Arrestted:10 ವರ್ಷಗಳಿಂದ ನಗರದಲಿದ್ಲ ಬಾಂಗ್ಲಾದೇಶ ಪ್ರಜೆ ಬಂಧನ
Team Udayavani, Oct 29, 2024, 9:53 AM IST
ಬೆಂಗಳೂರು: ನಗರದಲ್ಲಿ 10 ವರ್ಷಗಳಿಂದ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ದೇಶದ ಪ್ರಜೆಯನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಾಡುಗೋಡಿ ಸಮೀಪದ ಚಿಕ್ಕನಹಳ್ಳಿ ನಿವಾಸಿ ರಂಜಾನ್ ಶೇಕ್ (38) ಬಂಧಿತ. 13 ವರ್ಷಗಳ ಹಿಂದೆ ಬಾಂಗ್ಲಾದೇಶದಿಂದ ಭಾರತಕ್ಕೆ ಬಂದಿದ್ದ ರಂಜಾಕ್ ಶೇಕ್, ಪಶ್ಚಿಮ ಬಂಗಾಳದಲ್ಲಿ ಜನಿಸಿರುವುದಾಗಿ ನಕಲಿ ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಸೇರಿ ಹಲವು ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು, ಬಳಿಕ 10 ವರ್ಷಗಳ ಹಿಂದೆ ನಗರಕ್ಕೆ ಬಂದು ಅಕ್ರಮವಾಗಿ ನೆಲೆಸಿದ್ದ. ರಾಜ್ಯ ಗುಪ್ತಚರ ವಿಭಾಗದ ಮಾಹಿತಿ ಆಧರಿಸಿ ಕಾರ್ಯಾ ಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದು, ನಕಲಿ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಆರೋಪಿ ರಂಜಾನ್ ಶೇಕ್ ಈ ಹಿಂದೆ ಬಾಂಗ್ಲ ದೇಶದಲ್ಲಿ ಯುವತಿಯನ್ನು ಮದುವೆಯಾಗಿದ್ದು, ಬಳಿಕ ಆಕೆಯನ್ನು ಅಲ್ಲಿಯೇ ಬಿಟ್ಟು ಅಕ್ರಮವಾಗಿ ಭಾರತಕ್ಕೆ ಬಂದಿದ್ದಾನೆ. ಈ ಸಂಬಂಧ ಆತನ ಪತ್ನಿ ಬಾಂಗ್ಲಾದೇಶದಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.
ಗುಜರಿ ವ್ಯಾಪಾರ: ಆರೋಪಿ ಅಕ್ರಮವಾಗಿ ಭಾರತಕ್ಕೆ ಬಂದು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕೊಂಡು ಮತ್ತೂಂದು ಯುವತಿಯನ್ನು ಮದುವೆ ಯಾಗಿ ಬೆಂಗಳೂರಿನ ಚಿಕ್ಕನ ಹಳ್ಳಿಯಲ್ಲಿ ವಾಸವಾಗಿದ್ದ. ಜೀವನ ನಿರ್ವಹಣೆಗಾಗಿ ಗುಜರಿ ವ್ಯಾಪಾರ ಮಾಡಿಕೊಂಡಿದ್ದ. ಈ ಹಿಂದೆ ಕಾರ್ಮಿಕ ನೊಬ್ಬನ ಆತ್ಮಹತ್ಯೆ ಪ್ರಕರಣ ಸಂಬಂಧ ಈತನನ್ನು ಬಂಧಿಸಲಾಗಿತ್ತು. ಬಳಿಕ ಆರೋಪಿ ಜೈಲಿನಿಂದ ಬಿಡುಗಡೆ ಗೊಂಡಿದ್ದ ಎಂಬುದು ವಿಚಾರಣೆಯಿಂದ ಗೊತ್ತಾಗಿದೆ. ಇನ್ನು ಆರೋಪಿ ರಂಜಾನ್ ಶೇಕ್ ಮದುವೆಯಾಗಿರುವ ಈತನ ಪತ್ನಿ ಬಾಂಗ್ಲಾ ಪ್ರಜೆಯೇ ಅಥವಾ ಭಾರತೀಯ ಪ್ರಜೆಯೇ ಎಂಬುದು ಹೆಚ್ಚಿನ ತನಿಖೆಯಿಂದ ತಿಳಿದು ಬರಬೇಕಿದೆ. ಸದ್ಯಕ್ಕೆ ಆರೋಪಿ ರಂಜಾನ್ ಶೇಕ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ 3 ದಿನಗಳ ಕಾಲ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ಘಟನೆ ಸಂಬಂಧ ಕಾಡುಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.