ಬೆಂಗಳೂರು ಅತ್ಯಂತ ಸುರಕ್ಷಿತ ನಗರ: ಛೆಟ್ರಿ
Team Udayavani, Jan 6, 2017, 12:13 PM IST
ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ಅತ್ಯಂತ ಸುರಕ್ಷಿತ ಪ್ರದೇಶ. ಅಷ್ಟೇ ಅಲ್ಲ, ನಾನು ಅತ್ಯಂತ ಪ್ರೀತಿಸುವ ನಗರ. ಹೀಗಾಗಿ ಇಲ್ಲೇ ಮನೆ ಮಾಡಿ ನನ್ನ ಕುಟುಂಬದವರನ್ನು ಕರೆಸಿಕೊಳ್ಳಬೇಕೆಂದಿದ್ದೇನೆ..!
ನಗರದಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಹೆಚ್ಚುತ್ತಿದ್ದು, ಹೆಣ್ಣು ಮಕ್ಕಳಿಗೆ ಬೆಂಗಳೂರು ಸುರಕ್ಷಿತವಲ್ಲ ಎಂಬ ಆರೋಪ ಕೇಳಿಬರುತ್ತಿರುವ ಮಧ್ಯೆ ಭಾರತೀಯ ಫುಟ್ಬಾಲ್ ತಂಡದ ನಾಯಕರೂ ಆಗಿರುವ “ಬೆಂಗಳೂರು ಎಫ್ಸಿ’ ತಂಡದ ನಾಯಕ ಸುನೀಲ್ ಛೆಟ್ರಿ ಆಡಿದ ಮಾತುಗಳಿವು.
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಹೆಣ್ಣು ಮಕ್ಕಳ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಕುರಿತಂತೆ ಸುದ್ದಿಗಾರರು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಪ್ರಶ್ನಿಸಿದಾಗ ಅಲ್ಲೇ ಉಪಸ್ಥಿತರಿದ್ದ ಸುನೀಲ್ ಛೆಟ್ರಿ, ಮಧ್ಯಪ್ರವೇಶಕ್ಕೆ ಕ್ಷಮೆ ಇರಲಿ ಎಂದು ಹೇಳುತ್ತಾ ಬೆಂಗಳೂರನ್ನು ಹಾಡಿ ಹೊಗಳಿದರು.
ನಾನು ಬೆಂಗಳೂರನ್ನು ಪ್ರೀತಿಸುತ್ತೇನೆ ಎಂದು ಕನ್ನಡದಲ್ಲಿ ಹೇಳಿ ನಂತರ “ಐ ಲವ್ ಬೆಂಗಳೂರು. ಅದಕ್ಕಾಗಿ ಬೆಂಗಳೂರಿನಲ್ಲಿ ಮನೆ ಮಾಡಿ ಕುಟುಂಬದವರನ್ನು ಕರೆಸಿಕೊಳ್ಳಬೇಕಿದ್ದೇನೆ’ ಎಂದು ಆಂಗ್ಲ ಭಾಷೆಯಲ್ಲಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.