ಬೆಂಗಳೂರಿಗೆ ಕರೆತಂದು ಕೆಲಸ ಕೊಡಿಸಿದ ಸಂಬಂಧಿಯನ್ನೇ ಕೊಂದ ವ್ಯಕ್ತಿ


Team Udayavani, Mar 13, 2017, 12:05 PM IST

arrrest-murder.jpg

ಬೆಂಗಳೂರು: ನೇಪಾಳದಿಂದ ಕರೆತಂದು ಬೆಂಗಳೂರಿನಲ್ಲಿ ಕೆಲಸ ಕೊಡಿಸಿದ ವ್ಯಕ್ತಿಯೊಬ್ಬನನ್ನು ಆತನ ಸೋದರ ಸಂಬಂಧಿಯೇ ಮದ್ಯದ ಅಮಲಿನಲ್ಲಿ ಇರಿದು ಕೊಂದಿರುವ ಘಟನೆ ಬಾಗಲೂರಿನ ಕಣ್ಣೂರು ಎಂಬಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ವಿನೋದ್‌ (31) ಕೊಲೆಯಾದ ವ್ಯಕ್ತಿ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಬಾಗಲೂರು ಠಾಣೆ ಪೊಲೀಸರು, ಆರೋಪಿ ಹೇಮ್‌ರಾಜ್‌ ಎಂಬಾತನನ್ನು ಬಂಧಿಸಿದ್ದಾರೆ.

ನೇಪಾಳ ಮೂಲದ ವಿನೋದ್‌ ಕಳೆದ ಹಲವು ವರ್ಷಗಳಿಂದ ಬಾಗಲೂರು ಬಳಿಯ ಕಣ್ಣೂರಿನ ಹಾರಿಜಾನ್‌ ನೋಟ್‌ಬುಕ್‌ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ. ಆತನ ಪತ್ನಿ ಮತ್ತು ಮಗು ನೇಪಾಳದಲ್ಲೇ ನೆಲೆಸಿದ್ದಾರೆ. ಇತ್ತೀಚೆಗೆ ನೇಪಾಳಕ್ಕೆ ತೆರಳಿದ್ದ ವಿನೋದ್‌ ಒಂದು ವಾರದ ಹಿಂದಷ್ಟೇ ತನ್ನ ಚಿಕ್ಕಪ್ಪನ ಮಗ ಹೇಮರಾಜ್‌ ಮತ್ತು ಆತನ ಇಬ್ಬರು ಸ್ನೇಹಿತರನ್ನು ಬೆಂಗಳೂರಿಗೆ ಕರೆತಂದು ಕೆಲಸ ಕೊಡಿಸಿದ್ದ. ನಾಲ್ವರೂ ಒಂದೇ ಕೊಠಡಿಯಲ್ಲೇ ವಾಸವಿದ್ದರು.  

ಮದ್ಯದ ಪಾರ್ಟಿಯಲ್ಲಿ ಅನಾಹುತ: ಶನಿವಾರ ರಾತ್ರಿ ನಾಲ್ವರೂ ಸೇರಿ ಮದ್ಯ ಸೇವಿಸಿದ್ದಾರೆ. ಮದ್ಯದ ಅಮಲಿನಲ್ಲಿ ಹೇಮರಾಜ್‌ ಜೋರಾಗಿ ಕೂಗಲಾರಂಭಿಸಿದ್ದ. ಈ ಸಂದರ್ಭದಲ್ಲಿ ಆಕ್ಷೇಪ ವ್ಯಕ್ತಪಡಿಸಿದ ವಿನೋದ್‌, ಗಲಾಟೆ ಮಾಡಿದರೆ ಮಾಲೀಕರು ಮನೆ  ಖಾಲಿ ಮಾಡಿಸುತ್ತಾರೆ. ಆದ್ದರಿಂದ ಸುಮ್ಮನಿರುವಂತೆ ಹೇಮರಾಜ್‌ನಿಗೆ ತಿಳಿಸಿದ್ದ. ಆದರೆ, ಹೇಮರಾಜ್‌ ಗಲಾಟೆ ಮುಂದುವರಿಸಿದ್ದರಿಂದ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದು ಪರಸ್ಪರ ಕೈ ಮಿಲಾಯಿಸಿಕೊಂಡಿದ್ದಾರೆ.  

ವಿನೋದ್‌ ತನ್ನನ್ನು ಥಳಿಸಿದಾಗ ತಪ್ಪಿಸಿಕೊಳ್ಳಲು ಹೇಮರಾಜ್‌ ಅಡುಗೆ ಕೋಣೆಗೆ ತೆರಳಿದ್ದ. ಆದರೆ, ಅಲ್ಲಿಗೂ ನುಗ್ಗಿದ ವಿನೋದ್‌ ಮತ್ತೆ ಹಲ್ಲೆಗೆ ಮುಂದಾದಾಗ ಪಕ್ಕದಲ್ಲೇ ಇದ್ದ ಚಾಕು ತೆಗೆದುಕೊಂಡ ಹೇಮರಾಜ್‌, ವಿನೋದ್‌ನ ಹೊಟ್ಟೆಗೆ ಇರಿದಿದ್ದಾನೆ. ಇದರಿಂದ ರಕ್ತಸ್ರಾವವಾಗಿ ಕುಸಿದು ಬಿದ್ದ ವಿನೋದ್‌ನನ್ನು ಇಬ್ಬರು ಸ್ನೇಹಿತರು ಆಸ್ಪತ್ರೆಗೆ ಸಾಗಿಸಿದರಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಚಾಕು ಇರಿತದಿಂದ ವಿನೋದ್‌ ಹೊಟ್ಟೆಯಭಾಗದಲ್ಲಿ ಎರಡು ಇಂಚು ಗಾಯವಾಗಿದೆ.

ದೈಹಿಕವಾಗಿ ಸಧೃಡವಾಗಿರದ ವಿನೋದ್‌ ಚಾಕು ಇರಿತದ ನಂತರ ಹೃದಯಾಘಾತದಿಂದ ಮೃತಟ್ಟಿರುವ ಸಾಧ್ಯತೆಯಿದೆ. ಸದ್ಯ ಮೃತದೇಹವನ್ನು ಅಂಬೇಡ್ಕರ್‌ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಆತನ ಪೋಷಕರಿಗೆ ಮಾಹಿತಿ ನೀಡಲಾಗಿದೆ, ಅವರು ಆಗಮಿಸಿದ ನಂತರ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ತನ್ನಿಂದ ಇರಿತಕ್ಕೊಳಗಾದ ವಿನೋದ್‌ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಹೇಮರಾಜ್‌ ಪರಾರಿಯಾಗಲು ಯತ್ನಿಸಿದ್ದು, ಮಾಹಿತಿ ತಿಳಿದ ಪೊಲೀಸರು ಆತನನ್ನು ಬೆನ್ನಟ್ಟಿ ಸೆರೆ ಹಿಡಿದಿದ್ದಾರೆ. 

ಟಾಪ್ ನ್ಯೂಸ್

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.