಕನ್ನಡ ಸಿನಿಮಾಗಳ ಸ್ಪರ್ಧಾ ವಿಭಾಗವಿರುತ್ತದೆ. ಅಲ್ಲದೆ, ವಿಶ್ವಸಿನಿಮಾ, ಸಿಂಹಾವಲೋಕನ, ಗ್ರ್ಯಾಂಡ್ ಕ್ಲಾಸಿಕ್, ಕೆಲವು ದೇಶಗಳ ವಿಶೇಷ ಸಿನಿಮಾ, ಅಗಲಿದ ವಿಶ್ವದ, ಭಾರತದ ಮತ್ತು ಕನ್ನಡ ಚಿತ್ರರಂಗದ ಗಣ್ಯರ ಸಂಸ್ಮರಣೆ, ಚಲನಚಿತ್ರ ವಿಮರ್ಶಕರ ಅಂತಾರಾಷ್ಟ್ರೀಯ ಒಕ್ಕೂಟದ ಪ್ರಶಸ್ತಿ ವಿಭಾಗ, ನೆಟ್‍ಪ್ಯಾಕ್, ಜೀವನಚರಿತ್ರೆ ಆಧರಿಸಿದ ಚಿತ್ರಗಳ ವಿಭಾಗಗಳು ವಿವಿಧ ದೃಷ್ಟಿಕೋನವನ್ನು ಬಿಂಬಿಸಲಿವೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನೀಲ್ ಪುರಾಣಿಕ್ ವಿವರಿಸಿದರು.

ಚಿತ್ರೋತ್ಸವದಲ್ಲಿ ಅತ್ಯುತ್ತಮ ಸಿನಿಮಾಗಳ ಪ್ರದರ್ಶನದ ಜೊತೆಗೆ ಚಲನಚಿತ್ರರಂಗದ ನುರಿತ             ದೇಶ-ವಿದೇಶಗಳ ನಿರ್ದೇಶಕರು, ಕಲಾವಿದರು, ತಂತ್ರಜ್ಞರೊಂದಿಗಿನ ಸಂವಾದ, ವಿಚಾರ ಸಂಕಿರಣ, ಚಿತ್ರಕಥೆ ರಚನೆ ಕಾರ್ಯಾಗಾರ, ಮಾಸ್ಟರ್‍ಕ್ಲಾಸ್ ಮೊದಲಾದ ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು,  ಚಿತ್ರೋದ್ಯಮಿಗಳಿಗೆ, ವಿದ್ಯಾರ್ಥಿಗಳಿಗೆ ಮತ್ತು ಸಿನಿಮಾಸಕ್ತರಿಗೆ ಅನುಕೂಲವಾಗಲಿದೆ . ಕನ್ನಡ ಸಿನಿಮಾಗಳ ಸೃಜನಶೀಲ ಮುಖಗಳನ್ನು ವಿಶ್ವದ ನಾನಾ ದೇಶಗಳಿಗೆ ಪರಿಚಯಿಸುವ ಕೆಲಸವೂ ಈ ಮೂಲಕ ನಡೆಯುತ್ತಿದೆ ಎಂದರು.

ಇದೇ ಸಂದರ್ಭದಲ್ಲಿ  ಮುಖ್ಯಮಂತ್ರಿಗಳು ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ 13ನೇ ಆವೃತ್ತಿಯ ಲಾಂಛನವನ್ನು ಬಿಡುಗಡೆ ಮಾಡಿದರು.

ಇದನ್ನೂ ಓದಿ: ಕೋಟ ಶ್ರೀನಿವಾಸ ಪೂಜಾರಿ ಕಾರಿಗೆ KSRTC ಬಸ್ ಢಿಕ್ಕಿ: ಅಪಾಯದಿಂದ ಪಾರಾದ ಸಚಿವರು

ಸಭೆಯಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ.ಆರ್.ಜೈರಾಜ್, ಹಿರಿಯ ಕಲಾವಿದರಾದ ಶೃತಿ, ತಾರಾ ಅನುರಾಧ , ಚಲನಚಿತ್ರ ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿ ಅಜುಂ ಪರ್ವೇಜ್, ಆಯುಕ್ತ ಪಿ.ಎಸ್.ಹರ್ಷ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Six Naxalites to be brought into the mainstream soon: Process is fast

Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

2

Kundapura: ಬಟ್ಟೆ ವ್ಯಾಪಾರಿ ನಾಪತ್ತೆ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.