ಎನ್ ಪಿ ಎಸ್ ನೌಕರರ ಸಮಸ್ಯೆ ಬಗೆಹರಿಸುವಲ್ಲಿ ರಾಜ್ಯಾಧ್ಯಕ್ಷ ಷಡಕ್ಷರಿ ವಿಫಲ: ಒಕ್ಕೂಟ ಆರೋಪ
Team Udayavani, Oct 24, 2021, 9:02 PM IST
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿಯವರು ತಾವು ಮೊದಲು ನೀಡಿದ ಭರವಸೆಯಂತೆ ಎನ್ ಪಿ ಎಸ್ ನೌಕರರ ಸಮಸ್ಯೆಗಳನ್ನು ಬಗೆ ಹರಿಸುವಲ್ಲಿ ಬದ್ಧತೆ ತೋರಿಸುತ್ತಿಲ್ಲ ಎಂದು ಕರ್ನಾಟಕ ನೌಕರರ ಒಕ್ಕೂಟದ ರಾಜ್ಯಾಧ್ಯಕ್ಷ ನಟರಾಜ್ ಹೇಳಿದ್ದಾರೆ.
ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಮಯದಲ್ಲಿ ಷಡಕ್ಷರಿಯವರು ನೀಡಿದ ಭರವಸೆಯಂತೆ ಎನ್ ಪಿ ಎಸ್ ನೌಕರರ ಸಮಸ್ಯೆ ಬಗ್ಗೆ ಇದುವರೆಗೂ ರಾಜ್ಯ ಸರ್ಕಾರದೊಂದಿಗೆ ಚರ್ಚೆ ನಡೆಸಲಿಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಆಪ್ತ ಸಹಾಯಕರಾಗಿ ಕೆಲಸ ನಿರ್ವಹಿಸಿರುವ ಇವರು ಒಂದು ದಿನ ಕೂಡ ಅವರ ಎನ್ ಪಿ ಎಸ್ ನೌಕರರ ಸಮಸ್ಯೆ ಚರ್ಚೆ ನಡೆಸಲಿಲ್ಲ. ಒಂದೆರಡು ಸಣ್ಣ ಪುಟ್ಟ ಯೋಜನೆ ಅನುಷ್ಠಾನಗೊಳಿಸಿದ್ದು ಬಿಟ್ಟರೆ ಬೇರೆ ಕೆಲಸ ಮಾಡುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದರು.
ಎನ್ ಪಿ ಎಸ್ ನೌಕರರ ಸಮಸ್ಯೆ ಮತ್ತು ಕೇಂದ್ರ ಸರ್ಕಾರದ ನೌಕರರಂತೆ ರಾಜ್ಯ ಸರ್ಕಾರಿ ನೌಕರರಿಗೆ ಸಮಾನ ವೇತನ ನೀಡುವುದು ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.
ಇದನ್ನೂ ಓದಿ:ಭೂಕುಸಿತ ಪತ್ತೆಗೆ ಹೊಸ ಸ್ವದೇಶಿ ತಂತ್ರಜ್ಞಾನ ಸಿದ್ಧ: ಐಐಟಿ ಮಂಡಿ ರೂಪಿಸಿರುವ ತಂತ್ರಜ್ಞಾನ
ಡಿಸೆಂಬರ್ 11, 12, ಎನ್.ಪಿ.ಎಸ್ ರದ್ದತಿ, ಸಮಾನ ವೇತನ, ನಿವೃತ್ತಿ ನಂತರದ ಸಮಸ್ಯೆಗಳ ನಿವಾರಣೆ ಕುರಿತು ಚರ್ಚೆ ನಡೆಸಲು ರಾಷ್ಟ್ರೀಯ ಮಟ್ಟದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಾಗಾರಕ್ಕೆ ದೇಶದ ವಿವಿಧ ಭಾಗಗಳಿಂದ 200 ನೌಕರರ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಒಕ್ಕೂಟದ ಮಾಜಿ ಅಧ್ಯಕ್ಷ ಮಠಪತಿ ಮಾತನಾಡಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಲ್ಲಿ ಅಂತರಿಕವಾಗಿ ಬಿನ್ನಭಿಪ್ರಾಯಗಳು ಇರುವುದು ನಿಜ. ರಾಜ್ಯಾಧ್ಯಕ್ಷರಾಗಿರುವ ಷಡಕ್ಷರಿಯವರಿಗೆ ಯಾವುದೇ ವಿಚಾರ ಕೇಳಿಸಿಕೊಳ್ಳುವ ಸಂಯಮತೆ ಇಲ್ಲವಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.