12 ಮಂದಿ ಖದೀಮರ ಸೆರೆ, 50 ಬೈಕ್ ಜಪ್ತಿ


Team Udayavani, Jul 22, 2023, 9:46 AM IST

12 ಮಂದಿ ಖದೀಮರ ಸೆರೆ, 50 ಬೈಕ್ ಜಪ್ತಿ

ನಗರದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಪ್ರತ್ಯೇಕ ಪ್ರಕರಣಗಳಲ್ಲಿ ಬರೋಬ್ಬರಿ 12 ಮಂದಿ ಕಳ್ಳರನ್ನು ಬಂಧಿಸಿ, ಬೈಕ್‌, ಆಟೋರಿಕ್ಷಾ, ಮೊಬೈಲ್‌ಗ‌ಳು, ಚಿನ್ನಾಭರಣ, ನಕಲಿ ಆಹಾರ ಪದಾರ್ಥಗಳನ್ನು ವಶಕ್ಕೆ ಪಡೆದಿದ್ದಾರೆ. ವಿವಿಧ ಪ್ರದೇಶಗಳಲ್ಲಿ ಕಳವು ಮಾಡಿದ್ದ 50ಕ್ಕೂ ಅಧಿಕ ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಸಾರ್ವಜನಿಕರನ್ನು ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ ಬೈಕ್‌, ಮೊಬೈಲ್‌ ಕದ್ದಿದ್ದ ಪ್ರಕರಣವನ್ನು ಬಾಣಸವಾಡಿ ಪೊಲೀಸರು ಭೇದಿಸಿದ್ದಾರೆ. ಮತ್ತೂಂದು ಘಟನೆಯಲ್ಲಿ ಅವಧಿ ಮೀರಿದ ವಸ್ತುಗಳನ್ನು ಅರ್ಧ ಬೆಲೆಗೆ ಮಾರುತ್ತಿದ್ದ ಆರೋಪಿಯನ್ನು ಸೆರೆಹಿಡಿದು 50 ಲಕ್ಷ ರೂ.ಮೌಲ್ಯದ ದಿನಬಳಕೆ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. 

ಬೆಂಗಳೂರು: ಉತ್ತರ ವಿಭಾಗ ಮತ್ತು ದಕ್ಷಿಣ ವಿಭಾಗ ಪೊಲೀಸರ ಕಾರ್ಯಾಚರಣೆಯಲ್ಲಿ ಬೈಕ್‌ ಕಳವು ಮತ್ತು ಮೊಬೈಲ್‌ ಸುಲಿಗೆ ಮಾಡುತ್ತಿದ್ದ ಮೂರು ಪ್ರತ್ಯೇಕ ಪ್ರಕರಣಗ ಳಲ್ಲಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. 24 ದ್ವಿಚಕ್ರವಾಹನ ಗಳನ್ನು ವಶಕ್ಕೆ ಪಡೆಯಲಾಗಿದೆ.

ಬಸವನಗುಡಿ ಠಾಣೆ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬೈಕ್‌ ಮತ್ತು ಮೊಬೈಲ್‌ ಸುಲಿಗೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಸ್ಥಳೀಯ ನಿವಾಸಿಗಳಾದ ಮಿಥುನ್‌ (21), ಜಮೀರ್‌(24), ಅರ್ಫನ್‌(26) ಹಾಗೂ ಸಾಗರ್‌ ಅಲಿಯಾಸ್‌ ಶಕ್ತಿ ವೇಲು( 27) ಬಂಧಿತರು.

ಆರೋಪಿಗಳಿಂದ 11 ಲಕ್ಷ ರೂ. ಮೌಲ್ಯದ 11 ದ್ವಿಚಕ್ರ ವಾಹನಗಳು, 24 ಮೊಬೈಲ್‌ಗ‌ಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಇತ್ತೀಚೆಗೆ ಠಾಣೆ ವ್ಯಾಪ್ತಿಯಲ್ಲಿ ಅಪರಾಧ ಕೃತ್ಯ ಎಸಗಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ಠಾಣಾಧಿಕಾರಿ ಎಂ.ಎಲ್‌. ಸುಬ್ರಹ್ಮಣ್ಯಸ್ವಾಮಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಬೈಕ್‌ ಕಳ್ಳನ ಬಂಧನ: ಮತ್ತೂಂದು ಪ್ರಕರಣದಲ್ಲಿ ಲಗ್ಗೆರೆಯ ಚೌಡೇಶ್ವರಿನಗರದಲ್ಲಿ ದ್ವಿಚಕ್ರ ವಾಹನ ಕಳವು ಮಾಡಿದ್ದ ಮಲ್ಲತ್ತಹಳ್ಳಿ ನಿವಾಸಿ ಚಂದ್ರಕಾಂತ್‌ ಅಲಿಯಾಸ್‌ ಗುಂಡ(32) ಎಂಬಾತನನ್ನು ನಂದಿನಿ ಲೇಔಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಇತ್ತೀಚೆಗೆ ಠಾಣೆ ವ್ಯಾಪ್ತಿಯಲ್ಲಿ ಬೈಕ್‌ ಕಳವು ಮಾಡಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ.

ಆತನಿಂದ 8.5 ಲಕ್ಷ ರೂ. ಮೌಲ್ಯದ 13 ಬೈಕ್‌ ಹಾಗೂ 1 ಆಟೋರಿಕ್ಷಾವನ್ನು ವಶಕ್ಕೆ ಪಡೆಯಲಾಗಿದೆ. ಆತನ ಬಂಧನದಿಂದ ಚಂದ್ರಾ ಲೇಔಟ್‌, ಆಡುಗೋಡಿ, ಜ್ಞಾನಭಾರತಿ, ನಂದಿನಿ ಲೇಔಟ್‌, ಕಗ್ಗಲೀಪುರ ಠಾಣೆಗಳಲ್ಲಿ ದಾಖಲಾಗಿದ್ದ ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು. ಠಾಣಾಧಿಕಾರಿ ವೆಂಕಟೇಗೌಡ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಚಿನ್ನ ದ ಸರ ಸುಲಿಗೆಗೆ ಯತ್ನ : 

ಬೆಂಗಳೂರು: ರಸ್ತೆಯಲ್ಲಿ ಮಹಿಳೆಯ ಚಿನ್ನದ ಸರ ಸುಲಿಗೆ ಮಾಡಲು ಪ್ರಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ನೀಲಸಂದ್ರದ ವಿಜಿತ್‌ (30) ಬಂಧಿತ ಆರೋಪಿ. ಈತನ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ಸುಲಿಗೆ ಹಾಗೂ ಕಳವು ಪ್ರಕರಣ ಗಳು ದಾಖಲಾಗಿವೆ.

ಇತ್ತೀಚೆಗೆ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರ ಸರ ಕಳವು ಮಾಡಲು ಯತ್ನಿಸಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿ ಯನ್ನು ಬಂಧಿಸಲಾಗಿದೆ. ಆರೋಪಿಯಿಂದ 5.5 ಲಕ್ಷ ರೂ. ಮೌಲ್ಯದ 8 ವಿವಿಧ ಕಂಪನಿಯ ದ್ವಿಚಕ್ರ ವಾಹನಗಳು ಹಾಗೂ 8 ಮೊಬೈಲ್‌ಗ‌ಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಯ ಮಾಹಿತಿ ಮೆರೆಗೆ ಹೆಬ್ಟಾಳ ಪೊಲೀಸ್‌ ಠಾಣೆಯ 1 ಹಾಗೂ ಬಾಣಸವಾಡಿ ಪೊಲೀಸ್‌ ಠಾಣೆಯ 2 ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು. ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಾಕು ತೋರಿಸಿ ಬೈಕ್‌ ಕಸಿದಿದ್ದವರ ಸೆರೆ 

ಬೆಂಗಳೂರು: ಮಾರಕಾಸ್ತ್ರಗಳನ್ನು ತೋರಿಸಿ ಸಾರ್ವಜನಿಕರ ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಠಾಣೆ ವ್ಯಾಪ್ತಿಯ ಜೈ ಭಾರತ್‌ನಗರ ಬಸ್‌ ನಿಲ್ದಾಣ ಸಮೀಪದಲ್ಲಿ ಇಬ್ಬರು ವ್ಯಕ್ತಿಗಳಿಗೆ ಮಾರಕಾಸ್ತ್ರ ತೋರಿಸಿ ಸುಲಿಗೆ ಮಾಡುತ್ತಿದ್ದ ಕಮ್ಮನಹಳ್ಳಿಯ ಪ್ರಕಾಶ್‌(32), ಬೈಯಪ್ಪನಹಳ್ಳಿಯ ರವೀಂದ್ರ(30) ಮತ್ತು ಸತ್ಯನಗರದ ವಿಜಯ್‌(29)ನನ್ನು ಬಂಧಿಸಲಾಗಿದೆ.

ಆರೋಪಿಗಳಿಂದ 1 ಲಕ್ಷ ರೂ. ಮೌಲ್ಯದ ವಿವಿಧ ಕಂಪನಿಯ 2 ಬೈಕ್‌ ಗಳು, 1 ಮೊಬೈಲ್‌ ಹಾಗೂ ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಜುಲೈ 15ರಂದು ಬಾಣಸವಾಡಿ ವ್ಯಾಪ್ತಿಯ ಜೈಭಾರತ್‌ ನಗರ ಬಸ್‌ ನಿಲ್ದಾಣ ಮತ್ತು ಮುಕುಂದ ಚಿತ್ರಮಂದಿರದ ಬಳಿ ರಸ್ತೆಯಲ್ಲಿ ಈ ಮೂವರು ಆರೋಪಿಗಳು ಇಬ್ಬರನ್ನು ಅಡ್ಡಗಟ್ಟಿ ಚಾಕು ತೋರಿಸಿ, ಅವರಿಂದ 2 ದ್ವಿಚಕ್ರ ವಾಹನಗಳು ಮತ್ತು 1 ಮೊಬೈಲ್‌ ಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಈ ಸಂಬಂಧ ದೂರು ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Bhargavastra: ಡ್ರೋನ್‌ ದಾಳಿ ತಡೆಗೆ ಸೇನಾಗೆ ಭಾರ್ಗವಾಸ್ತ್ರ

Bhargavastra: ಡ್ರೋನ್‌ ದಾಳಿ ತಡೆಗೆ ಸೇನಾಗೆ ಭಾರ್ಗವಾಸ್ತ್ರ

2-saif

Saif Ali Khan: ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಚಾಕು ಇರಿತ; ಆಸ್ಪತ್ರೆಗೆ ದಾಖಲು

Sathish-jarakhoili

Congress: ಪಕ್ಷಕ್ಕೆ ಪೂರ್ಣ ಪ್ರಮಾಣ ಅಧ್ಯಕ್ಷರು ಬೇಕು: ಸಚಿವ ಸತೀಶ್‌ ಜಾರಕಿಹೊಳಿ

UDp-Nagarasabhe

Proposal: ಮಹಾನಗರ ಪಾಲಿಕೆ ಆಗಿ ಉಡುಪಿ ನಗರಸಭೆ: ಪ್ರಸ್ತಾವನೆಗೆ ಸೂಚನೆ

Ramesh-BYV

BJP Politics: ಮಗನ ಪರ ನಿಲ್ಲಬೇಡಿ: ಬಿಎಸ್‌ವೈಗೆ ರಮೇಶ್‌ ಜಾರಕಿಹೊಳಿ; ಬಿವೈವಿ ಆಕ್ರೋಶ

money-Currency

Micro Finance: ಮೀಟರ್‌ ಬಡ್ಡಿ ಕಿರುಕುಳ: ಊರೇ ತೊರೆದ 100ಕ್ಕೂ ಹೆಚ್ಚು ಕುಟುಂಬ

High–Gov-logo

Rule of Safety: ಖಾಸಗಿ ಅಷ್ಟೇ ಅಲ್ಲ, ಸರಕಾರಿ ಶಾಲೆಗಳಿಗೂ ʼಅಗ್ನಿ ಸುರಕ್ಷೆʼ ಬಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJp-pro-cow2

Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

Cow-zammer

Chamarajpete: ಕೆಚ್ಚಲು ಕೊಯ್ದ ಕೇಸ್‌; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್‌

Surya-jaiShankar

US Consulate: ಬೆಂಗಳೂರಲ್ಲಿ ಜ.17ಕ್ಕೆ ಅಮೆರಿಕ ದೂತಾವಾಸ ಕಚೇರಿ ಆರಂಭ

Bengaluru: ಬಿಬಿಸಿಯಲ್ಲಿ ಬೆಂಕಿ ಅವಘಡ: 152 ಕೋಟಿ ನಷ್ಟ

Bengaluru: ಬಿಬಿಸಿಯಲ್ಲಿ ಬೆಂಕಿ ಅವಘಡ: 152 ಕೋಟಿ ನಷ್ಟ

2

Bengaluru: ಮಗು ಮೇಲೆ ಲೈಂಗಿಕ ದೌರ್ಜನ್ಯ, ಹ*ತ್ಯೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Bhargavastra: ಡ್ರೋನ್‌ ದಾಳಿ ತಡೆಗೆ ಸೇನಾಗೆ ಭಾರ್ಗವಾಸ್ತ್ರ

Bhargavastra: ಡ್ರೋನ್‌ ದಾಳಿ ತಡೆಗೆ ಸೇನಾಗೆ ಭಾರ್ಗವಾಸ್ತ್ರ

Indian Navy: ಭಾರತೀಯ ನೌಕಾಪಡೆಗೆ ದೇಶಿ ನಿರ್ಮಿತ ತ್ರಿವಳಿ ಬಲ

Indian Navy: ಭಾರತೀಯ ನೌಕಾಪಡೆಗೆ ದೇಶಿ ನಿರ್ಮಿತ ತ್ರಿವಳಿ ಬಲ

2-saif

Saif Ali Khan: ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಚಾಕು ಇರಿತ; ಆಸ್ಪತ್ರೆಗೆ ದಾಖಲು

Sathish-jarakhoili

Congress: ಪಕ್ಷಕ್ಕೆ ಪೂರ್ಣ ಪ್ರಮಾಣ ಅಧ್ಯಕ್ಷರು ಬೇಕು: ಸಚಿವ ಸತೀಶ್‌ ಜಾರಕಿಹೊಳಿ

UDp-Nagarasabhe

Proposal: ಮಹಾನಗರ ಪಾಲಿಕೆ ಆಗಿ ಉಡುಪಿ ನಗರಸಭೆ: ಪ್ರಸ್ತಾವನೆಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.