Bangalore: ಮಾಲ್ನಲ್ಲಿ ಮಹಿಳೆ ಜತೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿ: ವಿಡಿಯೋ ವೈರಲ್
Team Udayavani, Oct 31, 2023, 10:56 AM IST
ಬೆಂಗಳೂರು: ನಗರದ ಪ್ರತಿಷ್ಠಿತ ಮಾಲ್ವೊಂದರಲ್ಲಿ ವ್ಯಕ್ತಿಯೊಬ್ಬ ಮಹಿಳೆಯರನ್ನು ಆಕ್ಷೇಪಾರ್ಹ ರೀತಿಯಲ್ಲಿ ಖಾಸಗಿ ಭಾಗ ಸ್ಪರ್ಶಿಸಿ ವಿಕೃತಿ ಮೆರೆದಿದ್ದು, ವಿಡಿಯೋ ವೈರಲ್ ಆಗಿದೆ. ಬೆಂಗಳೂರಿನ ಪ್ರತಿಷ್ಠಿತ ಮಾಲ್ವೊಂದರಲ್ಲಿ ಭಾನುವಾರ ಸಂಜೆ 6.30ಕ್ಕೆ ಜನ ಜಂಗುಳಿ ನಡುವೆ ವ್ಯಕ್ತಿಯೊಬ್ಬ ಮಹಿಳೆಯರು, ಯುವತಿಯರನ್ನು ಸ್ಪರ್ಶಿಸಿ ವಿಕೃತವಾಗಿ ವರ್ತಿ ಸುತ್ತಿದ್ದ. ಇದನ್ನು ಗಮನಿಸಿದ ಮಾಲ್ಗೆ ಬಂದಿದ್ದ ಮತ್ತೋರ್ವ ವ್ಯಕ್ತಿಯು ಮೊಬೈಲ್ನಲ್ಲಿ ಆತನ ವಿಕೃತಿ ಸೆರೆ ಹಿಡಿದಿದ್ದಾನೆ. ಆತನನ್ನು ಹಿಂಬಾಲಿಸಿಕೊಂಡು ಹೋಗಿ ಪರಿಶೀಲಿಸಿದಾಗ ಆರೋಪಿಯು ನಿರಂತರ ಕಿರುಕುಳ ನೀಡುತ್ತಾ ಓಡಾಡುತ್ತಿ ರುವುದು ಪತ್ತೆಯಾಗಿದೆ.
ಆರೋಪಿಯ ಅಸಭ್ಯ ವರ್ತನೆಯನ್ನು ವಿಡಿಯೋ ಚಿತ್ರೀಕರಣ ಮಾಡಿಕೊಂಡ ಯುವಕ ಮಾಲ್ ಭದ್ರತಾ ಸಿಬ್ಬಂದಿ ಗಮನಕ್ಕೂ ತಂದಿದ್ದ. ಮಾಲ್ ಸಿಬ್ಬಂದಿ ಆರೋಪಿಗೆ ಹುಡುಕಾಟ ನಡೆಸಿದಾಗ ಆತ ಕಣ್ತಪ್ಪಿಸಿ ಪರಾರಿಯಾಗಿದ್ದಾನೆ. ಇದುವರೆಗೆ ಯಾರೂ ಲಿಖಿತ ದೂರು ಕೊಡಲಿಲ್ಲ. ಆರೋಪಿಯ ಕೃತ್ಯದ ಬಗ್ಗೆ ವಿಡಿಯೋ ಚಿತ್ರೀಕರಿಸಿ ಕೊಂಡಿದ್ದ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ ಈ ಸಂಗತಿ ಹಂಚಿಕೊಂಡಿದ್ದು, ಮಾಗಡಿ ರಸ್ತೆ ಠಾಣಾ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.