ರಾಜ್ಯದ ಹಲವೆಡೆ ತಂಪೆರೆದ ಮಳೆ
Team Udayavani, Mar 31, 2018, 6:00 AM IST
ಬೆಂಗಳೂರು: ರಾಜಧಾನಿ ಬೆಂಗಳೂರು, ಕೋಲಾರ, ಮುಳಬಾಗಿಲು,ಮಾಲೂರು, ಹಾಸನ, ಮಂಗಳೂರು, ಉಡುಪಿ ಸೇರಿ ರಾಜ್ಯದ ಕೆಲವೆಡೆ ಶುಕ್ರವಾರ ಭಾರಿ ಮಳೆಯಾಗಿದೆ.
ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಶುಕ್ರವಾರ ಸಂಜೆ ಶುರುವಾದ ಮಳೆಯಿಂದಾಗಿ ಸುಮಾರು 20ಕ್ಕೂ ಹೆಚ್ಚು ಮರ ನೆಲಕ್ಕು ರುಳಿವೆ. ಅಲ್ಲದೆ, ಹಲವಾರು ಮನೆಗಳಿಗೆ ನೀರು ನುಗ್ಗಿ ಸಾರ್ವಜನಿಕರು ಸಂಕಷ್ಟ ಅನುಭವಿಸುವಂತಾಯಿತು.
ಗಾಳಿ ಸಹಿತ ಮಳೆಗೆ ಶಂಕರಮಠ, ಮಲ್ಲೇಶ್ವರ, ಗೊರಗುಂಟೆ ಪಾಳ್ಯ, ಬಿಎಂಶ್ರೀ ಮುಖ್ಯರಸ್ತೆ, ಹಳೆ ವಿಮಾನ ನಿಲ್ದಾಣ ರಸ್ತೆ, ಯಶವಂತಪುರ, ಬಾಣಸವಾಡಿ, ಮಡಿವಾಳ, ಸಂಜಯ್‌ನಗರ, ನಾಗರಬಾವಿ, ಬನಶಂಕರಿ 2ನೇ ಹಂತ ಸೇರಿದಂತೆ ಹಲವಾರು ಕಡೆಗಳಲ್ಲಿ ಬೃಹದಾಕಾರದ ಮರಗಳು ಧರೆಗುರುಳಿದ ಪರಿಣಾಮ ತೀವ್ರ ಸಂಚಾರ ದಟ್ಟಣೆ ವಾಹನ ಸವಾರರು ತೊಂದರೆಗೊಳಗಾದರು.
ಪಾಲಿಕೆಯ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ತೆರಳಿ ಬಿದ್ದ ಮರಗಳನ್ನು ತೆರವುಗೊಳಿಸಿದರು. ಕೆಲವು ಭಾಗಗಳಲ್ಲಿ ಮರದ ಕೊಂಬೆಗಳು ವಿದ್ಯುತ್ ತಂತಿಯ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಕಂಬಗಳು ಸಹ ಉರುಳಿದ್ದು, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿತ್ತು. ಆದರೆ, ಯಾವುದೇ ರೀತಿಯ ಜೀವ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದ.ಕ.ದ ವೈಭವಿ, ಉಡುಪಿಯ ಧೀರಜ್ ಐತಾಳ್ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ
D.K. Shivakumar: ಬೆಳಗಾವಿ ಕಾಂಗ್ರೆಸ್ ಅಧಿವೇಶನ ಬಗ್ಗೆ ಚರ್ಚೆ
KEA: ಎಂಎಸ್ಸಿ ನರ್ಸಿಂಗ್: ಅರ್ಜಿ ಸಲ್ಲಿಕೆಗೆ ಡಿ. 2 ಕೊನೆ ದಿನ
Karnataka: ಪಠ್ಯಪುಸ್ತಕಕ್ಕೆ ಬೇಡಿಕೆ ಸಲ್ಲಿಸಲು ಡಿ. 9 ಕಡೇ ದಿನ
ಸಾಹಿತ್ಯ ಸಮ್ಮೇಳನನ ಖರ್ಚು ಕಡಿತಗೊಳಿಸಿ ಹಂಪಿ ಕನ್ನಡ ವಿ.ವಿ.ಗೆ ನೆರವು: ಜೋಶಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.