5.40 ಕೋಟಿ ಮೌಲ್ಯದ ಅಮಾನ್ಯ ನೋಟು ವಶ
Team Udayavani, Sep 26, 2017, 11:28 AM IST
ಬೆಂಗಳೂರು: ಅಮಾನ್ಯಗೊಂಡಿರುವ 500 ರೂ. ಹಾಗೂ 1000 ರೂ. ಮುಖಬೆಲೆಯ ನೋಟುಗಳನ್ನು ಕೊಂಡೊಯ್ಯುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಮಹಾಲಕ್ಷ್ಮಿ ಲೇಔಟ್ ಠಾಣೆ ಪೊಲೀಸರು, 5.40 ಕೋಟಿ ರೂ. ಮೌಲ್ಯದ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.
ಜಯನಗರದ ಮೊಹಮ್ಮದ್ ಅಸ್ಲಂ (38), ಬಳ್ಳಾರಿಯ ಕಾಳಿಂಗಪ್ಪ (39) ಮತ್ತು ಕಾರು ಚಾಲಕ ಮಂಜುನಾಥ್ (28) ಬಂಧಿತರು. ಮಹಾಲಕ್ಷ್ಮೀ ಲೇಔಟ್ ಈಜುಕೊಳದ ಬಳಿಯ ಸುಲಭ ಶೌಚಾಲಯದ ಬಳಿ ಅಮಾನ್ಯಗೊಂಡಿರುವ ನೋಟುಗಳನ್ನು ಕಾರಿನಲ್ಲಿ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಪೊಲೀಸರು, ಕಾರನ್ನು ತಡೆದು ಪರಿಶೀಲಿಸಿದಾಗ 5.40 ಕೋಟಿ ರೂ. ಮೌಲ್ಯದ ಅಮಾನ್ಯ ನೋಟುಗಳು ಪತ್ತೆಯಾಗಿವೆ.
ಹಣ ಬದಲಾವಣೆಗಾಗಿ ನೋಟುಗಳನ್ನು ಸಾಗಿಸುತ್ತಿದ್ದ ಬಗ್ಗೆ ಪ್ರಾಥಮಿಕ ವಿಚಾರಣೆಯಲ್ಲಿ ತಿಳಿದುಬಂದಿದೆ. ಹಣ ಯಾರಿಗೆ ಸೇರಿದ್ದು, ಎಲ್ಲಿಗೆ ಕೊಂಡೊಯ್ಯುತ್ತಿದ್ದರು ಎಂಬ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
M. Chinnaswamy ಸ್ಟಾಂಡ್ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.