ಬೆಂಗಳೂರು ಉಪನಗರ ರೈಲು ಯೋಜನೆ ಹಂತ-1ಗೆ ಸಚಿವ ಸಂಪುಟ ಅನುಮೋದನೆ
Team Udayavani, Feb 16, 2017, 12:20 PM IST
ಬೆಂಗಳೂರು: ಬಹುನಿರೀಕ್ಷಿತ ಬೆಂಗಳೂರು ಉಪನಗರ ರೈಲು ಯೋಜನೆಯ “ಹಂತ-1 ಎ’ ಅಡಿ 10 ರೈಲ್ವೆ ಯೋಜನೆಗಳನ್ನು ಅನುಷ್ಠಾನಗೊಳಿಸಲು ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಬೆಂಗಳೂರು ಉಪನಗರ ರೈಲು ಯೋಜನೆಯ “ಹಂತ-1 ಎ’ ಅನುಷ್ಠಾನಕ್ಕೆ ಬೇಕಾದ 345 ಕೋಟಿ ರೂ. ಅನುದಾನ ಒದಗಿಸಲೂ ಸಂಪುಟ ಸಭೆ ಬುಧವಾರ ಅನುಮೋದನೆ ನೀಡಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಒಟ್ಟು 10,929 ಕೋಟಿ ರೂ. ಮೊತ್ತದ ಯೋಜನೆ ಇದಾಗಿದೆ. ರೈಟ್ಸ್ ಸಂಸ್ಥೆ ನೀಡಿದ ವರದಿ ಆಧರಿಸಿ ಈ ಯೋಜನೆ ರೂಪಿಸಲಾಗಿದೆ.
ಇದಲ್ಲದೆ, ಮಾಗಡಿ ರಸ್ತೆಯ ಭಿಕ್ಷುಕರ ಕೇಂದ್ರದ ಐದು ಎಕರೆ ಜಾಗದಲ್ಲಿ ಬಾಬು ಜಗಜೀವನರಾಂ ಸಂಶೋಧನಾ ಕೇಂದ್ರವನ್ನು 62 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡುವ ಬಗ್ಗೆಯೂ ಸಂಪುಟ ಸಬೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ.
ಯಾವ ಮಾರ್ಗಗಳಲ್ಲಿ ರೈಲು
ಬೆಂಗಳೂರು-ಮಂಡ್ಯ, ಬೆಂಗಳೂರು- ಯಶವಂತಪುರ, ಯಶವಂತಪುರ- ತುಮಕೂರು, ಯಶವಂತ ಪುರ- ಯಲಹಂಕ, ಯಲಹಂಕ- ಬೈಯಪ್ಪನಹಳ್ಳಿ, ಯಲಹಂಕ- ಚಿಕ್ಕಬಳ್ಳಾಪುರ, ಯಲಹಂಕ- ದೊಡ್ಡಬಳ್ಳಾಪುರ, ಸೋಲದೇವನಹಳ್ಳಿ- ಕುಣಿಗಲ್, ಬೆಂಗಳೂರು- ಬಂಗಾರಪೇಟೆ, ಬೈಯಪ್ಪನ ಹಳ್ಳಿ- ಹೊಸೂರು ಮಧ್ಯೆ ಉಪನಗರ ರೈಲು ಯೋಜನೆ ಕೈಗೆತ್ತಿಕೊಳ್ಳಲು ತೀರ್ಮಾನಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.