ಸುಧೀರ್ ಘಾಟೆ ಅವರ ನಿಧನಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ ಸಂತಾಪ
Team Udayavani, Oct 22, 2021, 7:01 PM IST
ಬೆಂಗಳೂರು: ಮಂಗಳೂರು ಜಾಹೀರಾತು ಸಂಸ್ಥೆ ಮ್ಯಾಗನಮ್ ಇಂಟರ್ ಗ್ರಾಫಿಕ್ಸ್ ನ ಮಾಲಕರಾಗಿದ್ದ ಸುಧೀರ್ ಘಾಟೆ ಅವರ ನಿಧನಕ್ಕೆ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ, ಸಭಾದ್ಯಕ್ಷರು, ಕರ್ನಾಟಕ ವಿಧಾನಸಭೆ, ತಮ್ಮ ಸಂತಾಪವನ್ನು ತಿಳಿಸಿರುತ್ತಾರೆ.
ಆರ್.ಎಸ್.ಎಸ್ ಲೆಕ್ಕ ಪರಿಶೋಧಕರ ಕಚೇರಿಯಲ್ಲಿ ವೃತ್ತಿ ಜೀವನವನ್ನು ಆರಂಭಿಸಿ, 1992ರಲ್ಲಿ ಮ್ಯಾಗ್ನಮ್ ಇಂಟರ್ ಗ್ರಾಫಿಕ್ಸ್ ಜಾಹೀರಾತು ಸಂಸ್ಥೆಯನ್ನು ಆರಂಭಿಸಿ, ಜಾಹೀರಾತು ಕ್ಷೇತ್ರದಲ್ಲಿ ದಿಗ್ಗಜನಾಗಿ ರಾಷ್ಟ್ರಮಟ್ಟದಲ್ಲಿ ಹೆಸರು ವಾಸಿಯಾಗಿದ್ದರು.
ಸಾವಿರಾರು ಮಂದಿಗೆ ಉದ್ಯೋಗದಾತರಾಗಿ ಸುಮಾರು 500ಕ್ಕಿಂತಲೂ ಹೆಚ್ಚು ಮಂದಿ ನುರಿತ ಕೆಲಸಗಾರರನ್ನು ತನ್ನ ಗಡಿಯಲ್ಲಿ ಪಳಗಿಸಿದ್ದರು.
1995ರಲ್ಲಿ ಈಗಿನ ವಿಧಾನ ಸಭಾ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ, ಕಾಗೇರಿಯವರು ಭಾರತೀಯ ಜನತಾ ಪಾರ್ಟಿಯ ರಾಜ್ಯ ಯುವ ಮೋರ್ಚಾದ ಅದ್ಯಕ್ಷರಾಗಿದ್ದ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದರು. ಪಿ.ಆರ್.ಐ ಎಸ್ ನ ಅದ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಇದನ್ನೂ ಓದಿ:ಬೈಕ್ 150 ಸಿಸಿಗಿಂತ ಹೆಚ್ಚಿನದ್ದಾಗಿದ್ದರೆ ಇನ್ಶುರೆನ್ಸ್ ಕ್ಲೈಮ್ ಆಗುವುದಿಲ್ಲವೇ..?
ರಾಷ್ಟ್ರ ಮಟ್ಟದ ನಾಯಕರಾದ ದಿವಂಗತ ಅಟಲ್ ಬಿಹಾರಿ ವಾಜಪೇಯಿ, ಸುಷ್ಮಾ ಸ್ವರಾಜ್, ಅಡ್ವಾಣಿ, ಮುರಳಿ ಮನೋಹರ್ ಜೋಷಿ ಅವರಂತಹ ಹಿರಿಯರ ಒಡನಾಟದಲ್ಲಿ ಸುಧಿರ್ ಘಾಟೆಯವರಿದ್ದರು.
ಸುಧೀರ್ ಘಾಟೆಯವರ ನಿಧನದಿಂದ, ಜಾಹಿರಾತು ಕ್ಷೇತ್ರದ ಹಿರಿಯ ಚೇತನವೊಂದನ್ನು ಕಳೆದುಕೊಂಡಂತಾಗಿದೆ.
ಇವರು ಅಗಲಿಕೆಯಿಂದಾದ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತನು ಅವರ ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.