ಭಾರಿ ಮಳೆಗೆ ಬೆದರಿದ ಬೆಂಗಳೂರು


Team Udayavani, Sep 3, 2017, 11:12 AM IST

blore.jpg

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಶುಕ್ರವಾರದಿಂದ ಬಿಡುವಿಲ್ಲದೆ ಸುರಿಯುತ್ತಿರುವ ಮಳೆಯಿಂದ ನಗರದ ಹಲವು ಭಾಗಗಳು ಜಲಾವೃತವಾಗಿ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ.

ಶುಕ್ರವಾರ ತಡ ರಾತ್ರಿ ಆರಂಭವಾಗಿ ಶನಿವಾರವಿಡೀ ಸುರಿದ ಮಳೆಯಿಂದಾಗಿ ನಗರದ ಜನಜೀವನ
ಅಸ್ತವ್ಯಸ್ಥವಾಗಿದೆ. ಕಳೆದೆರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ನಗರದ ಕೆಲವು ಕೆರೆಗಳು ತುಂಬಿ ಹರಿಯುತ್ತಿದ್ದು, ಇನ್ನು ಕೆಲವು ಕೆರೆಗಳ ಕಟ್ಟೆ ಒಡೆದಿವೆ. ಪರಿಣಾಮ ಕೆರೆಯ ಸುತ್ತಮುತ್ತಲಿನ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಸಮಸ್ಯೆ ಸೃಷ್ಟಿಯಾಗಿದೆ.

ನಗರದ ಪ್ರಮುಖ ರಸ್ತೆಗಳು ಹಾಗೂ ಅಂಡರ್‌ ಪಾಸ್‌ ಗಳಲ್ಲಿ ನೀರು ತುಂಬಿರುವುದರಿಂದ ವಾಹನಗಳು ನೀರಿನಲ್ಲಿ ಮುಳುಗಡೆಯಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದರೊಂದಿಗೆ 40ಕ್ಕೂ ಹೆಚ್ಚು ಕಡೆಗಳಲ್ಲಿ ಮರ ಹಾಗೂ ಮರದ ಕೊಂಬೆಗಳು ಉರುಳಿದರಿಂದ ಸಂಚಾರ ದಟ್ಟಣೆ
ಉಂಟಾಗಿತ್ತು.

ತಡರಾತ್ರಿ ಗುಡುಗು – ಮಿಂಚು ಸಹಿತವಾಗಿ ಆರಂಭವಾದ ಮಳೆ ಬೆಳಗ್ಗೆ 8 ಗಂಟೆಯವರೆಗೆ ಸುರಿಯಿತು. ಜತೆಗೆ ಮೋಡ ಕವಿದ ವಾತಾವರಣ ಮುಂದುವರಿದ ಹಿನ್ನೆಲೆಯಲ್ಲಿ ಜನರು ಮನೆಗಳಿಂದ ಹೊರ ಬರಲು ಯೋಚಿಸಬೇಕಾದ ಪರಿಸ್ಥಿತಿ ನಿರ್ಮಾಣ ವಾಗಿತ್ತು. ಬೃಹತ್‌ ಅಪಾರ್ಟ್‌ಮೆಂಟ್‌ಗಳ ತಳಮಹಡಿಗಳು ಸಂಪೂರ್ಣ ಜಲಾವೃತವಾಗಿ ನಿಲುಗಡೆ ಮಾಡಿದ್ದ ವಾಹನಗಳು ನೀರಿನಲ್ಲಿ
ಮುಳುಗಿದ್ದು, ನಿವಾಸಿಗಳು ಬಿಲ್ಡರ್‌ಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಕೆಟ್‌ ಹಿಡಿದ ನಿವಾಸಿಗಳು: ಶನಿವಾರ ಬೆಳಗ್ಗೆ 9ರ ವೇಳೆಗೆ ಕೆಲವು ಕಡೆಗಳಲ್ಲಿ ಮಳೆ ನಿಂತು ನೀರಿನ ಪ್ರಮಾಣ ಕಡಿಮೆ ಯಾಗುತ್ತಿದ್ದಂತೆ ಬಕೆಟ್‌, ಪೊರಕೆ ಹಿಡಿದ ನಿವಾಸಿಗಳು ಮನೆಗಳಲ್ಲಿನ ನೀರು ಹೊರಹಾಕುವ ಕಾರ್ಯದಲ್ಲಿ ತೊಡಗಿದರು. ಇನ್ನು ಅಪಾರ್ಟ್‌ಮೆಂಟ್‌ನ ಪಾರ್ಕಿಂಗ್‌ ಸೆಲ್ಲರ್‌
ಗಳಲ್ಲಿ ತುಂಬಿದ್ದ ನೀರನ್ನು ಯಂತ್ರಗಳನ್ನು ಬಳಸಿ ಹೊರಹಾ ಕುವಲ್ಲಿ ಅಪಾರ್ಟ್‌ಮೆಂಟ್‌ ಮಾಲೀಕರು ನಿರತರಾಗಿದ್ದರು.

ಮನೆ ಖಾಲಿ ಖಾಲಿ: ಕೆಲ ದಿನಗಳಿಂದ ನಿರಂತರವಾಗಿ ಸುರಿದ ಮಳೆಯಿಂದ ನೀರು ಮನೆಗಳಿಗೆ ನುಗ್ಗುತ್ತಿದೆ. ಪರಿಣಾಮ ಬೊಮ್ಮನಹಳ್ಳಿ ವಲಯದ ಹಲವಾರು ಭಾಗಗಳು ಜಲಾವೃತಗೊಂಡಿವೆ. ಕಳೆದ ಎರಡು ಮೂರು ದಿನಗಳಿಂದ ಮನೆಗಳಿಗೆ ನೀರು ನುಗ್ಗುತ್ತಿರುವುದರಿಂದ ನಿವಾಸಿಗಳು ಮನೆಗಳಲ್ಲಿ ಎಲ್ಲ ವಸ್ತುಗಳನ್ನು ಮನೆಯ ಎತ್ತರದ ಪ್ರದೇಶಗಳಿಗೆ ವರ್ಗಾಹಿಸಿದ್ದಾರೆ.

ಸಾಂಕ್ರಾಮಿಕ ರೋಗದ ಭೀತಿ: ಕೋರಮಂಗಲ ಸೇರಿದಂತೆ ಹಲವಾರು ಭಾಗಗಳಲ್ಲಿ ಮನೆಗಳಿಗೆ ನೀರು ನುಗ್ಗಿವೆ. ಇದರೊಂದಿಗೆ ಚರಂಡಿ ಹಾಗೂ ಕಾಲುವೆಗಳಲ್ಲಿನ ನೀರು ವಸತಿ ಪ್ರದೇಶಗಳಿಗೆ
ಬಂದಿರುವ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಆತಂಕಕ್ಕೆ ಸಾರ್ವಜನಿಕರು ಒಳಗಾಗಿದ್ದಾರೆ.

ಕೂಡಲೇ ಬಿಬಿಎಂಪಿ ವತಿಯಿಂದ ಸೊಳ್ಳೆಗಳ ನಿಯಂತ್ರಣ ಸೇರಿದಂತೆ ಇನ್ನಿತರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜನರು ಒತ್ತಾಯಿಸಿದ್ದಾರೆ.

ಪರಿಹಾರ ಕಾರ್ಯಕ್ಕೆ ಐದು ತಂಡಗಳ ರಚನೆ: ನಗರದಲ್ಲಿ ಮಳೆಯಿಂದಾಗಿ ಆಗುತ್ತಿರುವ ಅನಾಹುತಗಳ ತಡೆಗೆ ಬಿಬಿಎಂಪಿ ವತಿಯಿಂದ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಐದು ತಂಡಗಳನ್ನು ರಚಿಸಲಾಗಿದ. ಸಾರ್ವಜನಿಕರ ಸಹಾಯಕ್ಕೆ ಧಾವಿಸಲಿರುವಅನಾಹುತ ಸ್ಥಳಗಳಿಗೆ ಭೇಟಿ ನೀಡಲಿರುವ ತಂಡಗಳು ಪರಿಹಾರ ಕಾರ್ಯಕ್ಕೆ ಮುಂದಾಗಲಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ

1-qweeqw

Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!

1-qweewqe

TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ

1-ewewqe

Deve Gowda; ನನಗೀಗ ವಯಸ್ಸು 92.. ಮೊಮ್ಮಗ ಗೆದ್ದ ನಂತರ ಮನೆಯಲ್ಲಿ ಮಲಗುವುದಿಲ್ಲ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

23-bng

Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?

22-bng

Bengaluru: ಏರ್ಪೋರ್ಟ್‌ ಟಿ-2ಗೆ ವರ್ಟಿಕಲ್‌ ಗಾರ್ಡನ್‌ ರಂಗು

21-bng

Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ

20-flipama

Bengaluru: 19 ಕಡೆ ಫ್ಲಿಪ್‌ ಕಾರ್ಟ್‌, ಅಮೆಜಾನ್‌ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ

19-bng

Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

POlice

Kasaragod: ರೈಲುಗಾಡಿಗೆ ಕಲ್ಲು ತೂರಾಟ; ಪ್ರಯಾಣಿಕನಿಗೆ ಗಾಯ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

de

Malpe ಸೀವಾಕ್‌ ಸಮುದ್ರತೀರದಲ್ಲಿ ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.